ಅಭಿಪ್ರಾಯ / ಸಲಹೆಗಳು

ರಸ್ತೆ ಅಪಘಾತ ಪ್ರಕರಣ

            ದಿನಾಂಕ: 22.11.2021 ರಂದು ಕುಶಾಲನಗರದ ಎಸ್‌ಬಿಐ ಬ್ಯಾಂಕ್‌ ಮುಂದಿನ ರಸ್ತೆಯಲ್ಲಿ ಕೆಎ-12-ಆರ್‌-1745 ರ ಬೈಕನ್ನು ಅದರ ಸವಾರ ರಮೇಶ್‌ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಎದುರುಗಡೆಯಿಂದ ಬರುತ್ತಿದ್ದ ಕೆಎ-12-ಇ-6305 ರ ಬೈಕ್‌ಗೆ ಡಿಕ್ಕಿಪಡಿಸಿದ ಪರಿಣಾಮ ಸವಾರ ತಿಮ್ಮಪ್ಪ ಎಂಬುವವರು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಕುಶಾಲನಗರ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ರಸ್ತೆ ಅಪಘಾತ ಪ್ರಕರಣ

            ದಿನಾಂಕ: 22-11-2021 ರಂದು ಪೊನ್ನಂಪೇಟೆ ತಾಲ್ಲೂಕು ಅರವತ್ತೊಕ್ಲು ಗ್ರಾಮದ ಬಳಿ ಮುಖ್ಯ ರಸ್ತೆಯಲ್ಲಿ ಕೆಎ-12-2866 ರ ಪಿಕ್‌ ಅಪ್‌ ವಾಹನವನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಎದುರುಗಡೆಯಿಂದ ಬರುತ್ತಿದ್ದ ಕೆಎ-09-ಜೆಡ್-9852 ರ ಕಾರಿಗೆ ಡಿಕ್ಕಿಪಡಿಸಿದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಗೋಣಿಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ನಕಲಿ ಚಿನ್ನದ ಆಭರಣ ನೀಡಿ ವಂಚನೆ ಪ್ರಕರಣ

            ದಿನಾಂಕ: 17-11-2021 ರಂದು ವಿರಾಜಪೇಟೆಯಲ್ಲಿರುವ ಸ್ವಿಜ್‌ ಜ್ಯುವೆಲರಿ ಮಳಿಗೆಗೆ ಇಬ್ಬರು ಅಪರಿಚಿತ ಮಹಿಳೆಯರು ಹೋಗಿ ₹. 2,20,000 ಮೌಲ್ಯದ ಚಿನ್ನಾಭರಣ ಖರೀದಿಸಿ ಬದಲಿಗೆ ನಕಲಿ ಚಿನ್ನದ ಸರಗಳನ್ನು ನೀಡಿ ಹಾಗೂ ವಿರಾಜಪೇಟೆ ಚಿಕ್ಕಪೇಟೆ ನಿವಾಸಿಗಳೆಂದು ನಕಲಿ ವಿಳಾಸ ನೀಡಿ ವಂಚನೆ ಮಾಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ವಿರಾಜಪೇಟೆ ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 23-11-2021 06:12 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080