ಅಭಿಪ್ರಾಯ / ಸಲಹೆಗಳು

ಹಲ್ಲೆ ಪ್ರಕರಣ

            ದಿನಾಂಕ: 20-11-2021 ರಂದು ರಾತ್ರಿ ಪೊನ್ನಂಪೇಟೆ ತಾಲ್ಲೂಕು ಹಾತೂರು ಗ್ರಾಮದ ನಿವಾಸಿ ಮಂಜು ಎಂಬುವವರಿಗೆ ಅವರ ಪಕ್ಕದ ಮನೆಯ ನಿವಾಸಿ ಮಣಿ ಎಂಬುವವರು ಕ್ಷುಲ್ಲಕ ಕಾರಣಕ್ಕೆ ಕೊಲೆ ಮಾಡುವ ಉದ್ದೇಶದಿಂದ ಕತ್ತಿಯಿಂದ ಕಡಿದು ಗಾಯಪಡಿಸಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಗೋಣಿಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಜಾನುವಾರುಗಳಿಗೆ ಹಿಂಸೆ ಪ್ರಕರಣ

            ದಿನಾಂಕ: 20-11-2021 ರಂದು ರಾತ್ರಿ ದಿಡ್ಡಳ್ಳಿ ನಿವಾಸಿ ಹರಿಪ್ರಸಾದ್‌ ಎಂಬುವವರ ದನದ ಕೊಟ್ಟಿಗೆಗೆ ಅದೇ ಗ್ರಾಮದ ನಿವಾಸಿ ಪುನೀತ್‌ ಎಂಬುವವನು ಅಕ್ರಮ ಪ್ರವೇಶ ಮಾಡಿ ಕೊಟ್ಟಿಗೆಯಲ್ಲಿ ಕಟ್ಟಿದ್ದ ಹಸುಗಳಿಗೆ ಕತ್ತಿಯಿಂದ ಕಡಿದು ಗಾಯಗೊಳಿಸಿ ಹಿಂಸೆ ನೀಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಸಿದ್ದಾಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ರಸ್ತೆ ಅಪಘಾತ, ಮಹಿಳೆ ಸಾವು.

            ದಿನಾಂಕ: 21-11-2021 ರಂದು ಪೊನ್ನಂಪೇಟೆ ತಾಲ್ಲೂಕು ಭದ್ರಗೊಳ ಗ್ರಾಮದ ಬಳಿ ಮುಖ್ಯ ರಸ್ತೆಯಲ್ಲಿ ಕೆಎ-12-ಎಂಎ-7523 ರ ಕಾರನ್ನು ಅದರ ಚಾಲಕ ಮುಂದೆ ಹೋಗುತ್ತಿರುವಾಗ ಯಾವುದೇ ಸೂಚನೆ ನೀಡದೆ ಏಕಾಏಕಿ ರಸ್ತೆಯ ಬಲಭಾಗಕ್ಕೆ ತಿರುಗಿಸಿದ ಪರಿಣಾಮ ಹಿಂದೆ ಹೋಗುತ್ತಿದ್ದ ಕೆಎ-03-ಎನ್‌ಎಫ್-2089‌ ರ ಕಾರು  ಮುಂದಿನ ಕಾರಿಗೆ ಡಿಕ್ಕಿಯಾಗಿ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿಯಾಗಿ ಮಗುಚಿಬಿದ್ದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಪ್ರಯಾಣಿಕರು ಗಾಯಗೊಂಡು ಓರ್ವ ಮಹಿಳೆ ಮೃತಪಟ್ಟಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಗೋಣಿಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 22-11-2021 06:43 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080