ಅಭಿಪ್ರಾಯ / ಸಲಹೆಗಳು

ಕೊಲೆ ಬೆದರಿಕೆ ಪ್ರಕರಣ

                ದಿನಾಂಕ: 13-1-2022 ರಂದು ಪೊನ್ನಂಪೇಟೆ ತಾಲ್ಲೂಕು ಕಲಕೂರು ಗ್ರಾಮದ ನಿವಾಸಿ ಗೌತಮ್‍ ಎಂಬುವವರಿಗೆ ಅದೇ ಗ್ರಾಮದ ನಿವಾಸಿಗಳಾದ ರವೀಂದ್ರ ಮತ್ತು ಅವರ ಪತ್ನಿ ಕ್ಷುಲ್ಲಕ ಕಾರಣಕ್ಕೆ ದಾರಿ ತಡೆದು ಕೋವಿ ತೋರಿಸಿ ಕೊಲೆ ಬೆದರಿಕೆ ಹಾಕಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಶ್ರೀಮಂಗಲ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಅಕ್ರಮ ಜೂಜಾಟ ಪ್ರಕರಣ

            ದಿನಾಂಕ: 13-01-2022 ರಂದು ಕುಶಾಲನಗರ ತಾಲ್ಲೂಕು ರಂಗಸಮುದ್ರ ಗ್ರಾಮದ ಮಾವಿನಹಳ್ಳ ಬಳಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಇಸ್ಪೀಟ್‌ ಜೂಜಾಟಾಡುತ್ತಿದ್ದ ಪ್ರಕರಣವನ್ನು ಕುಶಾಲನಗರ ಗ್ರಾಮಾಂತರ ಠಾಣೆ ಪಿಎಸ್‌ಐ ಶಿವಶಂಕರ್‌ ಮತ್ತು ಸಿಬ್ಬಂದಿಯವರ ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.

ರಸ್ತೆ ಅಪಘಾತ ಪ್ರಕರಣ

                ದಿನಾಂಕ: 13-01-2022 ರಂದು ವಿರಾಜಪೇಟೆ ನಗರದ ಮೀನುಪೇಟೆ ಬಳಿ ಮುಖ್ಯ ರಸ್ತೆಯಲ್ಲಿ ಕೆಎ-05-ಎಂಡಿ-541 ರ ಕಾರನ್ನು ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಕೆಎ-12-ಬಿ-7906 ರ ಆಟೋ ರಿಕ್ಷಾ ಮತ್ತು ತಳ್ಳುವ ಕೈಗಾಡಿಯೊಂದಕ್ಕೆ ಡಿಕ್ಕಿಪಡಿಸಿದ ಪರಿಣಾಮ ರಶೀದ್‍ ಮತ್ತು ಕೃಷ್ಣಪ್ಪ ೆಂಬುವವರು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ವಿರಾಜಪೇಟೆ ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ದರೋಡೆಗೆ ಯತ್ನ ಪ್ರಕರಣ.

                ದಿನಾಂಕ: 12-01-2022 ರಂದು ರಾತ್ರಿ ವಿರಾಜಪೇಟೆ ತಾಲ್ಲೂಕು ಕದನೂರು ಗ್ರಾಮದ ನಿವಾಸಿ ಉತ್ತಪ್ಪ ಎಂಬುವವರ ಮನೆಯ ಬಳಿ ಶಕ್ತಿವೇಲು ಎಂಬ ವ್ಯಕ್ತಿ ಕಬ್ಬಿಣದ ರಾಡ್‍ ಹಿಡಿದುಕೊಂಡು ಹೋಗಿ ದರೋಡೆ ಮಾಡಲು ಪ್ರಯತ್ನಿಸಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ವಿರಾಜಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 15-01-2022 11:42 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080