ಅಭಿಪ್ರಾಯ / ಸಲಹೆಗಳು

ಹಲ್ಲೆ ಪ್ರಕರಣ

            ದಿನಾಂಕ: 21-04-2022 ರಂದು ಮಡಿಕೇರಿ ತಾಲ್ಲೂಕು ಚೆಯ್ಯಂಡಾಂಣೆ ಗ್ರಾಮದ ನಿವಾಸಿಗಳಾದ ಪ್ರವೀಣ್‌, ಗುಲಾಬಿ, ಆಶಾ ಎಂಬುವವರಿಗೆ ಅದೇ ಗ್ರಾಮದ ನಿವಾಸಿಗಳಾದ ಪೊನ್ನು, ರಮೇಶ್‌, ಮಧು, , ಬೊಳ್ಳು, ನವೀನ್, ವಿನಯ ಎಂಬುವವರು ಹಳೆ ವೈಷಮ್ಯದಿಂದ ದಾರಿ ತಡೆದು ಅವಾಚ್ಯ  ಪದಗಳಿಂದ ಬೈದು ಹಲ್ಲೆ ಮಾಡಿ ಕೊಲೆ ಬೆದರಿಕೆ ಹಾಕಿದ್ದು  ಈ ಬಗ್ಗೆ ನೀಡಿದ ಪುಕಾರಿನ ಮೇರೆ  ನಾಪೋಕ್ಲು ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಕಳವು ಪ್ರಕರಣ

            ದಿನಾಂಕ: 20-04-2022 ರಂದು ರಾತ್ರಿ ಪೊನ್ನಂಪೇಟೆ ನಿವಾಸಿ ಸೀತಾರಾಮ್‌ ಎಂಬುವವರು ಕಾಫಿ ಅಂಗಡಿಯ ಶೆಟರ್ಸ್‌ ಬೀಗ ವನ್ನು ಯಾರೋ ಕಳ್ಳರು ತೆಗೆದು ಒಳನುಗ್ಗಿ ಡ್ರಾಯರ್‌ ನಲ್ಲಿ ಇಟ್ಟಿದ್ದ ₹. 1,12,500 ನಗದು ಹಣವನ್ನು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಪೊನ್ನಂಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಹಲ್ಲೆ ಪ್ರಕರಣ

            ದಿನಾಂಕ: 20-04-2022 ರಂದು ಸೋಮವಾರಪೇಟೆ ತಾಲ್ಲೂಕು ಯೆಡುಂಡೆ ಗ್ರಾಮದ ನಿವಾಸಿ ಗಳಾದ ನಾಗರಾಜ, ಅಭಿ, ಪರಶಿವ ಮತ್ತು ಚಂದ್ರಪ್ಪ, ನವೀನ್‌, ರವಿ ಎಂಬುವವರು ಕ್ಷುಲ್ಲಕ ಕಾರಣಕ್ಕೆ ಪರಸ್ಪರ ದೊಣ್ಣೆಯಿಂದ ಹಲ್ಲೆ ಮಾಡಿಕೊಂಡು ಗಾಯಪಡಿಸಿದ್ದು ಈ ಬಗ್ಗೆ ಉಭಯ ಕಡೆಯವರು ನೀಡಿದ ಪುಕಾರಿನ ಮೇರೆ ಸೋಮವಾರಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಅಕ್ರಮ ಲಾಟರಿ ಮಾರಾಟ ಪ್ರಕರಣ

            ದಿನಾಂಕ: 21-04-2022 ರಂದು ವಿರಾಜಪೇಟೆ ಪಟ್ಟಣದ ಕೆ.ಎಸ್‌.ಆರ್‌.ಟಿ.ಸಿ ಬಸ್‌ ನಿಲ್ದಾಣದ ಬಳಿ ಸಾರ್ವಜನಿಕರಿಗೆ ಅಕ್ರಮವಾಗಿ ಲಾಟರಿ ಟಿಕೆಟ್‍ಗಳನ್ನು ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ವಿರಾಜಪೇಟೆ ನಗರ ಠಾಣೆ ಪಿ.ಎಸ್‍.ಐ ಜಗದೀಶ್ ಧೂಲಶೆಟ್ಟಿ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಬಿಜು ಎಂಬುವವರ ವಿರುದ್ದ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 

ಇತ್ತೀಚಿನ ನವೀಕರಣ​ : 22-04-2022 08:04 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080