ಅಭಿಪ್ರಾಯ / ಸಲಹೆಗಳು

ರಸ್ತೆ ಅಪಘಾತ ಪ್ರಕರಣ

                ದಿನಾಂಕ: 19-05-2021 ರಂದು ಪೊನ್ನಂಪೇಟೆ ತಾಲ್ಲೂಕು ಬೇಗೂರು ಗ್ರಾಮದ ಬಳಿ ಮುಖ್ಯ ರಸ್ತೆಯಲ್ಲಿ ಸಿಕೆಎನ್‌ 8773 ರ ಕಾರನ್ನು ಅದರ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಎದುರುಗಡೆಯಿಂದ ಬರುತ್ತಿದ್ದ ಕೆಎ-51-ಹೆಚ್-4318‌ ರ ಬೈಕ್‌ ಗೆ ಡಿಕ್ಕಿಪಡಿಸಿದ ಪರಿಣಾಮ ಬೈಕ್‌ ಸವಾರ ಎಂ.ಕೆ ರಮೇಶ್‌ ಎಂಬುವವರು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಪೊನ್ನಂಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಅಕ್ರಮ ಮದ್ಯ ಮಾರಾಟ ಪ್ರಕರಣ

                ದಿನಾಂಕ: 19-05-2021 ರಂದು ಮಡಿಕೇರಿ ತಾಲ್ಲೂಕು ಕೊಡಂಬೂರು ಗ್ರಾಮದ ನಿವಾಸಿ  ತಿಮ್ಮಯ್ಯ ಎಂಬುವವರು ಅವರ ಮನೆಯ ಅಂಗಳದಲ್ಲಿ ಮದ್ಯವನ್ನು ಇಟ್ಟುಕೊಂಡು ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಸಾರ್ವಜನಿಕರಿಗೆ ಮದ್ಯ ಮಾರಾಟ  ಮಾಡುತ್ತಿದ್ದ ಪ್ರಕರಣವನ್ನು ಮಡಿಕೇರಿ ಗ್ರಾಮಾಂತರ ಠಾಣೆ ಪಿ.ಐ ರವಿಶಂಕರ್  ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಿದ್ದಾರೆ.

ಲಾಕ್‌ ಡೌನ್ ನಿಯಮ ಉಲ್ಲಂಘನೆ ಪ್ರಕರಣ

                ದಿನಾಂಕ: 19-05-2021 ರಂದು ವಿರಾಜಪೇಟೆ ತಾಲ್ಲೂಕು ಅರಪಟ್ಟು ಗ್ರಾಮದ ಪೊದವಾಡ ನಿವಾಸಿ ಉತ್ತಪ್ಪ ಎಂಬುವವರು ಕೋವಿಡ್‍-19 ಸಾಂಕ್ರಾಮಿಕ ರೋಗ ಹರಡುವಿಕೆ ತಡೆಗಟ್ಟಲು ಸರ್ಕಾರ ನಿಗದಿಪಡಿಸಿರುವ ಮಾರ್ಗಸೂಚಿ ಉಲ್ಲಂಘಿಸಿ ದಿನಸಿ ಅಂಗಡಿಯನ್ನು ತೆರೆದು ಸಾರ್ವಜನಿಕರು ವ್ಯಾಪಾರ ವಹಿವಾಟು ನಡೆಸಲು ಅವಕಾಶ ನೀಡುತ್ತಿದ್ದ ಮೇರೆ ವಿರಾಜಪೇಟೆ ಠಾಣೆ ಪಿಎಸ್‍ಐ ಸಿದ್ದಲಿಂಗ ಬಾನಸೆ ಮತ್ತು ಸಿಬ್ಬಂದಿಯವರು ಪರಿಶೀಲನೆ ಮಾಡಿ ನೀಡಿದ ವರದಿ ಮೇರೆ ವಿರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ಧಾರೆ.

 

ಇತ್ತೀಚಿನ ನವೀಕರಣ​ : 20-05-2021 03:31 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ