ಅಭಿಪ್ರಾಯ / ಸಲಹೆಗಳು

ರಸ್ತೆ ಅಪಘಾತ

ದಿನಾಂಕ 13/09/2021ರಂದು ಸೋಮವಾರಪೇಟೆಯ ಆಲೆಕಟ್ಟೆ ನಿವಾಸಿ ರವಿ ಎಂಬವರು ಸೋಮವಾರಪೇಟೆ ಬಳಿಯ ಬಿಳೀಗೇರಿ ನಿವಾಸಿ ರಾಮ ಎಂಬವರೊಡನೆ ಅವರ ಬೈಕಿನಲ್ಲಿ ಬಿಳಿಗೇರಿ ಕಡೆಗೆ ಹೋಗುತ್ತಿರುವಾಗ ಐಗೂರು ಬಳಿ ರಾಮರವರು ಬೈಕನ್ನು ಅತಿ ವೇಗ ಮತ್ತು ಅಜಾಗರೂಕತೆಯಿಂದ ಚಾಲಿಸಿದ ಪರಿಣಾಮ ಬೈಕು ನಿಯಂತ್ರಣ ಕಳೆದುಕೊಂಡಯ ರಸ್ತೆಯಲ್ಲಿ ಬಿದ್ದ ಪರಿಣಾಮ ರಾಮ ಹಾಗೂ ರವಿರವರಿಗೆ ಗಾಯಗಳಾಗಿರುವುದಾಗಿ ನೀಡಿದ ದೂರಿನ ಮೇರೆಗೆ ಸೋಮವಾರಪೇಟೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 

ಹಲ್ಲೆ ಪ್ರಕರಣ

ದಿನಾಂಕ 17/09/2021ರಂದು ಕುಶಾಲನಗರ ಬಳಿಯ ಸೀಗೆಹೊಸೂರು ನಿವಾಸಿ ಜನಾರ್ಧನ ಎಂಬವರು ದನಗಳನ್ನು ಕಾಡಿಗೆ ಬಿಟ್ಟು ಬರಲೆಂದು ಹೋಗುತ್ತಿರುವಾಗ ದಾರಿಯಲ್ಲಿ ಅದೇ ಗ್ರಾಮದ ನಿವಾಸಿ ಸೋದನ್‌ ಎಂಬವರು ಜನಾರ್ಧನರವರನ್ನು ಅಡ್ಡಗಟ್ಟಿ ಕೊಡೆಯ ವಿಚಾರದಲ್ಲಿ ಜಗಳವಾಡಿ ಕೈಯಿಂದ ಹೊಡೆದು ಹಲ್ಲೆ ಮಾಡಿರುವುದಾಗಿ ನೀಡಿದ ದೂರಿನ ಮೇರೆಗೆ ಕುಶಾಲನಗರ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 

ಮನುಷ್ಯ ಕಾಣೆ ಪ್ರಕರಣ

ವಿರಾಜಪೇಟೆ ಬಳಿಯ ಪೆರುಂಬಾಡಿ ನಿವಾಸಿ ವನಜಾಕ್ಷಿ ಎಂಬವರ ಪತಿ ಸರ್ನಿಸ್‌ ಎಂಬವರು ಸುಮಾರು ಒಂದೂವರೆ ವರ್ಷದ ಹಿಂದೆ ಮನೆಯಿಂದ ಎಲ್ಲಿಗೋ ಹೋದವರು ಇದುವರೆಗೂ ಮರಳಿ ಬಾರದೆ ಕಾಣೆಯಾಗಿರುವುದಾಗಿ ನೀಡಿದ ದೂರಿನ ಮೇರೆಗೆ ವಿರಾಜಪೇಟೆ ನಗರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 18-09-2021 01:09 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080