ಅಭಿಪ್ರಾಯ / ಸಲಹೆಗಳು

ಹಲ್ಲೆ ಪ್ರಕರಣ

ದಿನಾಂಕ: 13-10-2021 ರಂದು ಪೊನ್ನಂಪೇಟೆ ತಾಲ್ಲೂಕು ಕಿರುಗೂರು ಗ್ರಾಮದ ನಿವಾಸಿಗಳಾದ ರವಿ ಮತ್ತು ಚಂದ್ರ ಎಂಬುವವರು ಕ್ಷುಲ್ಲಕ ಕಾರಣಕ್ಕೆ ಪರಸ್ಪರ ಅವಾಚ್ಯ ಪದಗಳಿಂದ ಬೈದು ದೊಣ್ಣೆಯಿಂದ ಹಲ್ಲೆ ಮಾಡಿ ಕೊಲೆ ಬೆದರಿಕೆ ಹಾಕಿದ್ದು ಈ ಬಗ್ಗೆ ಉಭಯ ಕಡೆಯವರು ನೀಡಿದ ಪುಕಾರಿನ ಮೇರೆ ಪೊನ್ನಂಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ರಸ್ತೆ ಅಪಘಾತ ಪ್ರಕರಣ

ದಿನಾಂಕ: 13.10.2021ರಂದು ಸೋಮವಾರಪೇಟೆ ತಾಲ್ಲೂಕು ಕುಸುಬೂರು ಗ್ರಾಮದ ಬಳಿ ಮುಖ್ಯ ರಸ್ತೆಯಲ್ಲಿ ಕೆಎ-12-1429 ರ ಬೈಕನ್ನು ಅದರ ಸವಾರ ಅರುಣ್‌ ಕುಮಾರ್‌ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗು ಎದುರುಗಡೆಯಿಂದ ಬರುತ್ತಿದ್ದ ಕೆಎ-12- 7840 ರ ಬೈಕ್‌ ಗೆ  ಡಿಕ್ಕಿಪಡಿಸಿದ ಪರಿಣಾಮ ಎರಡೂ ಬೈಕ್‌ ನಲ್ಲಿದ್ದ ಸವಾರರರು ಬಿದ್ದು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ  ಮೇರೆ ಸೋಮವಾರಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಕಳವು ಪ್ರಕರಣ

            ದಿನಾಂಕ: 13-10-2021 ರಂದು ರಾತ್ರಿ ಮೂರ್ನಾಡು ಗ್ರಾಮದಲ್ಲಿರುವ ಸುಬ್ಬಯ್ಯ ಎಂಬುವವರು ಅವರ ಮದ್ಯದಂಗಡಿಯ ಬಾಗಿಲು ಹಾಕುವ ಸಮಯದಲ್ಲಿ ಮೂರ್ನಾಡು ನಿವಾಸಿ ಶಿವಕುಮಾರ್‌ ಎಂಬುವವರು ಇಳಗೆ ಅವಿತು ಉಳಿತುಕೊಂಡು ಡ್ರಾಯರ್‌ನಲ್ಲಿ ಇಟ್ಟಿದ್ದ ₹. 47,000 ನಗದು ಹಣವನ್ನು ಕಳವು ಮಾಡಿ ಹಿಂಬಾಗಿಲಿನ ಮೂಲಕ ಹೊರಹೋಗಿರುವುದು ಸಿ.ಸಿ ಟಿವಿ ಪರಿಶೀಲನೆಯಿಂದ ತಿಳಿದುಬಂದಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಹಲ್ಲೆ ಪ್ರಕರಣ

            ದಿನಾಂಕ: 14-10-2021 ರಂದು ವಿರಾಜಪೇಟೆ ಪಟ್ಟಣದ ತೆಲುಗರ ಬೀದಿ ನಿವಾಸಿ ರವಿ ಎಂಬುವವರಿಗೆ ಗಫೂರ್‌ ಎಂಬುವವರ ಇಬ್ಬರು ಮಕ್ಕಳು ಕ್ಷುಲ್ಲಕ ಕಾರಣಕ್ಕೆ ಹಲ್ಲೆ ಮಾಡಿ ಗಾಯಪಡಿಸಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ವಿರಾಜಪೇಟೆ ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 15-10-2021 11:28 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080