ಅಭಿಪ್ರಾಯ / ಸಲಹೆಗಳು

ರಸ್ತೆ ಅಪಘಾತ ಪ್ರಕರಣ

            ದಿನಾಂಕ: 18-09-2021 ರಂದು ಕುಶಾಲನಗರ ತಾಲ್ಲೂಕು ಕೂಡುಮಂಗಳೂರು ಗ್ರಾಮದ ಬಳಿ ಮುಖ್ಯ ರಸ್ತೆಯಲ್ಲಿ ಕೆಎ-12-ಬಿ-9420 ರ ಗೂಡ್ಸ್‌ ವಾಹನವನ್ನು ಅದರ ಚಾಲಕ ರಾಜೇಶ್‌ ಎಂಬುವವರು ಅತಿವೇಗ ಮತ್ತು ಅಜಾಗರೂರಕತೆಯಿಂದ ಚಾಲನೆ ಮಾಡಿಕೊಡು ಹೋಗಿ ಕೆಎ-12-ಕ್ಯೂ-5773 ರ ಬೈಕ್‌ ಗೆ ಡಿಕ್ಕಿಪಡಿಸಿದ ಪರಿಣಾಮ ಸವಾರ ಹನುಮಂತಯ್ಯ ಎಂಬುವವರು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಕುಶಾಲನಗರ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 ಅಕ್ರಮ ಮದ್ಯ ಮಾರಾಟ ಪ್ರಕರಣ

            ದಿನಾಂಕ: 19-09-2021 ರಂದು ಕುಶಾಲನಗರ ತಾಲ್ಲೂಕು ಹುದುಗೂರು ಗ್ರಾಮದ ನಿವಾಸಿ ಮಧು ಎಂಬುವವರು ಅಕ್ರಮವಾಗಿ ಬೈಕ್‌ ನಲ್ಲಿ ಮದ್ಯವನ್ನು ಇಟ್ಟುಕೊಂಡು ಬ್ಯಾಡಗೊಟ್ಟ ಗ್ರಾಮದ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಪ್ರಕರಣ ವನ್ನು ಕುಶಾಲನಗರ ಠಾಣೆ ಪೊಲೀಸರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.

 ಕೊಲೆ ಯತ್ನ ಪ್ರಕರಣ

            ದಿನಾಂಕ: 19-09-2021 ರಂದು ವಿರಾಜಪೇಟೆ ಪಟ್ಟಣದ ಹರಿಕೇರಿ, ಸುಣ್ಣದ ಬೀದಿ ನಿವಾಸಿ ಬ್ರಿಜೇಶ್‌ ಎಂಬುವವರಿಗ ಸ್ಥಳೀಯ ನಿವಾಸಿಗಳಾದ ಪರ್ಶ ಮತ್ತು ಲವ ಎಂಬುವವರು ಕ್ಷುಲ್ಲಕ ಕಾರಣ್ಕಕ್ಕೆ ಕೊಲೆ ಮಾಡುವ ಉದ್ದೇಶದಿಂದ ಮಾರಣಾಂತಿಕ ಹಲ್ಲೆ ಮಾಡಿ ಗಾಯಗಪಡಿಸಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ವಿರಾಜಪೇಟೆ ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 

ಇತ್ತೀಚಿನ ನವೀಕರಣ​ : 20-09-2021 03:26 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ