ಅಭಿಪ್ರಾಯ / ಸಲಹೆಗಳು

ಆನ್‍ ಲೈನ್‍ ವಂಚನೆ ಪ್ರಕರಣ

            25-01-2022 ರಂದು ಕುಶಾಲನಗರ ಪಟ್ಣಣದ ಬಸವೇಶ‍್ವರ ಬಡಾವಣೆ ನಿವಾಸಿ ಮಹಿಳೆಯೊಬ್ಬರ ಮೊಬೈಲ್‍ ಗೆ 8115856028 ಸಂಖ್ಯೆಯಿಂದ ಕರೆ ಮಾಡಿದ ಅಪರಿಚಿತ ವ್ಯಕ್ತಿಯೊಬ್ಬ ಬ್ಯಾಂಕ್ ನಿಂದ ಕರೆ ಮಾಡುತ್ತಿರುವುದಾಗಿ ಹೇಳಿ ಕ್ರೆಡಿಟ್‍ ಕಾರ್ಡ್‍ ನಂಬರ್‍ಗಳನ್ನು ಕೇಳಿ ಪಡೆದುಕೊಡು ಖಾತೆಯಲ್ಲಿರುವ ರಿವಾರ್ಡ್‍ ಪಾಯಿಂಟ್‍ ಗಳನ್ನು ಮರಳಿ ಖಾತೆಗೆ ಕ್ರೆಡಿಟ್‍ ಮಾಡುವುದಾಗಿ ತಿಳಿಸಿ ಒಟಿಪಿ ಸಂಖ್ಯೆಗಳನ್ನು ಪಡೆದು ಹಂತ ಹಂತವಾಗಿ ಒಟ್ಟು ₹. 1,60,000 ಹಣವನ್ನು ಖಾತೆಯಿಂದ ತೆಗೆದು ವಂಚನೆ ಮಾಡಿದ್ದು ಈ ಬಗ್ಗೆ ದಿನಾಂಕ: 21.02.2022 ರಂದು ನೀಡಿದ ಪುಕಾರಿನ ಮೇರೆ ಕೊಡಗು ಸೈಬರ್ ಅಪರಾಧ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಬ್ಯಾಂಕ್ ಅಥವಾ ಇತರೆ ಹಣಕಾಸು ಸಂಸ್ಥೆಗಳ ಅಧಿಕಾರಿಗಳ ಹೆಸರಿನಲ್ಲಿ ಕರೆ ಮಾಡಿ ಮೋಸದಿಂದ ಆನ್ ಲೈನ್ ಮೂಲಕ ಹಣ ವರ್ಗಾವಣೆ ಮಾಡಿಕೊಂಡು ಸಾರ್ವಜನಿಕರಿಗೆ ವಂಚನೆ ಮಾಡುತ್ತಿರುವ ಪ್ರಕರಣಗಳು ಹೆಚ್ಚು ವರದಿಯಾಗುತ್ತಿದೆ. ಯಾವುದೇ ಅಧಿಕೃತ ಬ್ಯಾಂಕ್ ಅಥವಾ ಹಣಕಾಸು ಸಂಸ್ಥೆಗಳು ಸಾರ್ವಜನಿಕರೊಂದಿಗೆ ಫೋನ್ ಮೂಲಕ ವ್ಯವಹರಿಸುವುದಿಲ್ಲ. ಸಾರ್ವಜನಿಕರು ತಮ್ಮ ಬ್ಯಾಂಕ್ ಖಾತೆ, ಎ.ಟಿ.ಎಂ, ಮ್ಯೂಚುವಲ್ ಫಂಡ್, ಉಳಿತಾಯ ಪತ್ರಗಳು ಹಾಗೂ ಇತರ ಯಾವುದೇ ರೀತಿಯ ಹಣಕಾಸು ವಹಿವಾಟಿನ ಪ್ರಕ್ರಿಯೆಗಳಲ್ಲಿ ತೊಡಕುಂಟಾದಾಗ ನೇರವಾಗಿ ಸಂಬಂದಪಟ್ಟ ಬ್ಯಾಂಕ್ ಅಥವಾ ಹಣಕಾಸು ಸಂಸ್ಥೆಗಳಿಗೆ ತೆರಳಿ ಪರಿಹರಿಸಿಕೊಳ್ಳುವುದು. ಹಣಕಾಸು ಸಂಸ್ಥೆಗಳ ಹೆಸರಿನಲ್ಲಿ ಕರೆ ಮಾಡುವ ವ್ಯಕ್ತಿಗಳು ಬ್ಯಾಂಕ್ ಅಕೌಂಟ್ ನಂಬರ್, ಎ.ಟಿ.ಎಂ ನಂಬರ್, ಸಿವಿವಿ ನಂಬರ್, ಒ.ಟಿ.ಪಿ, ಎಟಿಎಂ ಪಿನ್ ನಂಬರ್, ಗೂಗಲ್ ಪೇ, ಫೋನ್ ಪೇ, ಇತರೆ ಯು.ಪಿ.ಐ ಆಧಾರಿತ ಆನ್ ಲೈನ್ ಹಣಕಾಸು ವರ್ಗಾವಣೆ ಅಪ್ಲಿಕೇಶನ್ ಗಳ ಕೋಡ್ ಗಳನ್ನು ಕೇಳಿ ಪಡೆದು ವಂಚನೆ ಮಾಡುತ್ತಿದ್ದು ಇಂತಹ ಗೌಪ್ಯ ಸಂಖ್ಯೆಗಳನ್ನು ಯಾರಿಗೂ ನೀಡದಂತೆ ಸೂಚಸಲಾಗಿದೆ.

ರಸ್ತೆ ಅಪಘಾತ ಪ್ರಕರಣ

                ದಿನಾಂಕ: 20-02-2022 ರಂದು ಕುಶಾಲನಗರ ತಾಲ್ಲೂಕು 7ನೇ ಹೊಸಕೋಟೆ ಗ್ರಾಮದ ಬಳಿ ಮುಖ್ಯ ರಸ್ತೆಯಲ್ಲಿ ಕೆಎ-01-ಇಡಿ-6104 ರ ಬೈಕನ್ನು ಸವಾರ ರೋಹಿತ್‍ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರಿಗೆ ಡಿಕ್ಕಿಪಡಿಸಿದ ಪರಿಣಾಮ ಪಾದಚಾರಿ ಮಹಿಳೆ, ಬೈಕ್ ಸವಾರ ಮತ್ತು ಹಿಂಬದಿ ಸವಾರ ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಸುಂಟಿಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 22-02-2022 06:35 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080