ಅಭಿಪ್ರಾಯ / ಸಲಹೆಗಳು

ಸೈಬರ್ ವಂಚನೆ ಪ್ರಕರಣ‌

            ವಿರಾಜಪೇಟೆ ತಾಲ್ಲೂಕು ದೇವಣಗೇರಿ ಗ್ರಾಮದ ಮಹಿಳೆಯೊಬ್ಬರ ಮೊಬೈಲ್‌ ನಂಬರ್‌ ಗೆ ಮನೆಯಿಂದಲೇ ಉದ್ಯೋಗ ಮಾಡುವ ಬಗ್ಗೆ ಜಾಹೀರಾತು ಬಂದಿದ್ದು ಇದನ್ನು ನಂಬಿ ಅದರಲ್ಲಿದ್ದ 9617202482 ನಂಬರ್‌ ಗೆ ಕರೆ ಮಾಡಿದಾಗ ಆನ್ ಲೈನ್‌ ಮೂಲಕ ವಸ್ತುಗಳನ್ನು ವ್ಯಾಪಾರ ಮಾಡಿ ಹಣ ಗಳಿಸುವ ಬಗ್ಗೆ ತಿಳಿಸಲಾಗಿರುತ್ತದೆ. ಇದಕ್ಕಾಗಿ ಮುಂಚಿತವಾಗಿ ಮುಂಗಡ ಹಣ ಹೂಡಿಕೆ ಮಾಡಲು ತಿಳಿಸಿದಾಗ ವೈಯಕ್ತಿಕವಾಗಿ ಹಾಗೂ ಸಂಬಂದಿಕರ ಹಾಗೂ ಪರಿಚಯಸ್ಥರ ಬ್ಯಾಂಕ್‌ ಖಾತೆಗಳಿಂದ ಹಂತ ಹಂತವಾಗಿ ಒಟ್ಟು ₹. 563646 ಹಣವನ್ನು ಅವರ ಕಳುಹಿಸಿದ ಲಿಂಕ್‌ ಮುಖಾಂತರ ಸಂದಾಯ ಮಾಡಿರುತ್ತಾರೆ. ಆದರೆ ಈ ಬರೆಗೂ ಕಮಿಷನ್‌ ಹಣವನ್ನು ನೀಡದೇ ಹಾಗೂ ನೀಡಲಾದ ಮುಂಗಡ ಹಣವನ್ನು ವಾಪಾಸ್ಸು ನೀಡದೇ ವಂಚನೆ ಮಾಡಿದ್ದು ಈ ಬಗ್ಗೆ ದಿನಾಂಕ: 14-12-2021 ನೀಡಿದ ಪುಕಾರಿನ ಮೇರೆ ಕೊಡಗು ಸೈಬರ್‌ ಅಪರಾಧ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 ರಸ್ತೆ ಅಪಘಾತ ಪ್ರಕರಣ

            ದಿನಾಂಕ: 13-12-2021 ರಂದು ಕುಶಾಲನಗರ ತಾಲ್ಲೂಕು ಗುಮ್ಮನಕೊಲ್ಲಿ ಗ್ರಾಮದ ಬಳಿ ಮುಖ್ಯ ರಸ್ತೆಯಲ್ಲಿ ಕೆಎ-01-ಹೆಚ್‌ಬಿ-9690 ರ ಬೈಕನ್ನು ಅದರ ಸವಾರ ನೌಸಿಫ್ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ‌  ಹೋಗಿ ಎದುರುಗಡೆಯಿಂದ ಬರುತ್ತಿದ್ದ ಕೆಎ-45-7023 ರ ಗೂಡ್ಸ್‌ ವಾಹನಕ್ಕೆ ಡಿಕ್ಕಿಪಡಿಸಿದ ಪರಿಣಾಮ ಬೈಕ್‌ ನಿಯಂತ್ರಣ ತಪ್ಪಿ ಬಿದ್ದು ಸವಾರರಿಬ್ಬರು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಕುಶಾಲನಗರ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 15-12-2021 05:39 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080