ಅಭಿಪ್ರಾಯ / ಸಲಹೆಗಳು

ಅಕ್ರಮ ಅಂತರಾಜ್ಯ ಮದ್ಯ ಸಾಗಾಟ ಪ್ರಕರಣ.

            ಕರ್ನಾಟಕ ರಾಜ್ಯದಿಂದ ಕೇರಳ ರಾಜ್ಯಕ್ಕೆ ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಗೋಣಿಕೊಪ್ಪ ಠಾಣೆ ಪೊಲೀಸರು ಪತ್ತೆ ಮಾಡಿ ಮದ್ಯ ಹಾಗೂ ವಾಹನ ಸಹಿತ ಆರೋಪಿಗಳನ್ನು ಬಂಧಿಸಿದ್ದಾರೆ.

            ದಿನಾಂಕ: 17.05.2021 ರಂದು ಮದ್ಯವನ್ನು ಅಕ್ರಮವಾಗಿ ಕೊಡಗು ಜಿಲ್ಲೆಯ ಮೂಲಕ ಕೇರಳ ರಾಜ್ಯಕ್ಕೆ ಸಾಗಾಟ ಮಾಡಲು  ಮೈಸೂರು ಜಿಲ್ಲೆ ಹುಣಸೂರಿನಿಂದ ಕೆಎಲ್-58-ವೈ-2997  ನೋಂದಣಿ ಸಂಖ್ಯೆಯ ಗೂಡ್ಸ್‌ ವಾಹನದಲ್ಲಿ ತರಕಾರಿಯೊಂದಿಗೆ ಮದ್ಯದ ಬಾಟಲಿಗಳನ್ನು ಪ್ಲಾಸ್ಟಿಕ್‌ ಚೀಲಗಳಲ್ಲಿ ತುಂಬಿಸಿಕೊಂಡು ಸಾಗಾಟ ಮಾಡುತ್ತಿರುವಾಗ ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕು ಆನೆ ಚೌಕೂರು ಚೆಕ್‌ಪೋಸ್ಟ್‌ ನಲ್ಲಿ ಕರ್ತವ್ಯದಲ್ಲಿದ್ದ ಗೋಣಿಕೊಪ್ಪ ಠಾಣೆಯ ಪೊಲೀಸ್‌ ಅಧಿಕಾರಿ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಮಾಲು ಸಹಿತ ವಾಹನ ಮತ್ತು ಆರೋಪಿಗಳನ್ನು ವಶಕ್ಕೆ ಪಡೆದು ನೀಡಿದ ವರದಿಯ ಮೇರೆ ಗೋಣಿಕೊಪ್ಪ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡುತನಿಖೆ ಕೈಗೊಂಡಿದ್ದಾರೆ.

            ಆರೋಪಿಗಳಾದ ಕೇರಳ ರಾಜ್ಯದ ಇರಿಟ್ಟಿ ನಿವಾಸಿಗಳಾದ ಅನೂಪ್‌ ಕುಮಾರ್‌ ಮತ್ತು ಉದಯಕುಮಾರ್‌ ಎಂಬುವವರನ್ನು ವಶಕ್ಕೆ ಪಡೆದು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಅಂದಾಜು 1.20 ಲಕ್ಷ ಮೌಲ್ಯದ ಮದ್ಯವನ್ನು ವಶಕ್ಕೆ ಪಡೆದಿರುತ್ತಾರೆ.

            ಈ ಕಾರ್ಯಾಚರಣೆಯಲ್ಲಿ ವಿರಾಜಪೇಟೆ ಉಪವಿಭಾಗ ಡಿವೈಎಸ್‌.ಪಿ ಜಯಕುಮಾರ್‌, ಗೋಣಿಕೊಪ್ಪ ವೃತ್ತ ಸಿ.ಪಿ.ಐ ಜಯರಾಮ್‌, ಗೋಣಿಕೊಪ್ಪ ಠಾಣೆ ಪಿ.ಎಸ್.ಐ ಸುಬ್ಬಯ್ಯ ರವರ ನೇತೃತ್ವದಲ್ಲಿ ಎ.ಎಸ್.ಐ ದೇವರಾಜು ಸಿಬ್ಬಂದಿಯವರಾದ  ಉಮೇಶ್‌ ಮತ್ತು ರಾಘವೇಂದ್ರ ರವರು ಪಾಲ್ಗೊಂಡಿದ್ದು ಪೊಲೀಸ್‌ ಅಧಿಕಾರಿ ಮತ್ತು ಸಿಬ್ಬಂದಿಯವರ ಕಾರ್ಯವನ್ನು ಶ್ಲಾಘಿಸಲಾಗಿದೆ.

ಅಕ್ರಮ ಮದ್ಯ ಮಾರಾಟ ಪ್ರಕರಣ

            ದಿನಾಂಕ: 16-05-2021 ರಂದು ವಿರಾಜಪೇಟೆ ನಗರದ ಚರ್ಚ್‌ ರಸ್ತೆಯ ಬಳಿ ಚರ್ಚ್‌ ರಸ್ತೆ ನಿವಾಸಿ  ಜೆಮ್ಸ್ ಎಂಬುವವರು  ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಸಾರ್ವಜನಿಕರಿಗೆ ಮದ್ಯ ಮಾರಾಟ  ಮಾಡುತ್ತಿದ್ದ ಪ್ರಕರಣವನ್ನು ವಿರಾಜಪೇಟೆ ಪಟ್ಟಣ  ಠಾಣೆ ಪಿಎಸ್‍ಐ ಜಗದೀಶ್‌ ಧೂಳಶೆಟ್ಟಿ  ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಿದ್ದಾರೆ.

ಇತ್ತೀಚಿನ ನವೀಕರಣ​ : 17-05-2021 05:40 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ