ಅಭಿಪ್ರಾಯ / ಸಲಹೆಗಳು

ಹಲ್ಲೆ ಪ್ರಕರಣ

            ದಿನಾಂಕ: 15.02.2022 ರಂದು ಮಡಿಕೇರಿ ತಾಲ್ಲೂಕು ಬಿ.ಬಾಡಗ ಗ್ರಾಮದ ನಿವಾಸಿ ರಾಘವ ಎಂಬುವವರಿಗೆ ಕೋಪಟ್ಟಿ ಗ್ರಾಮದ ನಿವಾಸಿಗಳಾದ ದಾಯನ ಅಜಿತ್ ಮತ್ತು ತೊತ್ತಿಯನ ಟಿಂಸನ್‍ ಎಂಬುವವರು ಕ್ಷುಲ್ಲಕ ಕಾರಣಕ್ಕೆ ದಾರಿ ತಡೆದು ಹಲ್ಲೆ ಮಾಡಿ ಕೊಲೆ ಬೆದರಿಕೆ ಹಾಕಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಭಾಗಮಂಡಲ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ರಸ್ತೆ ಅಪಘಾತ ಪ್ರಕರಣ       

            ದಿನಾಂಕ: 14.02.2022 ರಂದು ಸುಂಟಿಕೊಪ್ಪ ನಗರದ ಬಳಿ ಹೆದ್ದಾರಿ ರಸ್ತೆಯಲ್ಲಿ ಕೆಎ-12-ಎ-0940 ರ ಕಾರನ್ನು ಚಾಲಕ ಕಾವೇರಪ್ಪ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡ ಹೋಗಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ರಂಗನಾಥ್‍ ಎಂಬುವವರಿಗೆ ಡಿಕ್ಕಿಪಡಿಸಿದ ಪರಿಣಾಮ ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಸುಂಟಿಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಅಕ್ರಮ ಮದ್ಯ ಮಾರಾಟ ಪ್ರಕರಣ

                ದಿನಾಂಕ: 15-02-2022 ರಂದು ವಿರಾಜಪೇಟೆ ಪಟ್ಟಣದ ಎಫ್‍ ಎಂ ಸಿ ರಸ್ತೆಯ ಫ್ರೆಂಡ್ಸ್ ಚಿಕನ್ ಮಟನ್ ಅಂಗಡಿಯಲ್ಲಿ ಮಾದೇವ ಮತ್ತು ಸಾದಿಕ್‍ ಎಂಬುವವರು ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ  ಮದ್ಯವನ್ನು ಇಟ್ಟುಕೊಂಡು ಸಾರ್ವಜನಿಕರಿಗೆ ಮದ್ಯ ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ವಿರಾಜಪೇಟೆ ಪಟ್ಟಣ  ಠಾಣೆ ಪಿಎಸ್‌ಐ ಜಗದೀಶ್‍ ಧೂಳಶೆಟ್ಟಿ ಮತ್ತು ಸಿಬ್ಬಂದಿಯವರು  ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಿದ್ದಾರೆ.

ರಸ್ತೆ ಅಪಘಾತ ಪ್ರಕರಣ
            ದಿನಾಂಕ: 15-02-2022 ರಂದು ಮಡಿಕೇರಿ ತಾಲ್ಲೂಕು ದೇವರಕೊಲ್ಲಿ ಗ್ರಾಮದ ಬಳಿ ಮುಖ್ಯ ರಸ್ತೆಯಲ್ಲಿ ಕೆಎ-21-ಸಿ-2979 ರ ಕಾರನ್ನು ಚಾಲಕ ಪ್ರದೀಪ್‍ ರೈ ಎಂಬುವವರು ಅತಿವೇಗ ಮತ್ತುಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಎದುರುಗಡೆಯಿಂದ ಬರುತ್ತಿದ್ದ ಕೆಎ-01-ಎಂಎಲ್‍-3186 ರ ಕಾರಿಗೆ ಡಿಕ್ಕಿಪಡಿಸಿದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಜುಬೇರ್‍ ಎಂಬುವವರು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 16-02-2022 05:39 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080