ಅಭಿಪ್ರಾಯ / ಸಲಹೆಗಳು

ಅಕ್ರಮ ಗಾಂಜಾ ಪ್ರಕರಣ ಪತ್ತೆ, ಆರೋಪಿ ಬಂಧನ:

ಕೊಡಗು ಜಿಲ್ಲೆ ಮಡಿಕೇರಿ ತಾಲ್ಲೂಕು ಐವತ್ತೊಕ್ಲು ಗ್ರಾಮದ ಕಾಫಿ ತೋಟವೊಂದರಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆದಿದ್ದ ಪ್ರಕರಣವನ್ನು ಭಾಗಮಂಡಲ ಠಾಣೆ ಪೊಲೀಸರು ಪತ್ತೆ ಮಾಡಿ ಆರೋಪಿಯನ್ನು ಬಂಧಿಸಿ ಗಾಂಜಾ ಗಿಡಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿರುತ್ತಾರೆ.

     ಭಾಗಮಂಡಲ ಪೊಲೀಸ್ ಠಾಣಾ ಸರಹದ್ದಿನ ಐವತ್ತೊಕ್ಲು ಗ್ರಾಮದಲ್ಲಿ ಒಬ್ಬ ವ್ಯಕ್ತಿ ತನ್ನ ಕಾಫಿ ತೋಟದಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆದಿರುವ ಬಗ್ಗೆ ಖಚಿತ ಮಾಹಿತಿ ದೊರೆತ ಮೇರೆಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿತ್ತು.

ಭಾಗಮಂಡಲ ಠಾಣಾ ಪಿಎಸ್‌ಐರವರ ನೇತೃತ್ವದ ತಂಡವು ಆರೋಪಿ ಐವತೊಕ್ಲು ಗ್ರಾಮದ ನಿವಾಸಿ ಪಿ.ಎಸ್.ವಿಜಯ ಮೇದಪ್ಪ ಎಂಬುವವರನ್ನು ವಶಕ್ಕೆ ಪಡೆದು ಸುಮಾರು 1680 ಗ್ರಾಂ ತೂಕದ ಒಟ್ಟು ರೂ.23,000/- ಮೌಲ್ಯದ ತೋಟದಲ್ಲಿ ಬೆಳೆದಿದ್ದ ಗಾಂಜಾ ಗಿಡಗಳನ್ನು ವಶಕ್ಕೆ ಪಡೆದಿರುತ್ತಾರೆ.

      ಈ ಪ್ರಕರಣದ ಪತ್ತೆ ಕಾರ್ಯದಲ್ಲಿ ಭಾಗಮಂಡಲ ಠಾಣಾ ಪಿಎಸ್‌ಐ ಹೆಚ್.ಕೆ. ಮಹದೇವ್ ಸಿಬ್ಬಂದಿಯವರಾದ ಶಿವರಾಮ್ ಎಂ.ಬಿ, ನಂಜುಂಡ ಎನ್.ಕೆ, ಇಬ್ರಾಹಿಂ, ಮಹೇಶ್, ಸುರೇಶ್ ಕುಮಾರ್, ಪುನೀತ್ ಕುಮಾರ್ .ಎನ್.ಆರ್, ಮಹದೇವಸ್ವಾಮಿ ರವರು ಪಾಲ್ಗೊಂಡಿದ್ದು ಪೊಲೀಸ್‌ ಅಧಿಕಾರಿ ಮತ್ತು ಸಿಬ್ಬಂದಿಯವರ ಕಾರ್ಯವನ್ನು ಶ್ಲಾಘಿಸಲಾಗಿದೆ.

ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ವಂಚನೆ ಪ್ರಕರಣ

            ಸೋಮವಾರಪೇಟೆ ತಾಲ್ಲೂಕು ಮಹದೇಶ್ವರ ಬ್ಲಾಕ್‌ ನಿವಾಸಿ ಭೀಮಯ್ಯ ಮತ್ತು ಗೋವಿಂದ  ಎಂಬುವವರು ದಿನಾಂಕ; 03-10-2017 ರಂದು ತಹಸೀಲ್ದಾರ್‌, ಸೋಮವಾರಪೇಟೆ ತಾಲ್ಲೂಕು ರವರ ಕಛೇರಿಯಿಂದ ಪರಿಶಿಷ್ಟ ಜಾತಿಗೆ ಸೇರಿದ ಭೋವಿ ಜನಾಂಗಕ್ಕೆ ಸೇರಿದ ಬಗ್ಗೆ ಜಾತಿ ಪ್ರಮಾಣಪತ್ರವನ್ನು ಪಡೆದಿರುತ್ತಾರೆ. ಇವರು ಪ್ರವರ್ಗ 3(ಎ) ರಲ್ಲಿ ಬರುವ ನಾಯ್ಡು ಜಾತಿಗೆ  ಸೇರಿದ್ದರೂ ಸಹಾ ಪರಿಶಿಷ್ಟ ಜಾತಿ ಪ್ರಮಾಣ ಪತ್ರವನ್ನು ಉಪಯೋಗಿಸಿ  PWD ಇಲಾಖೆಯಲ್ಲಿ ಪರಿಶಿಷ್ಟ ಜಾತಿಗೆ ಮೀಸಲಿದ್ದ ಗುತ್ತಿಗೆಯನ್ನು ಪಡೆದು ಸರ್ಕಾರಕ್ಕೆ ವಂಚಿಸಿದ್ದು ಈ ಬಗ್ಗೆ ನಾಗರೀಕ ಹಕ್ಕು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸೋಮವಾರಪೇಟೆ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 14-07-2021 06:39 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080