ಅಭಿಪ್ರಾಯ / ಸಲಹೆಗಳು

ಅಕ್ರಮ ಜೂಜಾಟ ಪ್ರಕರಣ

            ದಿನಾಂಕ: 17-11-2021 ರಂದು ಸೋಮವಾರಪೇಟೆ  ತಾಲ್ಲೂಕು ಕರ್ಕಳ್ಳಿ ಬಾಣೆ ಗ್ರಾಮದ ಬಳಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಇಸ್ಪೀಟ್‌ ಜೂಜಾಟಾಡುತ್ತಿದ್ದ ಪ್ರಕರಣವನ್ನು ಸೋಮವಾರಪೇಟೆ  ಠಾಣೆ ಪಿಎಸ್‌ಐ ಶ್ರೀಧರ್ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.

 ಸುಳ್ಳು ದಾಖಲೆ ಸೃಷ್ಟಿಸಿ ವಂಚನೆ ಪ್ರಕರಣ

                ಕುಶಾಲನಗರದ ರಥಬೀದಿ ನಿವಾಸಿ ಸತ್ಯನಾರಾಯಣ ಎಂಬುವವರ ತಂದೆ 2008 ನೇ ಇಸವಿಯಲ್ಲಿ ಮೃತಪಟ್ಟಿದ್ದು ನಂತರ ಕುಮಾರ್‌ ಎಂಬ ವ್ಯಕ್ತಿ ಸುಳ್ಳು ದಾಖಲೆಗಳನ್ನು ಸೃಷ್ಟಿ ಮಾಡಿ ತನ್ನ ಹೆಸರಿಗೆ ಸಾಮಾನ್ಯ ಅಧಿಕಾರಿ ಪತ್ರವನ್ನು ತಯಾರಿಸಿಕೊಂಡಿರುತ್ತಾರೆ. 2019 ರಲ್ಲಿ ದಾಖಲಾತಿಗಳ ನೈಜತೆ ಪರಿಶೀಲಿಸದೇ ದಸ್ತಾವೇಜು ಬರಹಗಾರ ರಾಜೀವ್‌ ಮತ್ತು ಕುಶಾಲನಗರ ನೋಂದಣಾಧಿಕಾರಿ ಚೇತನ್‌ ಎಂಬುವವರು ಗೋಪಾಲ್‌ ಎಂಬುವವರಿಗೆ ರಿಜಿಸ್ಟರ್‌ ಮಾಡಿಕೊಟ್ಟು ಅಕ್ರಮ ಹಣ ಮಾಡುವ ಉದ್ದೇಶದಿಂದ ವಂಚನೆಯಿಂದ ಆಸ್ತಿ ವರ್ಗಾವಣೆ ಮಾಡಿರುವ ಬಗ್ಗೆ ದಿನಾಂಕ; 17-11-2021 ರಂದು ನೀಡಿದ ಪುಕಾರಿನ ಮೇರೆ ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 ಹಲ್ಲೆ ಪ್ರಕರಣ

                ದಿನಾಂಕ: 16-11-2021 ರಂದು ಕುಶಾಲನಗರ ತಾಲ್ಲೂಕು ಹುದುಗೂರು ಸೀತಾ ಕಾಲೋನಿ ನಿವಾಸಿ ಸುಶೀಲ ಎಂಬುವವರು ಅವರ ಪಕ್ಕದ ಮನೆಯ ನಿವಾಸಿ ರಾಣಿ ಎಂಬುವವರು ಕ್ಷುಲ್ಲಕ ಕಾರಣಕ್ಕೆ ದೊಣ್ಣೆಯಿಂದ ಹಲ್ಲೆ ಮಾಡಿ ಗಾಯಪಡಿಸಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 18-11-2021 01:59 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080