ಅಭಿಪ್ರಾಯ / ಸಲಹೆಗಳು

ಆನ್ ಲೈನ್‍ ವಂಚನೆ ಪ್ರಕರಣ

            ಕುಶಾಲನಗರ ತಾಲ್ಲೂಕು ಚೇರಳ ಶ್ರೀಮಂಗಲ ಗ್ರಾಮದ ನಿವಾಸಿ ಕಿರಣ್ ಗಣಪತಿ ಎಂಬುವವರು ಎಸ್.ಬಿ.ಐ ಬ್ಯಾಂಕ್ ನಲ್ಲಿ ಖಾತೆಯನ್ನು ಹೊಂದಿರುತ್ತಾರೆ. ದಿನಾಂಕ: 13-07-2021 ರಂದು ಮೊಬೈಲ್‍ ನಂಬರ್ 8392047599 ಮತ್ತು  8918324776 ರಿಂದ ಅಪರಿಚಿತರು ಕರೆ ಮಾಡಿ ಬ್ಯಾಂಕ್‍ ನಿಂದ ಕರೆ ಮಾಡುತ್ತಿರುವುದಾಗಿ ತಿಳಿಸಿ ಡೆಬಿಟ್‍ ಕಾರ್ಡ್‍ ವಿವರ ಮತ್ತು ಒಟಿಪಿ ಪಡೆದು ಖಾತೆಯಿಂದ ₹. 1,24,760 ಹಣವನ್ನು ತೆಗೆದು ವಂಚನೆ ಮಾಡಿದ್ದು ಈ ಬಗ್ಗೆ ದಿನಾಂಕ: 16-07-2021 ರಂದು ನೀಡಿದ ದೂರಿನ ಮೇರೆ ಕೊಡಗು ಸೈಬರ್‍ ಅಪರಾಧ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಆನ್ ಲೈನ್‍ ವಂಚನೆ ಪ್ರಕರಣ

            ಮಡಿಕೇರಿ ನಗರದ ಜಿ.ಟಿ ರಸ್ತೆ ನಿವಾಸಿ ಮಹಿಳೆಯೊಬ್ಬರ ಐ.ಸಿ.ಐ.ಸಿ.ಐ ಬ್ಯಾಂಕ್ ‍ನಲ್ಲಿ ಖಾತೆಯನ್ನು ಹೊಂದಿರುತ್ತಾರೆ. ದಿನಾಂಕ: 08-07-2021 ರಿಂದ 14-07-2021 ರ ಮಧ್ಯೆ ಹಂತ ಹಂತವಾಗಿ ಖಾತೆಯಿಂದ ಹಣ ಕಡಿತಗೊಂಡಿರುತ್ತದೆ. ಯಾವುದೇ ಡೆಬಿಟ್‍ ಕಾರ್ಡ್ ವಿವರ, ಒ.ಟಿ.ಪಿ ನೀಡದೇ ಇದ್ದು ಅವರಿಗೆ ತಿಳಿಯದಂತೆ ₹. 1,11,022 ಹಣವನ್ನು ತೆಗೆದು ವಂಚನೆ ಮಾಡಿದ್ದು ಈ ಬಗ್ಗೆ ದಿನಾಂಕ: 16-07-2021 ರಂದು ನೀಡಿದ ದೂರಿನ ಮೇರೆ ಕೊಡಗು ಸೈಬರ್‍ ಅಪರಾಧ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 ಸಾರ್ವಜನಿಕರು ಆನ್ ಲೈನ್ ಹಣಕಾಸು ವ್ಯವಹಾರಕ್ಕಾಗಿ ತಮ್ಮ ಬ್ಯಾಂಕ್ ನ ಅಧಿಕೃತ ಅಪ್ಲಿಕೇಶನ್ ಗಳನ್ನು ಬಳಸುವುದು. ಬ್ಯಾಂಕ್ ಅಥವಾ ಇತರೆ ಹಣಕಾಸು ಸಂಸ್ಥೆಗಳ ಅಧಿಕಾರಿಗಳ ಹೆಸರಿನಲ್ಲಿ ಕರೆ ಮಾಡಿ ಮೋಸದಿಂದ ಆನ್ ಲೈನ್ ಮೂಲಕ ಹಣ ವರ್ಗಾವಣೆ ಮಾಡಿಕೊಂಡು ಸಾರ್ವಜನಿಕರಿಗೆ ವಂಚನೆ ಮಾಡುತ್ತಿರುವ ಪ್ರಕರಣಗಳು ಹೆಚ್ಚು ವರದಿಯಾಗುತ್ತಿದೆ. ಯಾವುದೇ ಅಧಿಕೃತ ಬ್ಯಾಂಕ್ ಅಥವಾ ಹಣಕಾಸು ಸಂಸ್ಥೆಗಳು ಸಾರ್ವಜನಿಕರೊಂದಿಗೆ ಫೋನ್ ಮೂಲಕ ವ್ಯವಹರಿಸುವುದಿಲ್ಲ. ಸಾರ್ವಜನಿಕರು ತಮ್ಮ ಬ್ಯಾಂಕ್ ಖಾತೆ, ಆನ್ ಲೈನ್‍ ಹಣ ವರ್ಗಾವಣೆ, ಎ.ಟಿ.ಎಂ, ಮ್ಯೂಚುವಲ್ ಫಂಡ್, ಉಳಿತಾಯ ಪತ್ರಗಳು ಹಾಗೂ ಇತರ ಯಾವುದೇ  ರೀತಿಯ ಹಣಕಾಸು ವಹಿವಾಟಿನ ಪ್ರಕ್ರಿಯೆಗಳಲ್ಲಿ ತೊಡಕುಂಟಾದಾಗ ನೇರವಾಗಿ ಸಂಬಂದಪಟ್ಟ ಬ್ಯಾಂಕ್ ಅಥವಾ ಹಣಕಾಸು ಸಂಸ್ಥೆಗಳಿಗೆ ತೆರಳಿ ಪರಿಹರಿಸಿಕೊಳ್ಳುವುದು. ಹಣಕಾಸು ಸಂಸ್ಥೆಗಳ ಅಥವಾ ಯು.ಪಿ.ಐ ಆಧಾರಿತ ಆನ್ ಲೈನ್ ಸೇವಾ ಸಂಸ್ಥೆಗಳ ಹೆಸರಿನಲ್ಲಿ ಕರೆ ಮಾಡುವ ವ್ಯಕ್ತಿಗಳು ಬ್ಯಾಂಕ್ ಅಕೌಂಟ್ ನಂಬರ್, ಎ.ಟಿ.ಎಂ ನಂಬರ್, ಸಿವಿವಿ ನಂಬರ್, ಒ.ಟಿ.ಪಿ, ಎಟಿಎಂ ಪಿನ್ ನಂಬರ್, ಗೂಗಲ್ ಪೇ, ಫೋನ್ ಪೇ, ಇತರೆ ಯು.ಪಿ.ಐ ಆಧಾರಿತ ಆನ್ ಲೈನ್ ಹಣಕಾಸು ವರ್ಗಾವಣೆ ಅಪ್ಲಿಕೇಶನ್ ಗಳ ಕ್ಯೂ.ಆರ್ ಕೋಡ್‍ ಸ್ಕ್ಯಾನ್‍ ಮಾಡಲು ಹೇಳಿ ಹಾಗೂ ಕೋಡ್ ಗಳನ್ನು ಕೇಳಿ ಪಡೆದು ವಂಚನೆ ಮಾಡುತ್ತಿದ್ದು ಇಂತಹ ಗೌಪ್ಯ ಸಂಖ್ಯೆಗಳನ್ನು ಯಾರಿಗೂ ನೀಡದಂತೆ ಸೂಚಸಲಾಗಿದೆ.

ರಸ್ತೆ ಅಪಘಾತ ಪ್ರಕರಣ

            ದಿನಾಂಕ: 16-07-2021 ರಂದು ಪೊನ್ನಂಪೇಟೆ ತಾಲ್ಲೂಕು ಕೋತೂರು ಗ್ರಾಮದ ಬಳಿ ಸಾರ್ವಜನಿಕ ರಸ್ತೆಯಲ್ಲಿ ಕೆಎ-02-ಎಂಜೆ-0022 ರ ಕಾರನ್ನು ಅದರ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ರಸ್ತೆಬದಿಯಲ್ಲಿದದ ಬಾಲಕನೋರ್ವನಿಗೆ ಡಿಕ್ಕಿಪಡಿಸಿದ ಪರಿಣಾಮ ಬಿದ್ದು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ದೂರಿನ ಮೇರೆ ಕುಟ್ಟ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 17-07-2021 01:32 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ