ಅಭಿಪ್ರಾಯ / ಸಲಹೆಗಳು

ಅಶ್ಲೀಲ ದೃಶ್ಯಾವಳಿ ವಿನಿಮಯ ಪ್ರಕರಣ

            ಅಪ್ರಾಪ್ತ ವಯಸ್ಕರನ್ನು ಪ್ರಲೋಭನೆಗೆ ಒಳಪಡಿಸಿ ಲೈಂಗಿಕ ಚಟುವಟಿಕೆಯಲ್ಲಿ ತೊಡಗಿಸಿದ ದೃಶ್ಯಾವಳಿಗಳನ್ನು ವಶದಲ್ಲಿಟ್ಟಿಕೊಂಡು ಆನ್‌ಲೈನ್‌ ಮೂಲಕ ವಿನಿಮಯ, ಪ್ರಸಾರ, ಮಾರಾಟ ಹಾಗೂ ವಾಣಿಜ್ಯ ವ್ಯವಹಾರಗಳಿಗೆ  ಬಳಸಿಕೊಂಡಿರುವ ಬಗ್ಗೆ ರಾಜ್ಯ ಸಿಐಡಿ ವಿಭಾಗದ ಮೂಲಕ ರಾಷ್ಟ್ರೀಯ ಅಪರಾಧ ದಾಖಲಾತಿ ವಿಭಾಗವು ಕಳುಹಿಸಿದ ಮಾಹಿತಿಯನ್ನು ಆದರಿಸಿ ಕೊಡಗು ಸೈಬರ್‌ ಅಪರಾಧ ಠಾಣೆ ಪೊಲೀಸರು ಪರಿಶೀಲಿಸಿ ಉದಯಕುಮಾರ  ತಂದೆ ಮಾದಪ್ಪ ನಾಯಕ್, ಬಾಲಂಬಿ, ಚೆಂಬು ಗ್ರಾಮ, ಮಡಿಕೇರಿ ತಾಲ್ಲೂಕು ಇವರ ವಿರುದ್ದ ದಿನಾಂಕ: 22-03-2022 ರಂದು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

            ಅಪ್ರಾಪ್ತರ ಮೇಲಿನ ಸಹಮತಿಯ ಲೈಂಗಿಕ ದೌರ್ಜನ್ಯವೂ ಕೂಡ  ಘೋರ ಅಪರಾಧವಾಗಿದ್ದು ಇಂತಹ ಕೃತ್ಯಗಳನ್ನು ಚಿತ್ರೀಕರಿಸುವುದು, ಚಿತ್ರೀಕರಿಸಿದ ದೃಶ್ಯಗಳನ್ನು ಡಿಜಿಟಲ್‌ ಅಥವಾ ಇತರೆ ರೂಪದಲ್ಲಿ ಇಟ್ಟುಕೊಳ್ಳುವುದು, ಇಂತಹ ದೃಶ್ಯಗಳ ಆನ್‌ಲೈನ್‌ ವಿನಿಮಯ, ಪ್ರಸಾರ, ಮಾರಾಟ ಹಾಗೂ ವಾಣಿಜ್ಯ ವ್ಯವಹಾರಗಳಿಗೆ  ಬಳಸಿಕೊಳ್ಳುವುದು ಘೋರ ಅಪರಾಧವಾಗಿರುತ್ತದೆ. ಇಂತಹ ಕೃತ್ಯಗಳ ಮೇಲೆ ಸೈಬರ್‌ ಅಪರಾಧ ಪೊಲೀಸರು ನಿಗಾವಹಿಸಿ ಮಾಹಿತಿ ಸಂಗ್ರಹಣೆ ಮಾಡುತ್ತಿದ್ದು ಸಾರ್ವಜನಿಕರು ಇಂತಹ ಅಪರಾಧಗಳಲ್ಲಿ ತೊಡಗಿಸಿಕೊಳ್ಳದಂತೆ ಎಚ್ಚರಿಕೆ ನೀಡಲಾಗಿದೆ. ಇಂತಹ ಕೃತ್ಯಗಳು ಕಂಡುಬಂದಲ್ಲಿ ಪೊಲೀಸ್‌ ಇಲಾಖೆಗೆ ಮಾಹಿತಿ ನೀಡುವಂತೆ ಕೋರಲಾಗಿದೆ.

 ಕಳವು ಪ್ರಕರಣ

            ದಿನಾಂಕ: 22-03-2022 ರಂದು ಸೋಮವಾರಪೇಟೆ ತಾಲ್ಲೂಕು ನಂದಿಗುಂದ ಗ್ರಾಮದ ನಿವಾಸಿ ಮಾದಪ್ಪ ಎಂಬುವವರ ಮನೆಯ ಹಿಂಬಾಗಿಲನ್ನು ಯಾರೋ ಕಳ್ಳರು ಮುರಿದು ಒಳನುಗ್ಗಿ ಬೀರುವಿನಲ್ಲಿಟ್ಟಿದ್ದ  2 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಮತ್ತು ₹. 70,000 ನಗದು ಹಣವನ್ನು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಶನಿವಾರಸಂತೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ರಸ್ತೆ ಅಪಘಾತ ಪ್ರಕರಣ

            ದಿನಾಂಕ: 22.03.2022 ರಂದು ಪೊನ್ನಂಪೇಟೆ ತಾಲ್ಲೂಕು ಹಾತೂರು ಗ್ರಾಮದ ಬಳಿ ಮುಖ್ಯ ರಸ್ತೆಯಲ್ಲಿ ಕೆಎ-09-ಇಜೆ-3833 ರ ಬೈಕನ್ನು ಚಾಲಕ ಅಕ್ರಂ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ  ಮಾಡಿಕೊಂಡು ಹೋಗಿ ರಸ್ತೆ ಬದಿಯ ಮರಕ್ಕೆ ಡಿಕ್ಕಿಪಡಿಸಿದ ಪರಿಣಾಮ ಬೈಕ್‍ ಸವಾರ ಮತ್ತು ಹಿಂಬದಿ ಸವಾರ ಖಿಜರ್‍ ಪಾಷಾ ಎಂಬುವವರು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಗೋಣಿಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಹಲ್ಲೆ ಪ್ರಕರಣ    

            ದಿನಾಂಕ: 22-03-2022 ರಂದು ವಿರಾಜಪೇಟೆ ಪಟ್ಟಣದ ತೆಲುಗರ ಬೀದಿ ನಿವಾಸಿ ಚಂದ್ರು ಎಂಬುವವರು ಆಟೋ ಚಾಲನೆ ಕೆಲಸ ಮುಗಿಸಿ ಮನೆಯ ಬಳಿಗೆ ಹೋದಾಗ ಅಲ್ಲಿಗೆ ಅರಸು ನಗರ ನಿವಾಸಿ ಸಂದೀಪ ಎಂಬುವವರು ಕ್ಷುಲ್ಲಕ ಕಾರಣಕ್ಕೆ ಹಲ್ಲೆ ಮಾಡಿ ಕೊಲೆ ಬೆದರಿಕೆ ಹಾಕಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ವಿರಾಜಪೇಟೆ ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಅಕ್ರಮ ಜೂಜಾಟ ಪ್ರಕರಣ

            ದಿನಾಂಕ: 22-03-2022 ರಂದು ಸೋಮವಾರಪೇಟೆ  ತಾಲ್ಲೂಕು ಹಾನಗಲ್ಲು ಗ್ರಾಮದ ಬಳಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಕೋಳಿಗಳನ್ನು ಉಪಯೋಗಿಸಿ  ಜೂಜಾಟಾಡುತ್ತಿದ್ದ ಪ್ರಕರಣವನ್ನು ಸೋಮವಾರಪೇಟೆ  ಠಾಣೆ ಪಿಎಸ್‌ಐ ವಿರೂಪಾಕ್ಷ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.

ರಸ್ತೆ ಅಪಘಾತ ಪ್ರಕರಣ

            ದಿನಾಂಕ: 22-03-2022 ರಂದು ಮಡಿಕೇರಿ ಕುಶಾಲನಗರ ಹೆದ್ದಾರಿ ರಸ್ತೆಯ ಬೋಯಿಕೇರಿ ಬಳಿ ಕೆಎ-09-ಎಫ್‍-5327 ರ ಕೆ.ಎಸ್.ಆರ್‍.ಟಿ.ಸಿ ಬಸ್ಸನ್ನು ಚಾಲಕ ಪ್ರದೀಪ್‍ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ರಸ್ತೆ ಬದಿಯ ಬರೆಗೆ ಡಿಕ್ಕಿಪಡಿಸಿದ ಪರಿಣಾಮ ಪ್ರಯಾಣಿಕರು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 ಅಕ್ರಮ ಮದ್ಯ ಮಾರಾಟ ಪ್ರಕರಣ

                ದಿನಾಂಕ: 22-03-2022 ರಂದು ಮಡಿಕೇರಿ ತಾಲ್ಲೂಕು ಈರೆಳವಳಮುಡಿ  ಗ್ರಾಮದ ನಿವಾಸಿ  ಅಯ್ಯಪ್ಪ ಎಂಬುವವರು ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ  ಮದ್ಯವನ್ನು ಇಟ್ಟುಕೊಂಡು ಸಾರ್ವಜನಿಕರಿಗೆ ಮದ್ಯ ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ಮಡಿಕೇರಿ ಗ್ರಾಮಾಂತರ  ಠಾಣೆ ಅಪರಾಧ ವಿಭಾಗದ ಪಿಎಸ್‌ಐ ವಾಣಿಶ‍್ರೀಮತ್ತು ಸಿಬ್ಬಂದಿಯವರು  ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಿದ್ದಾರೆ.

 

ಇತ್ತೀಚಿನ ನವೀಕರಣ​ : 23-03-2022 04:33 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080