ಅಭಿಪ್ರಾಯ / ಸಲಹೆಗಳು

ಅಕ್ರಮ ಮದ್ಯ ಮಾರಾಟ ಪ್ರಕರಣ

            ದಿನಾಂಕ: 19-04-2021 ರಂದು ಪೊನ್ನಂಪೇಟೆ ತಾಲ್ಲೂಕು ಬಲ್ಯಮಂಡೂರು  ಗ್ರಾಮದ  ನಿವಾಸಿ  ಹರೀಶ್‍ ಎಂಬುವವರು  ಅವರ ಅಂಗಡಿಯ  ಬಳಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಸಾರ್ವಜನಿಕರಿಗೆ ಮದ್ಯ ಮಾರಾಟ  ಮಾಡುತ್ತಿದ್ದ ಪ್ರಕರಣವನ್ನು ಶ್ರೀಮಂಗಲ ಠಾಣೆ ಪಿಎಸ್‍ಐ ರವಿಶಂಕರ್  ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಿದ್ದಾರೆ.

ಕಳವು ಪ್ರಕರಣ

                ದಿನಾಂಕ: 18-04-2021 ರಂದು ಸಂಜೆ ಪೊನ್ನಂಪೇಟೆ ತಾಲ್ಲೂಕು ಹಳ್ಳಿಗಟ್ಟು ಗ್ರಾಮದ ನಿವಾಸಿ ಶಯನ ಎಂಬುವವರು ಮನೆಗೆ ಬೀಗ ಹಾಕಿಕೊಂಡು ಸಂಬಂದಿಕರ ಮನೆಗೆ ಹೋಗಿ ವಾಪಾಸ್ಸು ರಾತ್ರಿ ಬಂದು ನೋಡಿದಾಗ ಯಾರೋ ಕಳ್ಳರು ಮನೆಯ ಬಾಗಿಲಿಗೆ ಹಾಕಿದ್ದ ಬೀಗವನ್ನು ಮುರಿದು ಒಳನುಗ್ಗಿ ₹. 1,26,000 ಮೌಲ್ಯದ ಚಿನ್ನಾಭರಣ ಮತ್ತು₹. 4,500 ನಗದು ಕಳವುಮಾಡಿಕೊಂಡು ಹೋಗಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಪೊನ್ನಂಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಸ್ಕೂಟರ್ ಕಳವು ಪ್ರಕರಣ

                ದಿನಾಂಕ: 18-04-2021 ರಂದು ವಿರಾಜಪೇಟೆ ತಾಲ್ಲೂಕು ಐಮಂಗಲ ಗ್ರಾಮದ ನಿವಾಸಿ ಇಬ್ರಾಹಿಂ ಎಂಬುವವರು ವಿರಾಜಪೇಟೆ ಪಟ್ಟಣದ ಕೆ.ಎಸ್‍.ಆರ್‍.ಟಿ.ಸಿ ಬಸ್‍ ನಿಲ್ದಾಣದ ಎದುರು ಇರುವ ಅವರ ಅಂಗಡಿಯ ಬಳಿ ನಿಲ್ಲಿಸಿದ್ದ ಸುಜುಕಿ ಆಕ್ಸೆಸ್ ಸ್ಕೂಟರನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ವಿರಾಜಪೇಟೆ ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಆಕಸ್ಮಿಕವಾಗಿ ಮರದಿಂದ ಬಿದ್ದು ವ್ಯಕ್ತಿ ಸಾವು

                ದಿನಾಂಕ: 18-04-2021 ರಂದು ಸೋಮವಾರಪೇಟೆ ತಾಲ್ಲೂಕು ನಂಜರಾಯಪಟ್ಟಣ ಗ್ರಾಮದ ಮೀನುಕೊಲ್ಲಿ ಹಾಡಿ ನಿವಾಸಿ ಮಹೇಶ ಎಂಬುವವರು ಜೇನು ತೆಗೆಯಲು ಮರಕ್ಕೆ ಹತ್ತಿ ಇಳಿಯುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಗಾಯಗೊಂಡವರನ್ನು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದು ಈ ಬಗ್ಗೆ ನೀಡಿದ ದೂರಿನ ಮೇರೆ ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 20-04-2021 04:47 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ