ಅಭಿಪ್ರಾಯ / ಸಲಹೆಗಳು

ವಿರಾಜಪೇಟೆ ಕ್ಷೇತ್ರದ ಶಾಸಕ ರಿಗೆ ದೂರವಾಣಿ ಕರೆ ಮಾಡಿ ಎಸಿಬಿ ದಾಳಿ ನಡೆಸುವುದಾಗಿ ಬೆದರಿಕೆ ಹಾಕಿ ಹಣ ಕೇಳಿ ವಂಚನೆಗೆ ಯತ್ನಿಸಿದ  ಪ್ರಕರಣದ ಆರೋಪಿಯನ್ನು ಬಂದಿಸುವಲ್ಲಿ ಮಡಿಕೇರಿ ನಗರ ವೃತ್ತದ ಮಡಿಕೇರಿ ನಗರ ಮತ್ತು ಸಿದ್ದಾಪುರ ಠಾಣೆಯ ಪೊಲೀಸ್‍ ಅಧಿಕಾರಿ ಮತ್ತು ಸಿಬ್ಬಂದಿಯವರು ಯಶಸ್ವಿಯಾಗಿದ್ದಾರೆ.

ರಸ್ತೆ ಅಪಘಾತ ಪ್ರಕರಣ

          ದಿನಾಂಕ 11-01-2022 ರಂದು ಕುಶಾಲನಗರ ತಾಲ್ಲೂಕು ರಂಗಸಮುದ್ರ ಗ್ರಾಮದ ವಿರೂಪಾಕ್ಷಪುರ ಬಳಿ ಮುಖ್ಯ ರಸ್ತೆಯಲ್ಲಿ ಎಂಎಚ್-06-ಬಿಯು-4022 ರ ಕಾರನ್ನು ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಕೆಎ-12-ಪಿ-6476 ರ ಬೊಲೆರೋ ವಾಹನಕ್ಕೆ ಡಿಕ್ಕಿಪಡಿಸಿದ ಪರಿಣಾಮ ಶಿಯಾಬ್ ಎಂಬ ಚಾಲಕ ಗಾಯಗೊಂಡಿದ್ದು ಡಿಕ್ಕಿಪಡಿಸಿದ ನಂತರ ಕಾರನ್ನು ಚಾಲಕ ನಿಲ್ಲಿಸದೇ ಹೋಗಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಕುಶಾಲನಗರ ಸಂಚಾರ ಠಾಣೆ ಪೊಲಿಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ರಸ್ತೆ ಅಪಘಾತ, ಮಹಿಳೆ ಸಾವು.

                ದಿನಾಂಕ: 12-01-2022 ರಂದು ಮಡಿಕೇರಿ ತಾಲ್ಲೂಕು ಕಾಟಕೇರಿ ಗ್ರಾಮದ ಬಳಿ ಹೆದ್ದಾರಿ ರಸ್ತೆಯಲ್ಲಿ ಪಿಬಿ-65-ಎಡಿ-9579 ರ ಲಾರಿಯನ್ನು ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಎದುರುಗಡೆಯಿಂದ ಬರುತ್ತಿದ್ದ ಕೆಎ-19-ಎಂಜಿ-4753 ರ ಕಾರಿಗೆ ಡಿಕ್ಕಿಪಡಿಸಿದ ಪರಿಣಾಮ ಕಾರಿನಲ್ಲಿದ್ದ ಮಹಿಳೆಯೊಬ್ಬರು ಮೃತಪಟ್ಟರು ಉಳಿದ ಮೂವರು ಪ್ರಯಾಣೀಕು ಗಾಯಗೊಂಡಿದ್ದು ಈ ಬಗ್ಗೆ ಕಾರು ಚಾಲಕ ಪ್ರವಿಣ್ ಎಂಬುವವರು ನೀಡಿದ ಪುಕಾರಿನ ಮೇರೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲಿಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಕಳವು ಪ್ರಕರಣ

                ದಿನಾಂಕ: 12-01-2022 ರಂದು ಪೊನ್ನಂಪೇಟೆ ತಾಲ್ಲೂಕು ಅತ್ತೂರು ಗ್ರಾಮದ ನಿವಾಸಿ ಲಲಿತ ಎಂಬುವವರ ಮನೆಯ ಬಾಗಿಲಿಗೆ ಹಾಕಿದ್ದ ಬೀಗವನ್ನು ಯಾರೋ ಕಳ್ಳರು ಮುರಿದು ಒಳನುಗ್ಗಿ ಬೀರುವಿನ ಕೀಯನ್ನು ತೆಗೆದುಕೊಂಡು ಬೀರುವಿನಲ್ಲಿಟ್ಟಿದ್ದ ₹. 21,000 ನಗದನ್ನು ಕಳವುಮಾಡಿಕೊಂಡು ಹೋಗಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಗೋಣಿಕೊಪ್ಪ ಠಾಣೆ ಪೊಲಿಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 14-01-2022 11:54 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080