ಅಭಿಪ್ರಾಯ / ಸಲಹೆಗಳು

ರಸ್ತೆ ಅಪಘಾತ ಪ್ರಕರಣ

            ದಿನಾಂಕ: 11-05-2022 ರಂದು ಪೊನ್ನಂಪೇಟೆ ತಾಲ್ಲೂಕು ತಿತಿಮತಿ ಗ್ರಾಮದ ಬಳಿ ಮುಖ್ಯ ರಸ್ತೆಯಲ್ಲಿ ಯಾವುದೋ ಒಂದು ವಾಹನವನ್ನು ಅದರ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಚಾತ ಎಂಬುವವರಿಗೆ ಡಿಕ್ಕಿಪಡಿಸಿ ವಾಹನವನ್ನು ನಿಲ್ಲಿಸದೇ ಹೋಗಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಗೋಣಿಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಅರಣ್ಯ ಇಲಾಖೆ ನೌಕರನ ಮೇಲೆ ಹಲ್ಲೆ ಪ್ರಕರಣ    

        ದಿನಾಂಕ: 11-05-2022 ರಂದು ಮಡಿಕೇರಿ ತಾಲ್ಲೂಕು ಗಾಳಿಬೀಡು ಗ್ರಾಮದ ಅರಣ್ಯ ಶಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅರಣ್ಯ ವೀಕ್ಷಕ ಅಣ್ಣಪ್ಪ ರೈ ಎಂಬುವವರು ಅರಣ್ಯ ರಕ್ಷಕರಾದ ಮೋಹನ್‌ ಕುಮಾರ್‌ ಎಂಬುವವರೊಂದಿಗೆ ನಡೆದುಕೊಂಡು ಹೋಗುತ್ತಿರುವಾಗ ಗಾಳಿಬೀಡು ಗ್ರಾಮದ ನಿವಾಸಿ ತಿಮ್ಮಯ್ಯ ಎಂಬುವವರು ದಾರಿ ತಡೆದು ಅವರಿಗೆ ಸೇರಿದ ಜಾಗದಲ್ಲಿ ಕಸವಿಲೇವಾರಿಗೆ  ಪಂಚಾಯಿತಿ ವತಿಯಿಂದ ಜಾಗ ಗುರುತಿಸುವಿಕೆ ಬಗ್ಗೆ ದ್ವೇಷದಿಂದ ಕೊಲೆ ಮಾಡುವ ಉದ್ದೇಶದಿಂದ ಏಕಾಏಕಿ ಕತ್ತಿಯಿಂದ ಹಲ್ಲೆ ಮಾಡಿ ಗಾಯಪಡಿಸಿದ್ದು ಈ ಬಗ್ಗೆ ನೀಡಿದ ಪುಕಾರಿ ಮೇರೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 ರಸ್ತೆ ಅಪಘಾತ ಪ್ರಕರಣ

            ದಿನಾಂಕ: 12-05-2022 ರಂದು ಸೋಮವಾರಪೇಟೆ ತಾಲ್ಲೂಕು ನಗರಳ್ಳಿ  ಗ್ರಾಮದ ಬಳಿ ಮುಖ್ಯ ರಸ್ತೆಯಲ್ಲಿ ಕೆಎ-12-ಆರ್-4717 ರ ಸ್ಕೂಟರನ್ನು ಸವಾರ ಡಾಲು ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಎದುರುಗಡೆಯಿಂದ ಬರುತ್ತಿದ್ದ ಕೆಎ-12-ಯು-5288 ರ ಬೈಕ್‌ಗೆ ಡಿಕ್ಕಿಪಡಿಸಿದ ಪರಿಣಾಮ ಬೈಕ್‌ ಸವಾರರು ಬಿದ್ದು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಸೋಮವಾರಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 

ಇತ್ತೀಚಿನ ನವೀಕರಣ​ : 13-05-2022 06:33 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080