ಅಭಿಪ್ರಾಯ / ಸಲಹೆಗಳು

ಕಳವು ಪ್ರಕರಣ

            ದಿನಾಂಕ: 21-06-2021 ರಂದು ರಾತ್ರಿ ಪೊನ್ನಂಪೇಟೆ ನಿವಾಸಿ ಶಫೀರ್‌ ಎಂಬುವವರ ಮೊಬೈಲ್‌ ಅಂಗಡಿಯ ಕಿಟಕಿಯನ್ನು ಯಾರೋ ಕಳ್ಳರು ಮುರಿದು ಒಳನುಗ್ಗಿ ಅಂಗಡಿಯಲ್ಲಿದ್ದ ₹. 31,700 ಮೌಲ್ಯದ ಮೊಬೈಲ್‌ ಹ್ಯಾಂಡ್‌ ಸೆಟ್‌ ಹಾಗೂ ಇತರ ಎಲೆಕ್ಟ್ರಾನಿಕ್‌ ಉಪಕರಣಗಳನ್ನು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಪೊನ್ನಂಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 ಡೀಸೆಲ್‌ ಕಳವು ಪ್ರಕರಣ

            ದಿನಾಂಕ: 22-06-2021 ರಂದು ರಾತ್ರಿ ಬೆಸೂರು,ಹಂಡ್ಲಿ, ಮತ್ತು ಮಾಲಂಬಿ ಗ್ರಾಮಗಲ್ಲಿರುವ ಜಿಯೋ ಕಂಪನಿಯ ಮೊಬೈಲ್‌ ಟವರ್‌ಗಳಿಗೆ ಅಳವಡಿಸಿರುವ ಜೆನರೇಟರ್‌ಗಳಿಂದ ಯಾರೋ ಕಳ್ಳರು  120 ಲೀ ನಷ್ಟು ಡೀಸೆಲ್‌ ಕಳವು ಮಾಡಿಕೊಂಡು ಕೆಎ-13-ಬಿ-7370 ರ ಕಾರಿನಲ್ಲಿ ಸಾಗಾಟ ಮಾಡುತ್ತಿರುವಾಗ ಕಾರು ರಸ್ತೆ ಬದಿಯ ಬರೆಗಡ ಡಿಕ್ಕಿ ಹೊಡೆದು ಕಾರಿನಲ್ಲಿದ್ದವರು ಓಡಿಹೋಗಿದ್ದು ಈ ಬಗ್ಗೆ ಜಿಯೋ ಕಂಪನಿಯ ಟಿಕ್ನಿಷಿಯನ್‌ ಗಗನ್‌ ಎಂಬುವವರು ನೀಡಿದ ಪುಕಾರಿನ ಮೇರೆ ಶನಿವಾರಸಂತೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 ರಸ್ತೆ ಅಪಘಾತ ಪ್ರಕರಣ

            ದಿನಾಂಕ: 22-06-2021 ರಂದು ಸಂಜೆ ಮಡಿಕೇರಿ ತಾಲ್ಲೂಕು ಜೋಡುಪಾಲ ಗ್ರಾಮದ ಬಳಿ ಹೆದ್ದಾರಿ ರಸ್ತೆಯಲ್ಲಿ ಕೆಎ-03-ಎಎ-0503 ರ ಲಾರಿಯನ್ನು ಚಾಲಕ ಪ್ರಸನ್ನ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿದ ಪರಿಣಾಮ ಲಾರಿ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಮಗುಚಿ ಬಿದ್ದುದರಿಂದ ಹರೀಶ್‌ ಎಂಬುವವರು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 23-06-2021 04:03 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ