ಅಭಿಪ್ರಾಯ / ಸಲಹೆಗಳು

ರಸ್ತೆ ಅಪಘಾತ ಪ್ರಕರಣ

            ದಿನಾಂಕ: 2304-2022 ರಂದು ಮಡಿಕೇರಿ ತಾಲ್ಲೂಕು ಬಲ್ಲಮಾವಟಿ ಗ್ರಾಮದ ಬಳಿ ಮುಖ್ಯ ರಸ್ತೆಯಲ್ಲಿ ಕೆಎ-22-ಸಿ-1382 ರ ವಾಹನವನ್ನು ಚಾಲಕ ಅಫೀಲ್‌ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ರಸ್ತೆ ಬದಿಯಲ್ಲಿ ನಿಂತಿದ್ದ ಪೂಣಚ್ಚ ಎಂಬುವವರಿಗೆ ಡಿಕ್ಕಿಪಡಿಸಿದ ಪರಿಣಾಮ ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ನಾಪೋಕ್ಲು ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಕೊಲೆ ಬೆದರಿಕೆ ಪ್ರಕರಣ

            ದಿನಾಂಕ: 23-04-2022 ರಂದು ಮಡಿಕೇರಿ ತಾಲ್ಲೂಕು ಮದೆನಾಡು ಗ್ರಾಮದ ಬಳಿ ಕೆಎ-09-ಎಂಜೆ-3999  ರ ಕಾರಿನಲ್ಲಿ ಪಾಂಡವಪುರ ಕ್ಷೇತ್ರದ ವಿಧಾನಸಭಾ ಸದಸ್ಯರು ಅವರ ಗನ್‌ ಮ್ಯಾನ್‌ ಮತ್ತು ಚಾಲಕರೊಂದಿಗೆ ಮಂಗಳೂರುಗೆ ಹೋಗುವಾಗ ಕೆಎ-19-ಎಫ್-3403‌ ರ ಕೆ.ಎಸ್‌.ಆರ್.ಟಿ.,ಸಿ ಬಸ್ಸನ್ನು ಚಾಲಕ ಅಮೀರ್‌ ಶಂಶಿ ಎಂಬುವವರು ಕಾರಿಗೆ ಅಡ್ಡಲಾಗಿ ಬಸ್ಸನ್ನು ನಿಲ್ಲಿಸಿ ಬಸ್ಸಿನಿಂದ ಇಳಿದು  ರಸ್ತೆಯಲ್ಲಿ ವಾಹನಕ್ಕೆ ದಾರಿ ಕೊಡುವ ವಿಚಾರದಲ್ಲಿ ಅವಛ್ಯ ಪದಗಳಿಂದ ಬೈದು ಕೊಲೆ ಬೆದರಿಕೆ ಹಾಕಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 ಆಕಸ್ಮಿಕವಾಗಿ ಕೋವಿಯಿಂದ ಗುಂಡು ತಾಗಿ ವ್ಯಕ್ತಿ ಸಾವು.

            ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಕಾಡು ಪ್ರಾಣಿ ಬೇಟೆಗೆ ತೆರಳಿದ್ದ ವೇಳೆ ಕೋವಿಯಿಂದು ಆಕಸ್ಮಿಕ ಗುಂಡು ತಾಗಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ದಿನಾಂಕ: 22.04.2022 ರಂದು ವಿರಾಜಪೇಟೆ ತಾಲ್ಲೂಕು ಬೇಟೋಳಿ ಗ್ರಾಮದ ನಿವಾಸಿಗಳಾದ ರಫೀಕ್, ಆಶ್ರಫ್‌ ಮತ್ತು  ಹಮೀದ್‌ ಎಂಬುವವರು ಕೋವಿಯೊಂದಿಗೆ ಹೆಗ್ಗಳ ಗ್ರಾಮದ ಅರಣ್ಯ ಪ್ರದೇಶಕ್ಕೆ ಬೇಟೆಗೆ ತೆರಳಿದ್ದರು. ಈ ಸಂದರ್ಭ ಮದ್ಯರಾತ್ರಿ ರಫೀಕ್‌ ರವರ ಕೈಯ್ಯಲ್ಲಿದ್ದ ಕೋವಿಯಿಂದ ನಿರ್ಲಕ್ಷತೆಯಿಂದ ಗುಂಡು ಹಾರಿದಾಗ ಹಮೀದ್‌ ಎಂಬುವವರು ಗಾಯಗೊಂಡಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದಾಗ ವೈದ್ಯರು ಪರೀಕ್ಷಿಸಿ ಮೃತಪಪಟ್ಟಿರುವುದಾಗಿ ತಿಳಿಸಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ವಿರಾಜಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 24-04-2022 05:19 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080