ಅಭಿಪ್ರಾಯ / ಸಲಹೆಗಳು

ಅಕ್ರಮ ಮದ್ಯ ಮಾರಾಟ ಪ್ರಕರಣ

            ದಿನಾಂಕ: 15-06-2021 ರಂದು ಮಡಿಕೇರಿ ನಗರದ ರಾಣಿಪೇಟೆ ಸಿ.ಎಂ.ಸಿ ವಸತಿಗೃಹದ ಬಳಿ ಇವೆಂಟ್‌ ಫ್ರೇಮ್ಸ್‌ ಡೆಕೊರೇಷನ್‌ ಅಂಗಡಿಯ ಶೆಡ್‌ ನಲ್ಲಿ ಅಂಬೇಡ್ಕರ್‌ ಬಡಾವಣೆ ನಿವಾಸಿ ಕಾರ್ತಿಕ್‌ ಎಂಬುವವರು ಅಕ್ರಮವಾಗಿ ಸಾರ್ವಜನಿಕರಿಗೆ ಮದ್ಯ ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ಮಡಿಕೇರಿ ನಗರ ಠಾಣೆ ಪಿಎಸ್‌ಐ ಎಂ.ಟಿ ಅಂತಿಮ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.

 ರಸ್ತೆ ಅಪಘಾತ ಪ್ರಕರಣ

            ದಿನಾಂಕ: 15-06-2021 ರಂದು ಮಡಿಕೇರಿ ಕುಶಾಲನಗರ ಹೆದ್ದಾರಿ ರಸ್ತೆಯ ಇಬ್ನಿವಳವಾಡಿ ಗ್ರಾಮದ ಬಳಿ ತಿರುವು ರಸ್ತೆಯಲ್ಲಿ ಕೆಎ-09-ಡಿ-8418 ರ ಲಾರಿಯನ್ನು ಚಾಲಕ ಮಂಜು ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿದ ಪರಿಣಾಮ ಲಾರಿ ನಿಯಂತ್ರಣ ತಪ್ಪಿ ರಸ್ತೆಯ ಬದಿಗೆ ಮಗುಚಿ ಬಿದ್ದ ಪರಿಣಾಮ ವ್ಯಕ್ತಿಯೊಬ್ಬರು ಗಾಯಗೊಂಡಿದ್ದು ಈ ಬಗ್ಗೆ ಬಾಬು ಎಂಬುವವರು ನೀಡಿದ ಪುಕಾರಿನ ಮೇರೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ರಸ್ತೆ ಅಪಘಾತ ಪ್ರಕರಣ

            ದಿನಾಂಕ: 15-06-2021 ರಂದು ವಿರಾಜಪೇಟೆ ತಾಲ್ಲೂಕು ಕಾಕೋಟುಪರಂಬು ಗ್ರಾಮದ ಬಳಿ ಮುಖ್ಯ ರಸ್ತೆಯಲ್ಲಿ ಕೆಎ-12-ಬಿ-3339 ರ ಟಿಪ್ಪರ್‌ ಲಾರಿಯನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಎದುರುಗಡೆಯಿಂದ ಬರುತ್ತಿದ್ದ ಕೆಎ-5ಸಿ-0022 ರ ಕಾರಿಗೆ ಡಿಕ್ಕಿಪಡಿಸಿದ ಪರಿಣಾಮ ಕಾರು ಜಖಂಗೊಂಡು ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ವಿರಾಜಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 16-06-2021 04:40 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ