ಅಭಿಪ್ರಾಯ / ಸಲಹೆಗಳು

ನೇಣುಬಿಗಿದುಕೊಂಡು ಮಹಿಳೆ ಆತ್ಮಹತ್ಯೆ

ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ಸರಹದ್ದಿನ ಕಾಟಕೇರಿ ಗ್ರಾಮದಲ್ಲಿ ವಾಸವಾಗಿರುವ ಶ್ರೀಮತಿ ಸುಶೀಲ ಎಂಬವರ ತಾಯಿ ಶ್ರೀಮತಿ ಕಾವೇರಿ ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ದಿನಾಂಕ 13-3-2021ರಂದು ತಮ್ಮ ಮನೆಯಲ್ಲಿ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಸಂಬಂಧ ಶ್ರೀಮತಿ ಸುಶೀಲ ರವರು ನೀಡಿದ ದೂರಿನ ಮೇರೆಗೆ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೋಟಾರ್ ಸೈಕಲಿಗೆ ಕಾರು ಡಿಕ್ಕಿ

ಮಡಿಕೇರಿ ತಾಲೋಕಿನ ಕಾಟಕೇರಿ ಗ್ರಾಮದ ನಿವಾಸಿ ಬೋಜಪ್ಪ ಎಂಬವರ ಮಗ ಕೆ.ಬಿ. ವಿನಯ್ ಎಂಬವರು ದಿನಾಂಕ 13-3-2021 ರಂದು ಮಡಿಕೇರಿಯಿಂದ ಕುಶಾಲನಗರಕ್ಕೆ ಮೋಟಾರ್ ಸೈಕಲಿನಲ್ಲಿ ಹೋಗುತ್ತಿದ್ದಾಗ ಕೆದಕಲ್ ಗ್ರಾಮದ ಭದ್ರಕಾಳಿ ದೇವಾಲಯದ ಬಲಿ ತಿರುವಿನಲ್ಲಿ ಎದುರುಗಡೆಯಿಂದ ಬಂದ ಕಾರನ್ನು ಚಾಲಕ ಅತೀವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿದ ಪರಿಣಾಮ ಕಾರು ವಿನಯ್ ರವರು ಚಲಾಯಿಸುತ್ತಿದ್ದ ಮೋಟಾರ್ ಸೈಕಲಿಗೆ ಡಿಕ್ಕಿಯಾಗಿದ್ದು, ಪರಿಣಾಮ ವಿನಯ್ ರವರು ರಸ್ತೆಮೇಲೆ ಬಿದ್ದು ಗಾಯಗೊಂಡಿದ್ದು, ಈ ಸಂಬಂಧ ಸುಂಟಿಕೊಪ್ಪ ಠಾಣೆಯಲ್ಲಿ ಪ್ರಕರಣ ದಾಖಲಿಸಿದ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 14-03-2021 11:03 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ