ಅಭಿಪ್ರಾಯ / ಸಲಹೆಗಳು

ಕಳವು ಪ್ರಕರಣ

          ದಿನಾಂಕ: 18-12-2021 ರಂದು ಈರೆಳವಳಮುಡಿ ಗ್ರಾಮದ ನಿವಾಸಿ ಮಹಿಳೆಯೊಬ್ಬರು ಅವರ ಪತಿಯೊಂದಿಗೆ ಮಡಿಕೇರಿ ಗರಕ್ಕೆ ಬಂದು ಮಡಿಕೇರಿ ನಗರದ ಅಪ್ಪಚ್ಚಕವಿ ರಸ್ತೆಯ ಬದಿಯಲ್ಲಿ ಜೀಪನ್ನು ನಿಲ್ಲಿಸಿ ಸಂಬಂದಿಕರ ಮನೆಗೆ ಹೋಗಿ ವಾಪಾಸ್ಸು ಬಂದು ನೋಡಿದಾಗ ಜೀಪಿನೊಳಗೆ ವ್ಯಾನಿಟಿ ಬ್ಯಾಗ ನಲ್ಲಿ ಇಟ್ಟಿದ್ದ 1 ಲಕ್ಷ ಮೌಲ್ಯದ ಚಿನ್ನದ ಆಭರಣ, 2, ಎಟಿಎಂ ಹಾಗೂ ₹. 1,000 ನಗದು ಹಣವನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಮಡಿಕೇರಿ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಅಕ್ರಮ ಗಾಂಜಾ ಬೆಳೆ ಪ್ರಕರಣ.

            ದಿನಾಂಕ: 18-12-2021 ರಂದು ಕುಶಾಲನಗರ ತಾಲ್ಲೂಕು ತೊರೆನೂರು  ಗ್ರಾಮದ ನಿವಾಸಿ ಹನುಮಂತಯ್ಯ ಎಂಬುವವರು ಅವರ ಮನೆಯ ಹಿಂಭಾಗದ ಹೊಲದಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆದಿದ್ದ ಪ್ರಕರಣವನ್ನು ಕುಶಾಲನಗರ ಗ್ರಾಮಾಂತರ ಠಾಣೆ ಪಿಎಸ್‌ಐ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಹಲ್ಲೆ ಪ್ರಕರಣ

            ದಿನಾಂಕ: 18-12-2021 ರಂದು ಪೊನ್ನಂಪೇಟೆ ತಾಲ್ಲೂಕು ದೇವಮಚ್ಚಿ ತಿತಿಮತಿ ಗ್ರಾಮದ ನಿವಾಸಿ ರಾಜು ಎಂಬುವವರಿಗೆ ಅವರ ಪಕ್ಕದ ಮನೆಯ ನಿವಾಸಿಗಳಾದ ಶಿವಪ್ಪ, ಪ್ರಶಾಂತ್‌, ಅಭಿ ಎಂಬುವವರು ವಿನಾ ಕಾರಣ ಜಗಳ ಮಾಡಿ ದೊಣ್ಣೆಯಿಂದ ಹಲ್ಲೆ ಮಾಡಿ ನೋವುಪಡಿಸಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಗೋಣಿಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ರಸ್ತೆ ಅಪಘಾತ ಪ್ರಕರಣ

            ದಿನಾಂಕ: 19-12-2021 ರಂದು ಪೊನ್ನಂಪೇಟೆ ತಾಲ್ಲೂಕು ತಿತಿಮತಿ ಗ್ರಾಮದ ಬಳಿ ಮುಖ್ಯ ರಸ್ತೆಯಲ್ಲಿ ಕೆಎಲ್-58-ಜೆಡ್-2761‌ ರ ಕಾರನ್ನು ಅದರ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಕೆಎ-12-ಎನ್-8893‌ ರ ಕಾರಿಗೆ ಡಿಕ್ಕಿಪಡಿಸಿದ ಪರಿಣಾಮ ಎರಡೂ ಕಾರುಗಳಲ್ಲಿದ್ದ ಪ್ರಯಾಣಿಕರು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಗೋಣಿಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 

ಇತ್ತೀಚಿನ ನವೀಕರಣ​ : 20-12-2021 07:12 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080