ಅಭಿಪ್ರಾಯ / ಸಲಹೆಗಳು

ರಸ್ತೆ ಅಪಘಾತ ಪ್ರಕರಣ

            ದಿನಾಂಕ: 13-09-2021 ರಂದು ಮಡಿಕೇರಿ –ಕುಶಾಲನಗರ ಹೆದ್ದಾರಿ ರಸ್ತೆಯ ಆನೆಕಾಡು ಬಳಿ ಕೆಎ-12-ಎನ್-4065‌ ರ ಕಾರನ್ನು ಅದರ ಚಾಲಕ ಸುಜಿತ್‌ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಕೆಎ-12-ಜೆಡ್-7132‌ ರ ಕಾರು ಮತ್ತು ಕೆಎ-19-ಎಫ್-2989 ರ ಕೆ.ಎಸ್‌.ಆರ್.ಟಿ.ಸಿ ಬಸ್‌ಗೆ ಡಿಕ್ಕಿಪಡಿಸಿದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಕುಶಾಲನಗರ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 ಹಲ್ಲೆ ಪ್ರಕರಣ

            ದಿನಾಂಕ: 13-09-2021 ರಂದು ಮಡಿಕೇರಿ ತಾಲ್ಲೂಕು ನಾಪೋಕ್ಲು ಗ್ರಾಮದ ನಿವಾಸಿಗಳಾದ ಹ್ಯಾರಿಸ್‌, ಕುರೇಶಿ, ಅಶ್ರಫ್ ಮತ್ತು ಬೇತು ಗ್ರಾಮದ ನಿವಾಸಿ ಬಶೀರ್‌‌ ಎಂಬುವವರು ವೈಯಕ್ತಿಕ ವೈಷಮ್ಯದಿಂದ ಪರಸ್ಪರ ಹಲ್ಲೆ ಮಾಡಿ ಕೊಲೆ ಬೆದರಿಕೆ ಹಾಕಿದ್ದು ಈ ಬಗ್ಗೆ ಉಭಯ ಕಡೆಯವರು ನೀಡಿದ ಪುಕಾರಿನ ಮೇರೆ ನಾಪೋಕ್ಲು ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 ಅಕ್ರಮ ಮದ್ಯ ಮಾರಾಟ ಪ್ರಕರಣ

            ದಿನಾಂಕ: 13-09-2021 ರಂದು ಸೋಮವಾರಪೇಟೆ ತಾಲ್ಲೂಕು ಅಬ್ಬೂರುಕಟ್ಟೆ ಗ್ರಾಮದ ನಿವಾಸಿ ಚಂದ್ರಪ್ಪ ಎಂಬುವವರು ಅವರ ಅಂಗಡಿ ಮುಂಭಾಗದಲ್ಲಿ ಅಕ್ರಮವಾಗಿ ಸಾರ್ವಜನಿಕರು ಮದ್ಯಸೇವನೆಗೆ ಮಾಡಲು ಅವಕಾಶ ಮಾಡುತ್ತಿದ್ದ ಪ್ರಕರಣವನ್ನು ಸೋಮವಾರಪೇಟೆ ಠಾಣೆ ಪೊಲೀಸರು ಪತ್ತೆ ಮಾಡಿ ಕಾನೂನು ಕ್ರಮ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 14-09-2021 05:08 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ