ಅಭಿಪ್ರಾಯ / ಸಲಹೆಗಳು

ಅಕ್ರಮ ಮದ್ಯ ಮಾರಾಟ ಪ್ರಕರಣ

            ದಿನಾಂಕ: 20-08-2021 ರಂದು ಪೊನ್ನಂಪೇಟೆ ತಾಲ್ಲೂಕು ನಾಥಂಗಾಲ ಗ್ರಾಮದ ನಿವಾಸಿ  ಷಣ್ಮುಗ ಎಂಬುವವರು ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮದ್ಯವನ್ನು ಇಟ್ಟುಕೊಂಡು ಸಾರ್ವಜನಿಕರಿಗೆ ಮದ್ಯ ಮಾರಾಟ ಮಾಡುತ್ತಿದ್ದ ಪ್ರಕಣವನ್ನು ಕುಟ್ಟ ಠಾಣೆ ಪಿಎಸ್‌ಐ ಹೆಚ್‌.ಜೆ ಚಂದ್ರಪ್ಪ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.

 ಕಳವು ಪ್ರಕರಣ

            ದಿನಾಂಕ: 15-08-2021 ರಂದು ಪೊನ್ನಂಪೇಟೆ ತಾಲ್ಲೂಕು ದೇವನೂರು ಗ್ರಾಮದ ನಿವಾಸಿ ಸುಜನ್‌ ದೇವಯ್ಯ ಎಂಬುವವರು ಮನೆಗೆ ಬೀಗ ಹಾಕಿಕೊಂಡು ಬೆಂಗಳೂರಿಗೆ ಹೋಗಿ ವಾಪಾಸ್ಸು ದಿನಾಂಕ: 19-08-2021 ರಂದು ಬಂದು ಮನೆಯ ಬೀಗ ತೆಗೆದು ನೋಡಿದಾಗ ಯಾರೋ ಕಳ್ಳರು ಮನೆಯ ಮೇಲ್ಚಾವಣಿ ಹಂಚನ್ನು ತೆಗೆದು ಒಳನುಗ್ಗಿ ಡ್ರಾಯರ್‌ ನಲ್ಲಿಟ್ಟಿದ್ದ ₹. 10,000 ನಗದು ಮತ್ತು ₹.20,1810 ಮೌಲ್ಯದ ಮದ್ಯದ ಬಾಟಲಿಗಳನ್ನು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಪೊನ್ನಂಪೇಟೆ ಠಾಣೆ ಪೊಲೀಸರು ಪ್ರಕರಭ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 ಅಕ್ರಮ ಜೂಜಾಟ ಪ್ರಕರಣ   

            ದಿನಾಂಕ: 19-08-2021 ರಂದು ವಿರಾಜಪೇಟೆ ಪಟ್ಟಣದ ಮಲಬಾರ್‌ ರಸ್ತೆಯ ಕಾಲೇಜು ಗೇಟ್‌ ಶಬೀರ್‌, ಪ್ರತೀಕ್‌, ಸಲೀಂ, ಅಫ್ರಿದ್‌ ಎಂಬುವವರು ಆನ್‌ ಲೈನ್‌ ನಲ್ಲಿ ಕೇರಳ ರಾಜ್ಯದ ಲಾಟರಿ ಫಲಿತಾಂಶ ಆದರಿಸಿ ಸಂಖ‍್ಯೆಗಳ ಮೇಲೆ ಹಣವನ್ನು ಪಣವಾಗಿರಿಸಿಕೊಂಡು ಅಕ್ರಮವಾಗಿ ಜೂಜಾಟವಾಡುತ್ತಿದ್ದ ಪ್ರಕರಣವನ್ನು ವಿರಾಜಪೇಟೆ ವೃತ್ತ ಸಿ.ಪಿ.ಐ ಬಿ.ಎಸ್‌ ‍ಶ್ರೀಧರ್‌  ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಜೂಜಾಟಕ್ಕೆ ಉಪಯೋಗಿಸಿದ ಮೊಬೈಲ್‍ ಫೋನ್, ನಗದು ಹಣ, ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.

ಅಕ್ರಮ ಜೂಟಾಟ, 5 ಮಂದಿ ಬಂಧನ:

 ದಿನಾಂಕ 20.08.2021ರಂದು ಮಡಿಕೇರಿ ಗ್ರಾಮಾಂತರ ಠಾಣೆಯ ಪೋಲಿಸ್ ನಿರೀಕ್ಷಕರಾದ ಎಸ್.ಎಸ್‌ ರವಿಕಿರಣ್‌  ಮತ್ತು ಸಿಬ್ಬಂದಿಗಳು ಮೇಕೇರಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿ ದಾಳಿ ಮಾಡಿ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ 12  ಜನ ಆರೋಪಿಗಳನ್ನು ದಸ್ತಗಿರಿ ಮಾಡಿದ್ದು ಜೂಜಾಟದಲ್ಲಿ ಪಣವಾಗಿಟ್ಟಿದ್ದ ರೂ 37770 ನಗದು  ಮತ್ತು ಜೂಜಾಟಕ್ಕೆ ಉಪಯೋಗಿಸಿದ ವಾಹನಗಳನ್ನು ವಶ ಪಡಿಸಿ ಕೊಂಡಿರುತ್ತಾರೆ.

 

ಇತ್ತೀಚಿನ ನವೀಕರಣ​ : 21-08-2021 03:32 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ