ಅಭಿಪ್ರಾಯ / ಸಲಹೆಗಳು

ಕಳವು ಪ್ರಕರಣ

            ದಿನಾಂಕ: 17-04-2022 ರಂದು ರಾತ್ರಿ ಪೊನ್ನಂಪೇಟೆ ತಾಲ್ಲೂಕು ಜೋಡುಬೀಟಿ ಗ್ರಾಮದ ಮನಿಕಂಠ ಎಂಬುವವರ ವರ್ಕ್‌ ಶಾಪ್‌ ನ ಬೀಗವನ್ನು ಮುರಿದು ಗಾಜನ್ನು ಒಡೆದು ಒಳನುಗ್ಗಿ ಕ್ಯಾಶ್‌ ಕೌಂಟರ್‌ ನಲ್ಲಿ ಇಟ್ಟಿದ್ದ ₹. 25,000 ನಗದು ಹಣವನ್ನು ವಿಜು ಮತ್ತು ಇತರರು ಸೇರಿ ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಗೋಣಿಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಸಾರ್ವಜನಿಕ ಸ್ಥಳದಲ್ಲಿ ಅಕ್ರಮ ಮದ್ಯ ಸೇವನೆ ಪ್ರಕರಣ

            ದಿನಾಂಕ : 17-04-2022 ರಂದು ವಿರಾಜಪೇಟೆ ತಾಲ್ಲೂಕು ಆರ್ಜಿ ಗ್ರಾಮದ ಕಂಡಿಮಕ್ಕಿ ರಸ್ತೆಯ ಬಳಿ ಸಾರ್ವಜನಿಕ ಸ್ಥಳದಲ್ಲಿ ದೇವಯ್ಯ, ಗಣಪತಿ, ವಸಂತ , ಕಿರಣ್‌, ಮಂಜುನಾಥ್‌, ಯತೀಶ್‌ ಕುಮಾರ್‌ ಎಂಬುವವರು ಕೆಎ-12-ಎನ್‌-9390 ರ ಕಾರಿನಲ್ಲಿ ಮದ್ಯವನ್ನು ಇಟ್ಟುಕೊಂಡು ಸಾರ್ವಜನಿಕ ಸ್ಥಳದಲ್ಲಿ ಪರವಾನಗಿ ಇಲ್ಲದೇ ಮದ್ಯ ಸೇವನೆ ಮಾಡುತ್ತಿದ್ದ ಪ್ರಕರಣವನ್ನು ವಿರಾಜಪೇಟೆ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಕಳವು ಪ್ರಕರಣ

            ದಿನಾಂಕ 13-04-2022 ರಿಂದ 15-04-2022 ರ ನಡುವಿನ ದಿನಗಳಲ್ಲಿ ಮಡಿಕೇರಿ ತಾಲ್ಲೂಕು ಕಿಗ್ಗಾಲು ಗ್ರಾಮದ ನಿವಾಸಿ ಶ್ವೇತಾ ಎಂಬುವವರ ಮನೆಯ ಬಾಗಿಲಿನ ಬೀಗವನ್ನು ಯಾರೋ ಕಳ್ಳರು ತೆಗೆದು ಮನೆಯ ಮೇಲ್ಭಾಗದ ಮಹಡಿಯಲ್ಲಿ ಚೀಲದಲ್ಲಿ ಇಟ್ಟಿದ್ದ ₹. 70,000 ಮೌಲ್ಯದ ಕಾಳುಮೆಣಸನ್ನು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 20-04-2022 10:57 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080