ಅಭಿಪ್ರಾಯ / ಸಲಹೆಗಳು

ಅಕ್ರಮ ಜೂಜಾಟ ಪ್ರಕರಣ

            ದಿನಾಂಕ: 16-06-2021 ರಂದು ಮಡಿಕೇರಿ ತಾಲ್ಲೂಕು ಅಯ್ಯಂಗೇರಿ ಗ್ರಾಮದಲ್ಲಿ ಅಕ್ರಮವಾಗಿ ಜೂಜಾಟವಾಡುತ್ತಿದ್ದ ಪ್ರಕರಣವನ್ನು ಭಾಗಮಂಡಲ ಠಾಣೆ ಪಿಎಸ್‌ಐ ಮಹದೇವ್‌ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.

 ಹಲ್ಲೆ ಪ್ರಕರಣ

            ದಿನಾಂಕ: 16-06-2021 ರಂದು ಸೋಮವಾರಪೇಟೆ ತಾಲ್ಲೂಕು ಕೂಡ್ಲೂರು ಗ್ರಾಮದ ನಿವಾಸಿಗಳಾದ ಚೇತನ್‌ ಮತ್ತು ಇತರರು ಹಾಗೂ ದೊರೆ, ವಸಂತ, ಪಾಲಾಕ್ಷ ಮತ್ತು ಇತರರು ಜಾಗದ ವಿಚಾರದಲ್ಲಿ ಪರಸ್ಪರ ಜಗಳ ಮಾಡಿ ಹಲ್ಲೆ ಮಾಡಿ ಗಾಯಪಡಿಸಿ ಕೊಲೆ ಬೆದರಿಕೆ ಹಾಕಿದ್ದು ಈ ಬಗ್ಗೆ ಉಭಯ ಕಡೆಯವರು ನೀಡಿದ ಪುಕಾರಿನ ಮೇರೆ ಶನಿವಾರಸಂತೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಅಕ್ರಮ ಮದ್ಯ ಮಾರಾಟ ಪ್ರಕರಣ

ದಿನಾಂಕ: 16-06-2021 ರಂದು ವಿರಾಜಪೇಟೆ ತಾಲ್ಲೂಕು ಮೇಕೂರು ಹೊಸ್ಕೇರಿ ಗ್ರಾಮದ ಶಾಸ್ತ್ರಿಹಳ್ಳಿ ನಿವಾಸಿ ರತೀಶ್‌ ಎಂಬುವವರು ಅವರ ವಾಸದ ಮನೆಯ ಬಳಿ ಅಕ್ರಮವಾಗಿ ಸಾರ್ವಜನಿಕರಿಗೆ ಮದ್ಯ ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ಸಿದ್ದಾಪುರ ಠಾಣೆ ಪಿಎಸ್ಐ ಮೋಹನ್ ರಾಜ್ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ರಸ್ತೆ ಅಪಘಾತ ಪ್ರಕರಣ

            ದಿನಾಂಕ: 16-06-2021 ರಂದು ಗೋಣಿಕೊಪ್ಪ ಹರಿಶ್ಚಂದ್ರಪುರ ಬಳಿ ಮುಖಯ ರಸ್ತೆಯಲ್ಲಿ ಕೆಎ-04-ಎಂಡಿ-9112 ರ ಕಾರನ್ನು ಅದರ ಚಾಲಕ ಅನುಕುಮಾರ್‌ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಎದುರುಗಡೆಯಿಂದ ಬರುತ್ತಿದ್ದ ಕೆ-12-ಎ-7205 ರ ಆಟೋರಿಕ್ಷಾಕ್ಕೆ ಡಿಕ್ಕಿಪಡಿಸಿದ ಪರಿಣಾಮ ಆಟೋ ಚಾಲಕ ವಿವಿನ್‌ ಎಂಬುವವರು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಗೋಣಿಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 ಕೋವಿಡ್ ನಿಯಮ ಉಲ್ಲಂಘನೆ ಪ್ರಕರಣ

                ದಿನಾಂಕ: 16-06-2021 ರಂದು ಸೋಮವಾರಪೇಟೆ ತಾಲ್ಲೂಕು ಶಿರಂಗಾಲ ಗ್ರಾಮದ ನಿವಾಸಿ ಚೇತನ್‌ ಎಂಬುವವರು ಅವರ ಬೈಕ್‌ ರಿಪೇರಿ ಮಳಿಗೆಯನ್ನು  ಸರ್ಕಾರದ ಮಾರ್ಗಸೂಚಿ ಪಾಲಿಸದೆ ಕೋವಿಡ್‍  ಸಾಂಕ್ರಾಮಿಕ ರೋಗ ಹರಡುವ ಸಂಭವವಿದ್ದರೂ ಸಹಾ  ಮಾರ್ಗಸೂಚಿ ಉಲ್ಲಂಘಿಸಿ ಅವಧಿ ಮೀರಿ ಅಂಗಡಿ ತೆರೆದಿದ್ದು ಈ ಬಗ್ಗೆ ಶಿರಂಗಾಲ ಗ್ರಾಮ ಪಂಚಾಯತ್‌ ಅಧಿಕಾರಿಗಳು ನೀಡಿದ  ದೂರಿನ ಮೇರೆ ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 17-06-2021 03:44 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ