ಅಭಿಪ್ರಾಯ / ಸಲಹೆಗಳು

ಬಸ್‍ ಡಿಕ್ಕಿ,ಯುವಕ ಸಾವು.

          ದಿನಾಂಕ: 21-02-2021 ರಂದು ಸೋಮವಾರಪೇಟೆ ತಾಲ್ಲೂಕು ಗೌಡಳ್ಳಿ ಗ್ರಾಮದ ಬಳಿ ಮುಖ‍್ಯ ರಸ್ತೆಯಲ್ಲಿ ಕೆಎ-21-ಎಫ್-0140 ರ ಕೆ.ಎಸ್.ಆರ್.ಟಿ.ಸಿ ಬಸ್ಸನ್ನು ಅದರ ಚಾಲಕ ರಂಗನಾಥ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ರಸ್ತೆ ಬದಿಯಲ್ಲಿದ್ದ ದಿನೇಶ್‍ ಎಂಬುವವರಿಗೆ ಡಿಕ್ಕಿಪಡಿಸಿದ ಪರಿಣಾಮ ಗಾಯಗೊಂಡು ಮೃತಪಟ್ಟಿದ್ದು ಈ ಬಗ್ಗೆ ವಿಶ್ವನಾಥ ಎಂಬುವವರು ನೀಡಿದ ಪುಕಾರಿನ ಮೇರೆ ಶನಿವಾರಸಂತೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 ಅಕ್ರಮ ಲಾಟರಿ ಮಾರಾಟ ಪ್ರಕರಣ

            ದಿನಾಂಕ: 21-02-2021 ರಂದು ವಿರಾಜಪೇಟೆ ಪಟ್ಟಣದ ಮೀನುಪೇಟೆ ಬಳಿ ಅಕ್ರಮವಾಗಿ ಸಾರ್ವಜನಿಕರಿಗೆ ಕೇರಳ ರಾಜ್ಯದ ಲಾಟರಿ ಟಿಕೆಟ್‍ಗಳನ್ನು ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ವಿರಾಜಪೇಟೆ ನಗರ ಠಾಣೆ ಪಿ.ಎಸ್‍.ಐ ಜಗದೀಶ್ ಧೂಲಶೆಟ್ಟಿ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಕಣ್ಣನ್‍ ಎಂಬುವವರ ವಿರುದ್ದ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

  ಅಕ್ರಮ ಜೂಜಾಟ ಪ್ರಕರಣ

            ದಿನಾಂಕ: 21-02-2021 ರಂದು ಸೋಮವಾರಪೇಟೆ ತಾಲ್ಲೂಕು ಕೂಡುಮಂಗಳೂರು ಗ್ರಾಮದ ಕೈಗಾರಿಕಾ ಪ್ರದೇಶದ ಬಳಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಇಸ್ಪೀಟ್‍ ಜೂಜಾಟವಾಡುತ್ತಿದ್ದ ಪ್ರಕರಣವನ್ನು ಕುಶಾಲನಗರ ಗ್ರಾಮಾಂತರ ಠಾಣೆ ಪಿಎಸ್‌ಐ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.

ರಸ್ತೆ ಅಪಘಾತ ಪ್ರಕರಣ

            ದಿನಾಂಕ: 21-02-2021 ರಂದು ಸೋಮವಾರಪೇಟೆ ತಾಲ್ಲೂಕು ಮಾದೇಗೋಡು ಗ್ರಾಮದ ಬಳಿ ಮುಖ್ಯ ರಸ್ತೆಯಲ್ಲಿ ಕೆಎ-12-ಪಿ-3133 ರ ಕಾರನ್ನು ಅದರ ಚಾಲಕ ಯಶ್ವಂತ್‍ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಕೆಎ-52-ಎ-5695 ರ ಪಿಕ್‍ ಅಪ್‍ ವಾಹನಕ್ಕೆ ಡಿಕ್ಕಿಪಡಿಸಿದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಗಾಯಗೊಂಡಿದ್ದು ಈ ಬಗ್ಗೆ ಪಿಕ್‍ ಅಪ್‍ ಚಾಲಕ ಲಿಖಿತ್‍ ಎಂಬುವವರು ನೀಡಿದ ಪುಕಾರಿನ ಮೇರೆ ಶನಿವಾರಸಂತೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 ರಸ್ತೆ ಅಪಘಾತ ಪ್ರಕರಣ

            ದಿನಾಂಕ: 21-02-2021 ರಂದು ವಿರಾಜಪೇಟೆ ತಾಲ್ಲೂಕು ಬೂದಿಮಾಳ ಗ್ರಾಮದ ಬಳಿ ಮುಖ‍್ಯ ರಸ್ತೆಯಲ್ಲಿ ಕೆಎ-03-ಎಂಕ್ಯೂ-531 ರ ಕಾರನ್ನು ಅದರ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಕೆಎ-12-ಪಿ-4213 ರ ಕಾರಿಗೆ ಡಿಕ್ಕಿಪಡಿಸಿ ಕಾರನ್ನು ನಿಲ್ಲಿಸದೇ ಕೆದಮುಳ್ಳುರು ಗ್ರಾಮದ ಕಡೆ ಹೋಗಿದ್ದು ವಾಪಾಸ್ಸು ಬರುವಾಗ ಕಾರನ್ನು ನಿಲ್ಲಿಸುವಂತೆ ಸೂಚಿಸಿದಾಗ ಪುನಃ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿ ರಸ್ತೆ ಬದಿಯಲ್ಲಿ ನಿಂತಿದ್ದ ಯೋಗೇಶ್‍ ಎಂಬುವವರಿಗೆ ಡಿಕ್ಕಿಪಸಿದ ಪರಿಣಾಂ ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ವಿರಾಜಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 22-02-2021 01:00 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ