ಅಭಿಪ್ರಾಯ / ಸಲಹೆಗಳು

ಹಲ್ಲೆ ಪ್ರಕರಣ

            ದಿನಾಂಕ: 13-08-2021 ರಂದು ಮೈಸೂರು ನಗರದ ನಿವಾಸಿಗಳಾದ ಜಾರ್ಜ್‍ ಮತ್ತು ಅವರ ಕುಟುಂಬದವರು ವಕೀಲರೊಂದಿಗೆ ಕೌಟುಂಬಿಕ ವಿಚಾರವಾಗಿ ಮಡಿಕೇರಿ ನ್ಯಾಯಾಲಯಕ್ಕೆ ಹೋಗಿ ಕೆಲಸ ಮುಗಿಸಿ ವಾಪಾಸ್ಸು ಮೈಸೂರಿಗೆ ಕಾರುಗಳಲ್ಲಿ ಹೋಗುತ್ತಿರುವಾಗ ಮಡಿಕೇರಿ ನಗರದ ನಗರ ಸಭೆ ಬಳಿ ಮುಖ್ಯ ರಸ್ತೆಯಲ್ಲಿ ಮಡಿಕೇರಿ ನಗರದ ಜಯನಗರ ನಿವಾಸಿಗಳಾದ ಬೆನೆಡಿಕ್‍ ಮನೆಜಸ್‍ ಮತ್ತು ಕುಟುಂಬದವರು ಕೌಟುಂಬಿಕ ವೈಷಮ್ಯದಿಂದ ಕಾರುಗಳನ್ನು ತಡೆದು ಕೊಲೆ ಮಾಡುವ ಉದ್ದೇಶದಿಂದ ಹಲ್ಲೆ ಮಾಡಿ ಗಾಯಪಡಿಸಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಮಡಿಕೇರಿ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 ಹಲ್ಲೆ  ಪ್ರಕರಣ

            ದಿನಾಂಕ: 13-08-2021 ರಂದು ಕುಶಾಲನಗರ ತಾಲ್ಲೂಕು ಹೇರೂರು ಗ್ರಾಮದ ನಿವಾಸಿ ಶಿವಕುಮಾರ್‍ಎಂಬುವವರಿಗೆ ಹೊಸಪಟ್ಟಣ ನಿವಾಸಿ ಗಣೇಶ್ ಎಂಬುವವರು ವೈಯಕ್ತಿಕ ಕಾರಣದಿಂದ ಹಲ್ಲೆ ಮಾಡಿ ಕೊಲೆ ಬೆದರಿಕೆ ಹಾಕಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಸುಂಟಿಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಆಕಸ್ಮಿಕವಾಗಿ ಕರೆಗೆ ಬಿದ್ದು ಬಾಲಕ ಸಾವು.

            ದಿನಾಂಕ: 14-08-2021 ರಂದು ಪೊನ್ನಂಪೇಟೆ ತಾಲ್ಲೂಕು ಬಾಳೆಲೆ ಗ್ರಾಮದ ನಿವಾಸಿ ಮಹೇಶ್ ಎಂಬುವವರ ನಾಲ್ಕು ವರ್ಷ ಪ್ರಾಯದ ಮಗ ಇತರ ಮಕ್ಕಳೊಂದಿಗೆ ಆಟವಾಡಲುಕೆರೆಯ ಬಳಿ ಹೋಗಿದ್ದಾಗ ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟಿದ್ದು ಈ ಬಗ್ಗೆ ನೀಡಿದ ದೂರಿನ ಮೇರೆ ಪೊನ್ನಂಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 ಮಕ್ಕಳು ಆಟವಾಡುವ ಸಮಯದಲ್ಲಿ ಇಂತಹ ಅನಿರೀಕ್ಷಿತ ಘಟನೆಗಳು ಜರುಗದಂತೆ, ಮಕ್ಕಳು ಎಂತಹುದೇ ಸಂದರ್ಭದಲ್ಲಿ ಯಾವುದೇ ರೀತಿಯಿಂದಲೂ ಅಪಾಯಕ್ಕೊಳಗಾಗದಂತೆ ಪೋಷಕರು ಮುಂಜಾಗ್ರತೆ ವಹಿಸಿ ತಮ್ಮ ಮಕ್ಕಳಿಗೆ ತಿಳುವಳಿಕೆ ನೀಡಬೇಕಾಗಿ ಕೋರಿಕೆ.

ಇತ್ತೀಚಿನ ನವೀಕರಣ​ : 15-08-2021 11:01 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ