ಅಭಿಪ್ರಾಯ / ಸಲಹೆಗಳು

ಹಲ್ಲೆ ಪ್ರಕರಣ

            ದಿನಾಂಕ: 22-02-2022 ರಂದು ಕುಶಾಲನಗರ ತಾಲ್ಲೂಕು ಸುಂದರನಗರ ಗ್ರಾಮದ ನಿವಾಸಿ ಪ್ರೇಮ್‍ಕುಮಾರ್ ಎಂಬುವವರಿಗೆ ಚಿಕ್ಕತ್ತೂರು ಗ್ರಾಮದ ನಿವಾಸಿಗಳಾದ ತೀರ್ಥಾನಂದ, ಅಭಿಶೇಕ್, ರೋಹಿತ್ ಮತ್ತು ರವಿ ಎಂಬುವವರು ವಿನಾ ಕಾರಣ ಜಗಳ ತೆಗೆದು ಅವಾಚ್ಯ ಪದಗಳಿಂದ ಬೈದು ಹಲ್ಲೆ ಮಾಡಿ ಗಾಯಪಡಿಸಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಕುಶಾಲನಗರ ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಕಳವು ಪ್ರಕರಣ

            ದಿನಾಂಕ 22-02-2022 ರಂದು ಸೋಮವಾರಪೇಟೆ ಪಟ್ಟಣದ ನಿವಾಸಿ ಜಾರ್ಜ್‍ ಎಂಬುವವರು ಯೂನಿಯನ್‍ ಬ್ಯಾಂಕ್‍ ಆಫ್‍ ಇಂಡಿಯಾ ದಿಂದ ಹಣ ಡ್ರಾ ಮಾಡಿಕೊಂಡು ಅವರ ಸ್ಕೂಟರ್‍ ನ ಸೀಟ್‍ ಅಡಿಯಲ್ಲಿ ಇಟ್ಟುಕೊಂಡು ಹೋಗಿ ಸ್ಕೂಟರನ್ನು ಎಂ.ಜಿ ರಸ್ತೆಯಲ್ಲಿರುವ ಅವರ ಅಂಗಡಿಯ ಮುಂದೆ ನಿಲ್ಲಿಸಿದ್ದರು. ಸ್ವಲ್ಪ ಸಮಯದ ನಂತರ ಹಣವನ್ನು ಮತ್ತೊಂದು ಬ್ಯಾಂಕ್‍ಗೆ ಜಮಾ ಮಾಡಲು ಹೋಗಿ ಸ್ಕೂಟರ್‍ ಸೀಟ್‍ ತೆಗೆದು ನೋಡಿದಾಗ ಯಾರೋ ಕಳ್ಳರು ₹. 2,42,000 ಹಣವನ್ನು ಕಳವು ಮಾಡಿಕೊಂಡು ಹೋಗಿರುವುದು ಕಂಡು ಬಂದಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಸೋಮವಾರಪೇಟೆ  ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 23-02-2022 10:09 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080