ಅಭಿಪ್ರಾಯ / ಸಲಹೆಗಳು

ಕೊಲೆ ಪ್ರಕರಣ ಪತ್ತೆ, ಆರೋಪಿ ಬಂಧನ.

            ಮಡಿಕೇರಿ ತಾಲ್ಲೂಕು ಕೆ.ನಿಡುಗಣೆ ಗ್ರಾಮದ ಮನೆಯೊಂದರಲ್ಲಿ ವಾಸವಿದ್ದ ಒಂಟಿ ಮಹಿಳೆಯೊಬ್ಬರನ್ನು ಕೊಲೆ ಮಾಡಿ  ನಗದು ಚಿನ್ನಾಭರಣ ಕಳವು ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಮಡಿಕೇರಿ ಉಪವಿಭಾಗ ಮತ್ತು ಜಿಲ್ಲಾ ಡಿ.ಸಿ.ಐ.ವಿ ವಿಭಾಗದ ಪೊಲೀಸ್‍ ಅಧಿಕಾರಿ ಮತ್ತು ಸಿಬ್ಬಂದಿಯವರ ತಂಡ ಯಶಸ್ವಿಯಾಗಿದ್ದಾರೆ.

      ದಿನಾಂಕ 22-02-2021 ರಂದು ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕೆ.ನಿಡುಗಣೆ ಗ್ರಾಮದ ಮಹೀಂದ್ರಾ ರೆಸಾರ್ಟ್ ಸಮೀಪ ತನ್ನ ಮನೆಯಲ್ಲಿ ವಾಸವಿದ್ದ ಸುಮಾರು 70  ವರ್ಷ ಪ್ರಾಯದ ಒಂಟಿ ಮಹಿಳೆಯನ್ನು ಕೊಲೆಮಾಡಿ ಚಿನ್ನಾಭರಣಗಳನ್ನು ಕಳ್ಳತನ ಮಾಡಿಕೊಂಡು ಹೋಗಿರುವ ಬಗ್ಗೆ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

      ಪ್ರಕರಣದ ಆರೋಪಿ ಪತ್ತೆಯ ಬಗ್ಗೆ ಡಿಸಿಐಬಿ ಹಾಗೂ ಮಡಿಕೇರಿ ಉಪವಿಭಾಗದ ಠಾಣೆಗಳ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳ ತಂಡವನ್ನು ರಚಿಸಲಾಗಿತ್ತು. ಪ್ರಕರಣದ ಆರೋಪಿಯ ಬಗ್ಗೆ  ಪ್ರಾಥಮಿಕ ತನಿಖಾ ಹಂತದಲ್ಲಿ ಯಾವುದೇ ಸುಳಿವು ಲಭ್ಯವಿರದೆ  ಕ್ಲಿಷ್ಟಕರವಾಗಿದ್ದು ಆರೋಪಿ ಪತ್ತೆಯ ಬಗ್ಗೆ ರಚಿಸಲಾಗಿದ್ದ ತಂಡಗಳು ವಿವಿಧ ಆಯಾಮಗಳಲ್ಲಿ ತನಿಖೆ ಕೈಗೊಂಡು  ಖಚಿತ ಮಾಹಿತಿ ಸಂಗ್ರಹಿಸಿ ಮಡಿಕೇರಿಯ ಪ್ರಸಿದ್ದ ಖಾಸಗಿ ರೆಸಾರ್ಟ್ ನಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆ ಮೂಡಬಿದ್ರೆಯ ಮೂಲದ ಆರೋಪಿ ಅನಿಲ್ ಎಂಬಾತನನ್ನು ದಿನಾಂಕ 22-03-2021 ರಂದು ಪತ್ತೆಹಚ್ಚಿ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಒಂಟಿ ಮಹಿಳೆಯನ್ನು ಕಬ್ಬಿಣದ ರಾಡಿನಿಂದ ಹೊಡೆದು ಕೊಲೆ ಮಾಡಿ ಚಿನ್ನಾಭರಣಗಳನ್ನು ಹಾಗೂ ನಗದನ್ನು  ದೋಚಿಕೊಂಡು ಹೋಗಿರುವುದು ಧೃಡಪಟ್ಟಿರುತ್ತದೆ.

             ಬಂಧಿತ ಆರೋಪಿಯು ಮೆಕಾನಿಕಲ್ ಇಂಜಿನಿಯರ್ ಪದವೀಧರನಾಗಿರುತ್ತಾನೆ. ಈತನು ಮೂಡಬಿದ್ರೆ ಹಾಗೂ ಮಂಗಳೂರಿನ ಜ್ಯೂವೆಲರಿ ಶಾಪ್ ಗಳಲ್ಲಿ  ಮಾರಾಟ ಮಾಡಿದ ಸುಮಾರು 72 ಗ್ರಾಂ. ಚಿನ್ನಾಭರಣಗಳನ್ನು (ಅಂದಾಜು ಮೌಲ್ಯ 2ಲಕ್ಷದ 80 ಸಾವಿರ) ಹಾಗೂ ಈತನ ಬಳಿಯಿದ್ದ  ನಗದು 4000/-ರೂ. ಕೃತ್ಯಕ್ಕೆ ಬಳಸಿದ ಆಯುಧ ಮತ್ತು ಮೋಟಾರ್ ಸೈಕಲನ್ನು ವಶಪಡಿಸಿಕೊಳ್ಳಲಾಗಿದೆ.

              ಈ ಪ್ರಕರಣದ ಕಾರ್ಯಾಚರಣೆಯಲ್ಲಿ ಮಡಿಕೇರಿ ಉಪವಿಭಾಗದ ಡಿವೈ.ಎಸ್.ಪಿ ಬಿ.ಪಿ. ದಿನೇಶ್ ಕುಮಾರ್ ರವರ ನೇತೃತ್ವದಲ್ಲಿ ಮಡಿಕೇರಿ ಗ್ರಾಮಾಂತರ ಠಾಣೆಯ ಇನ್ಸ್ಪೆಕ್ಟರ್ ರವಿಕಿರಣ್, ಸಿಬ್ಬಂದಿಯವರಾದ ರವಿಕುಮಾರ್, ಮಂಜುನಾಥ್, ದಿನೇಶ್, ಸೋಮಶೇಖರ್ ಸಜ್ಜನ್, ಡಿಸಿಐಬಿ ಎಎಸ್ಐ ಹಮೀದ್, ಸಿಬ್ಬಂದಿಗಳಾದ ಅನಿಲ್ ಕುಮಾರ್, ವೆಂಕಟೇಶ್, ವಸಂತ, ಸುರೇಶ್, ಯೋಗೇಶ್ ಕುಮಾರ್, ನಿರಂಜನ್, ಶರತ್ ರೈ, ಶಶಿಕುಮಾರ್, ಸಿದ್ದಾಪುರ ಠಾಣೆಯ ಎಎಸ್ಐ ತಮ್ಮಯ್ಯ, ಸಿಬ್ಬಂದಿ ಲವಕುಮಾರ್, ಸಿಡಿಆರ್ ಸೆಲ್ ನ  ರಾಜೇಶ್ ,ಗಿರೀಶ್ ರವರುಗಳು  ಭಾಗವಹಿಸಿದ್ದು ಇವರ ಕಾರ್ಯವನ್ನು ಶ್ಲಾಘಿಸಲಾಗಿದೆ.

             ಕೊಡಗು ಜಿಲ್ಲಾ ವ್ಯಾಪ್ತಿಯ ಕೆಲವೊಂದು ಕಡೆಗಳಲ್ಲಿ ಕೆಲವೊಬ್ಬರು ಒಬ್ಬಂಟಿಗಳಾಗಿ ವಾಸವಿದ್ದು ಅಪರಿಚಿತರ  ಬಗ್ಗೆ ಎಚ್ಚರದಿಂದಿರುವಂತೆ ಹಾಗೂ  ಅಪರಿಚಿತರ ಚಲನವಲನದ ಬಗ್ಗೆ ಸಂಶಯ ಬಂದಲ್ಲಿ ಹತ್ತಿರದ ಪೊಲೀಸ್ ಠಾಣೆಗೆ  ಮಾಹಿತಿ ತಿಳಿಸಿ ಅಪರಾಧ ತಡೆಯಲು ಹಾಗು ಪತ್ತೆ ಹಚ್ಚಲು ಸಹಕರಿಸುವಂತೆ ಸಾರ್ವಜನಿಕರಲ್ಲಿ ಕೋರಲಾಗಿದೆ.

ರಸ್ತೆ ಅಪಘಾತ ಪ್ರಕರಣ           

                ದಿನಾಂಕ: 21-03-2021 ರಂದು ವಿರಾಜಪೇಟೆ ಪಟ್ಟಣದ ಚಿಕ್ಕಪೇಟೆ ಬಳಿ ಮುಖ‍್ಯ ರಸ್ರೆಯಲ್ಲಿ ಒಂದು ಮಾರುತಿ ಸ್ವಿಫ್ಟ್‍ ಕಾರನ್ನು ಅದರ  ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಕೆಎ-12-ಎಸ್‍-6563 ರ ಸ್ಕೂಟರ್‍ ಗೆ ಡಿಕ್ಕಿಪಡಿಸಿದ ಪರಿಣಾಮ ಸವಾರ ಭರತ್‍ ಕುಮಾರ್‍ ಎಂಬುವವರು ಬಿದ್ದು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ವಿರಾಜಪೇಟೆ ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಕಾರು ಕಳವು ಪ್ರಕರಣ

                ದಿನಾಂಕ: 21-03-2021 ರಂದು ವಿರಾಜಪೇಟೆ ಪಟ್ಟಣದ ಮೀನುಪೇಟೆ ನಿವಾಸಿ ಸನೀಶ್‍ ಎಂಬುವವರು ಅವರ ಅಂಗಡಿಯ ಬಳಿ ನಿಲ್ಲಿಸಿದ್ದ ಸ್ನೇಹಿತ ಅಜಿತ್‍ ಕುಮಾರ್‍ ಎಂಬುವವರಿಗೆ ಸೇರಿದ ಕೆಎ-12-ಎನ್‍-0573 ರ ಮಾರುತಿ ಓಮ್ನಿ ಕಾರನ್ನು ಯಾರೋ ಕಳ‍್ಳರು ಕಳವ ಮಾಡಿಕೊಂಡು ಹೋಗಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ವಿರಾಜಪೇಟೆ ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಅರಣ‍್ಯ ಇಲಾಖೆ ಅಧಿಕಾರಿಗೆ ಕೊಲೆ ಬೆದರಿಕೆ ಪ್ರಕರಣ

                ದಿನಾಂಕ: 21-03-2021 ರಂದು ವಿರಾಜಪೇಟೆ ತಾಲ್ಲೂಕು ಮಾಕುಟ್ಟ ವಲಯ ಅರಣ್ಯಾಧಿಕಾರಿ ಯವರಾದ ಶಿವಕುಮಾರ್‍ ರವರು ಸಿಬ್ಬಂದಿಯವರೊಂದಿಗೆ ಕಛೇರಿಯಲ್ಲಿರುವಾಗ ಕೆಎ-12-ಪಿ-8108 ರ ಬೊಲೆರೋ ಜೀಪಿನಲ್ಲಿ ಚೇಮಿರ ಪ್ರಕಾಶ ಮತ್ತು ಇತರ 3 ಜನರು ಹೋಗಿ ಪ್ರಕರಣವೊಂದರಲ್ಲಿ ಆರೋಪಿಯನ್ನು ದಸ್ತಗಿರಿ ಮಾಡಿರುವ ವಿಚಾರದಲ್ಲಿ ಅವಾಚ್ಯ ಪದಗಳಿಂದ ಬೈದು ಜೀಪು ಹತ್ತಿಸಿ ಕೊಲೆ ಮಾಡುವುದಾಗಿ ಕೊಲೆ ಬೆದರಿಕೆ ಹಾಕಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ವಿರಾಜಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 23-03-2021 07:19 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080