Feedback / Suggestions

ಹಲ್ಲೆಗೊಳಗಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಸಾವು.

            ದಿನಾಂಕ: 18-11-2020 ರಂದು ಪೊನ್ನಂಪೇಟೆ ತಾಲ್ಲೂಕು ಬಾಳೆಲೆ ಗ್ರಾಮದ ನಿವಾಸಿ ಉತ್ತಪ್ಪ ಎಂಬುವವರಿಗೆ ಅದೇ ಗ್ರಾಮದ ನಿವಾಸಿಗಳಾದ ಕಾಮರಾಜ, ಪ್ರತಾಪ್‍ ಮತ್ತು ಸಂತೋಷ್‍ ಎಂಬುವವರಿಂದ ಮಾರಣಾಂತಿಕ ಹಲ್ಲೆಗೊಳಗಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ದಿನಾಂಕ: 14-12-2020 ರಂದು ಮೃತಪಟ್ಟಿದ್ದು ಈ ಬಗ್ಗೆ ಪೊನ್ನಂಪೇಟೆ ಠಾಣೆ ಪೊಲೀಸರು ಆರೋಪಿಗಳ ವಿರುದ್ದ ಕೊಲೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ವಂಚನೆ.

            ಪೊನ್ನಂಪೇಟೆ ತಾಲ್ಲೂಕು ಕುಮಟೂರು ಗ್ರಾಮದ ನಿವಾಸಿ ಜಯಶಂಕರ್ ಎಂಬುವವರು ತಮಿಳುನಾಡು ಮೂಲದವರಾಗಿದ್ದು ಇವರು ಕರ್ನಾ‍ಟಕ ರಾಜ್ಯಕ್ಕೆ ವಲಸೆ ಬಂದಿದ್ದು ವಿರಾಜಪೇಟೆ ತಹಸೀಲ್ದಾರ್ ರವರಿಂದ ಸುಳ್ಳು ದಾಖಲಾತಿಗಳನ್ನು ನೀಡಿ ಪರಿಶಿಷ್ಟ ಜಾತಿಗೆ ಸೇರಿದ “ಪಲ್ಲನ್” ಜಾತಿಯ ಪ್ರಮಾಣ ಪತ್ರ ಪಡೆದುಕೊಂಡು ಮಂಗಳೂರಿನ ಬಿ.ಇ.ಎಂ ಹೈಸ್ಕೂಲ್‍ ನಲ್ಲಿ  ನೌಕರಿ ಪಡೆದು ನೈಜ ಪರಿಶಿಷ್ಟ ಜನಾಂಗದವರಿಗೆ ಹಾಗೂ ಸರ್ಕಾರಕ್ಕೆ ವಂಚನೆ ಮಾಡಿದ್ದು ಈ  ಬಗ್ಗೆ ದಿನಾಂಕ: 15-12-2020 ರಂದು ಡಿ.ಸಿ.ಆರ್.ಇ ವಿಭಾಗದ ಅಧಿಕಾರಿಗಳು ನೀಡಿದ ಪುಕಾರಿನ ಮೇರೆ ವಿರಾಜಪೇಟೆ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

 ರಸ್ತೆ ಅಪಘಾತ ಪ್ರಕರಣ

            ದಿನಾಂಕ: 14-12-2020 ರಂದು ರಾತ್ರಿ ವಿರಾಜಪೇಟೆ ತಾಲ್ಲೂಕು ಪಾಲಿಬೆಟ್ಟ ಗ್ರಾಮದ ಬಳಿ ಮುಖ್ಯ ರಸ್ತೆಯಲ್ಲಿ ಕೆಎ-12-ಎನ್-2259 ರ ಕಾರನ್ನು ಅದರ ಚಾಲಕ ಸಂಜಯ್‍ ಕುಮಾರ್‍ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಕೆಎ-11-ವೈ-2259 ರ ಬೈಕ್‍ಗೆ ಡಿಕ್ಕಿಪಡಿಸಿದ ಪರಿಣಾಮ ಇಬ್ಬರು ಬೈಕ್‍ ಸವಾರರು ಹಾಗೂ ಕಾರಿನಲ್ಲಿದ್ದ ನಾಲ್ವರು ಪ್ರಯಾಣಿಕರು ಗಾಯಗೊಂಡಿದ್ದು ಈ ಬಗ್ಗೆ ಬೈಕ್‍ ಸವಾರ ದೇವದರ್ಶನ್‍ ಎಂಬುವವರು ನೀಡಿದ ಪುಕಾರಿನ ಮೇರೆ ಸಿದ್ದಾಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 ಅಕ್ರಮ ಮದ್ಯ ಮಾರಾಟ ಪ್ರಕರಣ

                ದಿನಾಂಕ: 15-12-2020 ರಂದು ಸೋಮವಾರಪೇಟೆ ತಾಲ್ಲೂಕು ಮದಲಾಪುರ  ಗ್ರಾಮದ  ನಿವಾಸಿ ಹರೀಶ ಎಂಬುವವರು ಅವರ ಅವರ ಮನೆಯ ಮುಂಭಾಗದ ಸಾರ್ವಜನಿಕ ಸ್ಥಳದಲ್ಲಿ  ಮದ್ಯವನ್ನು ಇಟ್ಟುಕೊಂಡು ಸಾರ್ವಜನಿಕರಿಗೆ ಮದ್ಯಸೇವನೆಗೆ ಅವಕಾಶ ಮಾಡುತ್ತಿದ್ದ ಪ್ರಕರಣವನ್ನು ಕುಶಾಲನಗರ ಗ್ರಾಮಾತರ ಠಾಣೆ ಪಿಎಸ್‍ಐ ಶಿವಶಂಕರ್ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಿದ್ದಾರೆ.

Last Updated: 16-12-2020 05:17 PM Updated By: Admin


Disclaimer :

Please note that this page also provides links to the websites / web pages of Govt. Ministries/Departments/Organisations.The content of these websites are owned by the respective organisations and they may be contacted for any further information or suggestion

Website Policies

  • Copyright Policy
  • Hyperlinking Policy
  • Security Policy
  • Terms & Conditions
  • Privacy Policy
  • Help
  • Screen Reader Access
  • Guidelines

Visitors

  • Last Updated​ :
  • Visitors Counter :
  • Version :
CONTENT OWNED AND MAINTAINED BY : Kodagu District Police
Designed, Developed and Hosted by: Center for e-Governance - Web Portal, Government of Karnataka © 2022, All Rights Reserved.

Best viewed in Chrome v-87.0.4280.141, Microsoft Edge v-87.0.664.75, Firefox -v-83.0 Browsers. Resolution : 1280x800 to 1920x1080