ಅಭಿಪ್ರಾಯ / ಸಲಹೆಗಳು

ಅಕ್ರಮ ಮದ್ಯ ಮಾರಾಟ ಪ್ರಕರಣ

                ದಿನಾಂಕ: 15-01-2022 ರಂದು ಕುಶಾಲನಗರ ತಾಲ್ಲೂಕು ನಂಜರಾಯಪಟ್ಟಣ  ಗ್ರಾಮದ ನಿವಾಸಿ  ಯಶ್ವಂತ್  ಎಂಬುವವರು  ಅವರ ಮನೆಯ ಮುಂಭಾಗದ  ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ  ಮದ್ಯವನ್ನು ಇಟ್ಟುಕೊಂಡು ಸಾರ್ವಜನಿಕರಿಗೆ ಮದ್ಯ ಸೇವನೆಗೆ ಅವಕಾಶ ಮಾಡುತ್ತಿದ್ದ ಪ್ರಕರಣವನ್ನು ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಿದ್ದಾರೆ.

ಕಳವು ಪ್ರಕರಣ

                ದಿನಾಂಕ: 15-01-2022 ರಂದು ಮಡಿಕೇರಿ ತಾಲ್ಲೂಕು ಮುರ್ನಾಡು ಗ್ರಾಮದ ನಿವಾಸಿ ಪಾರ್ವತಿ ಎಂಬುವವರ ಮನೆಯ ಬಾಗಿಲನ್ನು ಯಾರೋ ಕಳ್ಳರು ಮುರಿದು ಒಳನುಗ್ಗಿ ಮನೆಯೊಳಗೆ ಬೀರುವಿನಲ್ಲಿ ಇಟ್ಟಿದ್ದ ₹. 25,000 ಮೌಲ್ಯದ ಚಿನ್ನಾಭರಣ ಹಾಗೂ ₹. 20,000 ನಗದನ್ನು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಅಕ್ರಮ ಮದ್ಯ ಮಾರಾಟ ಪ್ರಕರಣ

                ದಿನಾಂಕ: 15-01-2022 ರಂದು ವಿರಾಜಪೇಟೆ ತಾಲ್ಲೂಕು ಅಮ್ಮತ್ತಿ ಗ್ರಾಮದ ನಿವಾಸಿ  ಥೋಮಸ್  ಎಂಬುವವರು ಅಮ್ಮತ್ತಿ ಪಾಲಿಬೆಟ್ಟ ರಸ್ತೆಯಲ್ಲಿರುವ ಅವರ ಹೊಟೇಲ್‍ ನಲ್ಲಿ   ಅಕ್ರಮವಾಗಿ ಮದ್ಯವನ್ನು ಇಟ್ಟುಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ವಿರಾಜಪೇಟೆ ಗ್ರಾಮಾಂತರ  ಠಾಣೆ ಪಿಎಸ್‌ಐ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.

ಪೊಲೀಸರ ಕರ್ತ್ಯವ್ಯಕ್ಕೆ ಅಡ್ಡಿ ಪ್ರಕರಣ.

                ದಿನಾಂಕ: 14-01-2022 ರಂದು ರಾತ್ರಿ ವಿರಾಜಪೇಟೆ ನಗರ ಠಾಣೆಯಲ್ಲಿ ಹೆಚ್.ಸಿ ಲೋಕೇಶ್‍ ಮತ್ತು ಪಿ.ಸಿ ಶೆಟ್ಟಪ್ಪ ಬಾಗೇವಾಡಿ ರವರು ಕರ್ತವ್ಯದಲ್ಲಿರುವಾಗ ವಿರಾಜಪೇಟೆ ಮುಖಯ ರಸ್ತೆಯಲ್ಲಿರುವ ವಿಜಯಲಕ್ಷ್ಮಿ ಎಲೆಕ್ಟ್ರಿಕ್ ಶಾಪ್‍ ನ ತಾನ್‍ ಸಿಂಗ್ ಎಂಬ ವ್ಯಕ್ತಿ ಠಾಣೆಗೆ ಹೋಗಿ ಒಬ್ಬ ವ್ಯಕ್ತಿಯಿಂದ ಹಣ ಕೊಡಿಸಬೇಕೇಂದು ಹೇಳಿ, ಕೊಡಿಸದಿದ್ದರೆ ಎಲ್ಲರಿಗೂ ಒಂದು ಗತಿ ಕಾಣಿಸುವುದಾಗಿ ಬೆದರಿಕೆ ಹಾಕಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಿಡಿಸಿದ್ದು ಈ ಬಗ್ಗೆ ವಿರಾಜಪೇಟೆ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 16-01-2022 01:00 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080