ಅಭಿಪ್ರಾಯ / ಸಲಹೆಗಳು

ಹಲ್ಲೆ ಪ್ರಕರಣ

            ದಿನಾಂಕ: 20-09-2021 ರಂದು ಮಡಿಕೇರಿ ನಗರದ ಮಾರ್ಕೆಟ್‌ ಜಂಕ್ಷನ್‌ ಬಳಿ ನೌಮಾನ್‌, ಸಫತ್‌, ಅಕ್ರಮ್‌, ನಿಜಿಲ್ ಹಾಗೂ  ಗಫಾರ್‌, ಅಕ್ರಮ್‌, ನೌಫಲ್‌, ಉಬೇದುಲ್ಲ, ಸಲೀಂ, ಇಮ್ರಾನ್‌ ಎಂಬುವವರು ಹೊಟೇಲ್‌ ಖಾಲಿ ಮಾಡುವ ವಿಚಾರದಲ್ಲಿ ಪರಸ್ಪರ ಅವಾಚ್ಯ ಪದಗಳಿಂದ ಬೈದು ಹಲ್ಲೆ ಮಾಡಿಕೊಂಡು ಗಾಪಡಿಸಿ ಕೊಲೆ ಬೆದರಿಕೆ ಹಾಕಿದ್ದು ಈ ಬಗ್ಗೆ ಉಭಯ ಕಡೆಯವರು ನೀಡಿದ ಪುಕಾರಿನ ಮೇರೆ ಮಡಿಕೇರಿ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಅಕ್ರಮ ಜೂಜಾಟ ಪ್ರಕರಣ

            ದಿನಾಂಕ: 20-09-2021 ರಂದು ಕುಶಾಲನಗರ ತಾಲ್ಲೂಕು ಹಳಗೋಟೆ ಗ್ರಾಮದ ಬಳಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಇಸಪೀಟ್‌ ಜೂಜಾಟಾಡುತ್ತಿದ್ದ ಪ್ರಕರಣವನ್ನು ಕುಶಾಲನಗರ ಗ್ರಾಮಾಂತರ ಠಾಣೆ ಪಿಎಸ್‌ಐ ಶಿವಶಂಕರ್‌ ಮತ್ತು ಸಿಬ್ಬಂದಿಯವರ ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.

ಹಲ್ಲೆ ಪ್ರಕರಣ

            ದಿನಾಂಕ: 19-09-2021 ರಂದು ಮಡಿಕೇರಿ ತಾಲ್ಲೂಕು ಮೇಕೇರಿ ಗ್ರಾಮದ ಬಳಿ ಕೆಎಲ್-04-ಎಂಇ-2230 ರ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಅಲೆಕ್ಸ್‌, ಮೈಕೆಲ್‌, ಜೋಸ್‌, ಬಿನಿಲ್‌ ಮತ್ತು ಕೆಎ-02-ಜೆಡ್-9607 ರ‌ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಯಶವಂತ್‌ ಮತ್ತು ಇತರರ ನಡುವೆ ಕಾರುಗಳಿಗೆ ದಾರಿ ಕೊಡುವ ವಿಚಾರದಲ್ಲಿ ಪರಸ್ಪರ ಹಲ್ಲೆ ಮಾಡಿ ಕೊಂಡಿದ್ದು ಈ ಬಗ್ಗೆ ಉಭಯ ಕಡೆಯವರು ನೀಡಿದ ಪುಕಾರಿನ ಮೇರೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಹಲ್ಲೆ ಪ್ರಕರಣ

            ದಿನಾಂಕ: 20-09-2021 ರಂದು ಮಡಿಕೇರಿ ತಾಲ್ಲೂಕು ಮರಗೋಡು ಹೊಸ್ಕೇರಿ ಗ್ರಾಮದ ನಿವಾಸಿ ಮೋಟಯ್ಯ ಎಂಬುವವರಿಗೆ ಅದೇ ಗ್ರಾಮದ ನಿವಾಸಿ ಚಂದ್ರಶೇಖರ ಎಂಬುವವರು ಕ್ಷುಲ್ಲಕ ಕಾರಣಕ್ಕೆ ಹಲ್ಲೆ ಮಾಡಿ ಗಾಯಪಡಿಸಿ ಕೊಲೆ ಬೆದರಿಕೆ ಹಾಕಿದ್ದು ಈ ಬಗ್ಗೆ ಮೋಟಯ್ಯ ರವರ ನೀಡದ ಪುಕಾರಿನ ಮೇರೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಅಕ್ರಮ ಗಾಂಜಾ ಬೆಳೆ ಪ್ರಕರಣ

            ದಿನಾಂಕ: 20-09-2021 ರಂದು ವಿರಾಜಪೇಟೆ ಪಟ್ಟಣದ ಸಿಲ್ವನಗರದ ಇಸ್ಮಾಯಿಲ್‌ ಎಂಬುವವರ ಮನೆಯ ಕಾಂಪೌಂಡ್‌ ಒಳಗೆ  ಸಲೀಂ ಶೇಖ್‌ ಮತ್ತು ಅಬ್ದುಲ್‌ ರಾಕೀಬ್‌ ಎಂಬುವವರು ಅಕ್ರಮವಾಗಿ ಗಾಂಜಾ ಗಿಡ ಬೆಳೆದಿದ್ದ ಪ್ರಕರಣವನ್ನು ವಿರಾಜಪೇಟೆ ಪಟ್ಟಣ ಠಾಣೆ ಪಿಎಸ್‌ಐ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.

ಅಕ್ರಮ ಮದ್ಯ ಮಾರಾಟ ಪ್ರಕರಣ

            ದಿನಾಂಕ: 20-09-2021 ರಂದು ವಿರಾಜಪೇಟೆ ತಾಲ್ಲೂಕು ಕೆದಮುಳ್ಳೂರು ಗ್ರಾಮದ ನಿವಾಸಿ ಸುಗುಣ ಎಂಬುವವರು ಅವರ ಅಂಗಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ವಿರಾಜಪೇಟೆ ವೃತ್ತ ಸಿ.ಪಿ.ಐ ಶ್ರೀಧರ್‌ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 21-09-2021 12:08 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ