ಅಭಿಪ್ರಾಯ / ಸಲಹೆಗಳು

ಬೈಕ್‌ ಕಳವು ಪ್ರಕರಣ

          ದಿನಾಂಕ: 17-02-2021 ರಂದು ವಿರಾಜಪೇಟೆ ಪಟ್ಟಣದ ಎಸ್.ಬಿ.ಐ ಬ್ಯಾಂಕ್‌ ಬಳಿ ಅಪ್ಪಯ್ಯ ಎಂಬುವವರು ನಿಲ್ಲಿಸಿದ್ದ ಕೆಎ-12-ಆರ್‌-2285 ರ ಹೀರೋ ಹೆಚ್‌.ಎಫ್‌ ಡಿಲಕ್ಸ್‌ ಬೈಕನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ವಿರಾಜಪೇಟೆ ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಹಲ್ಲೆ ಪ್ರಕರಣ

          ದಿನಾಂಕ: 15-02-2021 ರಂದು ಸೋಮವಾರಪೇಟೆ ಪಟ್ಟಣದ ಎಂ.ಡಿ ಬ್ಲಾಕ್‌ ನಿವಾಸಿ ದೇವರಾಜು ಎಂಬುವವರು ದಿವ್ಯಶ್ರೀ ಹೊಟೇಲ್‌ ನಲ್ಲಿ ಸ್ನೇಹಿತರೊಂದಿಗೆ ಮಾತನಾಡಿಕೊಂಡಿರುವಾಗ ಆಲೆಕಟ್ಟೆ ನಿವಾಸಿ ಕಿರಣ್‌ ಎಂಬುವವರು ಕ್ಷುಲ್ಲಕ ಕಾರಣಕ್ಕೆ ವೈಷಮ್ಯದಿಂದ ಕೊಲೆ ಮಾಡುವ ಉದ್ದೇಶದಿಂದ ಚಾಕುವಿನಿಂದ ಹಲ್ಲೆ ಮಾಡಿ ಗಾಯಪಡಿಸಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಸೋಮವಾರಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಹಲ್ಲೆ ಪ್ರಕರಣ

          ದಿನಾಂಕ: 16-02-2021 ರಂದು ರಾತ್ರಿ ಸೋಮವಾಪೇಟೆ ತಾಲ್ಲೂಕು ನಲವತ್ತೆಕ್ರೆ ನಿವಾಸಿ ನಾಗರಾಜ ಎಂಬುವವರಿಗೆ ಸುಂಟಿಕೊಪ್ಪ ಗ್ರಾಮದ ವಂದನಾ ಬಾರ್‌ ನಲ್ಲಿ ರಿನ್ನ ಮತ್ತು ಇತರರು ಕ್ಷುಲ್ಲಕ ಕಾರಣಕ್ಕೆ ಹಲ್ಲೆ ಮಾಡಿ ಗಾಯಪಡಿಸಿ ಕೊಲೆ ಬೆದರಿಕೆ ಹಾಕಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಸುಂಟಿಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ವ್ಯಕ್ತಿ ಆತ್ಮಹತ್ಯೆ

ವಿರಾಜಪೇಟೆ ತಾಲ್ಲೂಕು ಘಟದಳ ಗ್ರಾಮದ ನಿವಾಸಿ ಶರವಣ ಎಂಬುವವರಿಗೆ ಮದ್ಯಪಾನ ಮಾಡುವ ಅಭ್ಯಾಸವಿದ್ದು ಜೀವನದಲ್ಲಿ ಜಿಗುಪ್ಸೆಗೊಂಡು ದಿನಾಂಕ: 16-02-2021 ರಂದು ರಾತ್ರಿ ಅವರ ವಾಸದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು ಈ ಬಗ್ಗೆ ಮೃತರ ಪತ್ನಿ ನೀಡಿದ ದೂರಿನ ಮೇರೆ ಸಿದ್ದಾಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 18-02-2021 12:20 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ