ಅಭಿಪ್ರಾಯ / ಸಲಹೆಗಳು

ಕಳವು ಪ್ರಕರಣ

            ದಿನಾಂಕ: 19-06-2021 ರಂದು ಗೋಣಿಕೊಪ್ಪ ಎ.ಪಿ ಕಾಂಪ್ಲೆಕ್ಸ್‌ ಬಳಿ ರಸ್ತೆ ಬದಿಯಲ್ಲಿ ಮಹರೂಫ್‌ ಎಂಬುವವರು ನಿಲ್ಲಿಸಿದ್ದ ಕೆಎ-12-ಕ್ಯೂ-0510 ನೋಂದಣಿ ಸಂಖ್ಯೆಯ ಸ್ಕೂಟರನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಗೋಣಿಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಅಕ್ರಮ ಜೂಜಾಟ ಪ್ರಕರಣ

                ದಿನಾಂಕ: 20-06-2021 ರಂದು ಸೋಮವಾರಪೇಟೆ ತಾಲ್ಲೂಕು ಕೂಡ್ಲೂರು ಗ್ರಾಮದ ಸುಂದರನಗರ ಬಳಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಇಸ್ಪೀಟ್‍ ಜೂಜಾಟವಾಡುತ್ತಿದ್ದ ಪ್ರಕರಣವನ್ನು ಕುಶಾಲನಗರ ಗ್ರಾಮಾಂತರ ಠಾಣೆ ಪಿಎಸ್‌ಐ ಶಿವಶಂಕರ್ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.

ಅಕ್ರಮ ಮದ್ಯ ಮಾರಾಟ ಪ್ರಕರಣ

ದಿನಾಂಕ: 20-06-2021 ರಂದು ವಿರಾಜಪೇಟೆ ತಾಲ್ಲೂಕು ಅಮ್ಮತ್ತಿ ಕಾರ್ಮಾಡು ಗ್ರಾಮದ ಚೌಡೇಶ್ವರಿ ಕಾಲೋನಿ ನಿವಾಸಿ ಹರೀಶ್‌  ಎಂಬುವವರು ಅವರ ವಾಸದ ಮನೆಯ ಬಳಿ ಅಕ್ರಮವಾಗಿ ಸಾರ್ವಜನಿಕರಿಗೆ ಮದ್ಯ ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ವಿರಾಜಪೇಟೆ ಗ್ರಾಮಾಂತರ ಠಾಣೆ ಪೊಲೀಸ್‌ ಅಧಿಕಾರಿ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಲಾಕ್‌ ಡೌನ್‌ ನಿಯಮ ಉಲ್ಲಂಘನೆ ಪ್ರಕರಣ

                ದಿನಾಂಕ: 20-06-2021 ರಂದು ವಿರಾಜಪೇಟೆ ತಾಲ್ಲೂಕು ತೋರ ಗ್ರಾಮದ ಕೊರ್ತಿಕಾಡು ನಿವಾಸಿ ನಾಗೇಶ್‌  ಎಂಬುವವರು ಕೋವಿಡ್‍-19 ಸಾಂಕ್ರಾಮಿಕ ರೋಗ ಹರಡುವಿಕೆ ತಡೆಗಟ್ಟಲು ಸರ್ಕಾರ ನಿಗದಿಪಡಿಸಿರುವ ಮಾರ್ಗಸೂಚಿ ಉಲ್ಲಂಘಿಸಿ ದಿನಸಿ ಅಂಗಡಿ ಮಳಿಗೆಯನ್ನು ತೆರೆದು ಸಾರ್ವಜನಿಕರು ವ್ಯಾಪಾರ ವಹಿವಾಟು ನಡೆಸುತ್ತಿದ್ದ ಮೇರೆ ವಿರಾಜಪೇಟೆ ಗ್ರಾಮಾಂತರ ಠಾಣೆ ಪಿಎಸ್‌ಐ ಸಿದ್ದಲಿಂಗ ಬಾನಸೆ ಮತ್ತು ಸಿಬ್ಬಂದಿಯವರು ಪರಿಶೀಲಿಸಿ  ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ಧಾರೆ.

ಮರದಿಂದ ಆಕಸ್ಮಿಕವಾಗಿ ಬಿದ್ದು ವ್ಯಕ್ತಿ ಸಾವು.

                ದಿನಾಂಕ: 15-06-2021 ರಂದು ಮಡಿಕೇರಿ ತಾಲ್ಲೂಕು ಕರಿಕೆ ಗ್ರಾಮದ ಕುಂಡತ್ತಿಕಾನ ನಿವಾಸಿ ಪುನೀತ್‌ ಎಂಬುವವರು ಅವರ ತೋಟದಲ್ಲಿದ್ದ ಮರಕ್ಕೆ ಹತ್ತಿ ಸೊಪ್ಪು ಕುಯ್ಯುತ್ತಿರುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಗಾಯಗೊಂಡವರನ್ನು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೇ ದಿನಾಂಕ: 20-06-2021 ರಂದು ಮೃತಪಟ್ಟಿದ್ದು ಈ ಬಗ್ಗೆ ಮೃತರ ಸಹೋದರ ನೀಡಿದ ದೂರಿನ ಮೇರೆ ಭಾಗಮಂಡಲ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 21-06-2021 05:13 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ