ಅಭಿಪ್ರಾಯ / ಸಲಹೆಗಳು

ಅಕ್ರಮ ಮದ್ಯ ಮಾರಾಟ ಪ್ರಕರಣ

                ದಿನಾಂಕ: 15-05-2022 ರಂದು ಸೋಮವಾರಪೇಟೆ ತಾಲ್ಲೂಕು ಹಾನಗಲ್ಲು ಗ್ರಾಮದ ನಿವಾಸಿ  ಉನ್ನಿಕೃಷ್ಣ ಎಂಬುವವರು ಪಟ್ಟಣದ ಆರ್‌.ಎಂ.ಸಿ ಮಾರುಕಟ್ಟೆ ಬಳಿ ಅಕ್ರಮವಾಗಿ  ಮದ್ಯವನ್ನು ಇಟ್ಟುಕೊಂಡು ಸಾರ್ವಜನಿಕರಿಗೆ ಮದ್ಯ ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ಸೋಮವಾರಪೇಟೆ ಠಾಣೆ ಪಿಎಸ್‌ಐ ವಿರೂಪಾಕ್ಷ ಮತ್ತು ಸಿಬ್ಬಂದಿಯವರು  ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಿದ್ದಾರೆ.

ರಸ್ತೆ ಅಪಘಾತ ಪ್ರಕರಣ

            ದಿನಾಂಕ: 14-05-2022 ರಂದು ವಿರಾಜಪೇಟೆ ತಾಲ್ಲೂಕು ಅಮ್ಮತ್ತಿ ಒಂಟಿಅಂಗಡಿ ಗ್ರಾಮದ ಬಳಿ ಮುಖ್ಯ ರಸ್ತೆಯಲ್ಲಿ ಕೆಎ-12-ಎ-8548 ರ ಪಿಕ್‌ ಅಪ್‌ ವಾಹನವನ್ನು ಚಾಲಕ ಅಪ್ಪಯ್ಯ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಕೆಎ-12-ಜೆ-2029 ರ ಮೋಟಾರ್‌ ಸೈಕಲ್‌ ಗೆ ಡಿಕ್ಕಿಪಡಿಸಿದ ಪರಿಣಾಮ ಸವಾರರಿಬ್ಬರು ಬಿದ್ದು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ವಿರಾಜಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಕಾರು ಡಿಕ್ಕಿ, ವ್ಯಕ್ತಿ ಸಾವು

            ದಿನಾಂಕ: 15-05-2022 ರಂದು ಕುಶಾಲನಗರ ತಾಲ್ಲೂಕು ಬಸವನಹಳ್ಳಿ ಗ್ರಾಮದ ಬಳಿ ಹೆದ್ದಾರಿ ರಸ್ತೆಯಲ್ಲಿ ಕುಶಾಲನಗರ ಕಡೆಯಿಂದ ಒಂದು ಬಿಳಿ ಬಣ್ಣದ ಕಾರನ್ನು ಅದರ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ರಸ್ತೆ ದಾಟುತ್ತಿದ್ದ ಅಂದಗೋವೆ ಗ್ರಾಮದ ನಿವಾಸಿ ಲೋಕೇಶ್‌ ಎಂಬುವವರಿಗೆ ಡಿಕ್ಕಿಪಡಿಸಿದ ಪರಿಣಾಮ ಲೋಕೇಶ್‌ ರವರು ಗಾಯಗೊಂಡು ಮೃತಪಟ್ಟಿದ್ದು, ಡಿಕ್ಕಿಪಡಿಸಿದ ನಂತರ ಚಾಲಕ ಕಾರನ್ನು ನಿಲ್ಲಿಸದೇ ಹೋಗಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಕುಶಾಲನಗರ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 16-05-2022 06:46 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080