ಅಭಿಪ್ರಾಯ / ಸಲಹೆಗಳು

ಅಕ್ರಮ ಮದ್ಯ ಮಾರಾಟ ಪ್ರಕರಣ

            ದಿನಾಂಕ: 20-04-2021 ರಂದು ಮಡಿಕೇರಿ ತಾಲ್ಲೂಕು ಕಿರುಂದಾಡು ಗ್ರಾಮದ  ನಿವಾಸಿ  ರಘುಪೊನ್ನಪ್ಪ ಎಂಬುವವರು  ಅವರ ಅಂಗಡಿಯ  ಬಳಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಸಾರ್ವಜನಿಕರಿಗೆ ಮದ್ಯ ಸೇವನೆಗೆ ಅವಕಾಶ ಮಾಡುತ್ತಿದ್ದ ಪ್ರಕರಣವನ್ನು ನಾಪೋಕ್ಲು ಠಾಣೆ ಪಿಎಸ್‍ಐ ಕಿರಣ್ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಿದ್ದಾರೆ.

ಹಲ್ಲೆ ಪ್ರಕರಣ

                ದಿನಾಂಕ: 19-04-2021 ರಂದು ರಾತ್ರಿ ಪೊನ್ನಂಪೇಟೆ ತಾಲ್ಲೂಕು ಮಾಯಮುಡಿ ಬಾಳಾಜಿ ಗ್ರಾಮದ ನಿವಾಸಿ ಹರೀಶ್‍ ಎಂಬುವವರಿಗೆ ಅದೇ ಗ್ರಾಮದ ನಿವಾಸಿಗಳಾದ ಮಾದಯ್ಯ, ಸನ್ನಿ, ದೀಕ್ಷಿತ್‍ ಎಂಬುವವರು ಹಳೆ ವೈಷಮ್ಯದಿಂದ ಕೊಲೆ ಮಾಡುವ ಉದ್ದೇಶದಿಂದ ಕತ್ತಿಯಿಂದ ಹಲ್ಲೆ ಮಾಡಿ ಗಾಯಪಡಿಸಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಗೋಣಿಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಅಕ್ರಮ ಯೂರಿಯಾ ಗೊಬ್ಬರ ದಾಸ್ತಾನು ಪ್ರಕರಣ

                ದಿನಾಂಕ: 20-04-2021 ರಂದು ಪೊನ್ನಂಪೇಟೆ ತಾಲ್ಲೂಕು ಅರವತ್ತೊಕ್ಲು ಗ್ರಾಮದ ನಿವಾಸಿ ಮಲ್ಲಂಡ ಪ್ರಕಾಶ್‍ ಎಂಬುವವರು ಅವರ ಮನೆಯ ಕಟ್ಟಡದಲ್ಲಿ ಕೃಷಿ ಉದ್ದೇಶಕ್ಕಾಗಿ ಇರುವ ಯೂರಿಯಾ ರಸಗೊಬ್ಬರವನ್ನು “For industrial use only” ಎಂಬುದಾಗಿ ರೀಬ್ಯಾಗ್‍ ಮಾಡಿ ದಾಸ್ತಾನು ಮಾಡಿ ಸರ್ಕಾರಕ್ಕೆ ಮತ್ತು ರೈತರಿಗೆ ವಂಚನೆ ಮಾಡಲು ಉದ್ದೇಶಿಸಿರುವ ಬಗ್ಗೆ ಕೃಷಿ ಇಲಾಖೆ ಅಧಿಕಾರಿಗಳು ಪರಿಶಿಲನೆ ಮಾಡಿ ನೀಡಿದ ಪುಕಾರಿನ ಮೇರೆ ಗೋಣಿಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ರಸ್ತೆ ಅಪಘಾತ ಪ್ರಕರಣ

            ದಿನಾಂಕ: 20-04-2021 ರಂದು ಗೋಣಿಕೊಪ್ಪ ಗ್ರಾಮದ ಕಾಪ್ಸ್‍ ಶಾಲೆಯ ಬಳಿ ಕೆಎ-03-ಪಿ-9144 ರ ಕಾರನ್ನು ಅದರ ಚಾಲಕ ನಟೇಶ್‍ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಚಿಣ‍್ಣಪ್ಪ ಎಂಬುವವರಿಗೆ ಡಿಕ್ಕಿಪಡಿಸಿ ನಂತರ ರಸ್ಎತ ಬದಿಯ ಮರಕ್ಕೆ ಡಿಕ್ಕಿಪಡಿಸಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಗೋಣಿಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಅಕ್ರಮ ಜೂಜಾಟ ಪ್ರಕರಣ

            ದಿನಾಂಕ: 20-04-2021 ರಂದು ಸೋಮವಾರಪೇಟೆ ತಾಲ್ಲೂಕು ಬೊಳ್ಳೂರು ಗ್ರಾಮದ ಬಳಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಇಸ್ಪೀಟ್‍ ಜೂಜಾಟವಾಡುತ್ತಿದ್ದ ಪ್ರಕರಣವನ್ನು ಕುಶಾಲನಗರ ಗ್ರಾಮಾಂತರ ಠಾಣೆ ಪಿಎಸ್‌ಐ ಶಿವಶಂಕರ್ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.

ಲಾರಿಗೆ ಮರ ತುಂಬಿಸುವಾಗ ಆಕಸ್ಮಿಕವಾಗಿ ಬಿದ್ದು ವ್ಯಕ್ತಿ ಸಾವು.

            ದಿನಾಂಕ: 19-04-2021 ರಂದು ಸೋಮವಾರಪೇಟೆ ತಾಲ್ಲೂಕು ಬಾಳುಗೋಡು ಗ್ರಾಮದ ನಿವಾಸಿ ಭರತ್‍ ಎಂಬುವವರು ಮಡಿಕೇರಿ ತಾಲ್ಲೂಕು ಕತ್ತಲೆ ಕಾಡು ಗ್ರಾಮದಲ್ಲಿ ಲಾರಿಗೆ ಮರದ ದಿಮ್ಮಿಗಳನ್ನು ತುಂಬಿಸುವ ಕೆಲಸ ಮಾಡುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಗಾಯಗೊಂಡವರನ್ನು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಾಕರಿಯಾಗದೆ ಮೃತಪಟ್ಟಿದ್ದು ಈ ಬಗ್ಗೆ ಮೃತ ಸಹೋದರಿ ನೀಡಿದ ಪುಕಾರಿನ ಮೇರೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 21-04-2021 06:02 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ