ಅಭಿಪ್ರಾಯ / ಸಲಹೆಗಳು

ಹಲ್ಲೆ ಪ್ರಕರಣ

                ದಿನಾಂಕ: 23-05-2021 ರಂದು ಮಡಿಕೇರಿ ತಾಲ್ಲೂಕು ಕರಿಕೆ ಎಳ್ಳುಕೊಚ್ಚಿ ಗ್ರಾಮದ ನಿವಾಸಿಗಳಾದ ರಮನಾಥ್‌, ಅನಿಲ್‌, ರೆಲ್ಸನ್‌, ಬಾಲಚಂದ್ರ ನಾಯರ್‌ ಎಂಬುವವರಿಗೆ ಚೆತ್ತುಕಾಯ ನಿವಾಸಿಗಳಾದ ಜಯಂತ್‌, ಪ್ರಸನ್ನ, ವಿದ್ಯಾಧರ, ಎಂಬುವವರು ಹಳೆ ವೈಷಮ್ಯದಿಂದ ಹಲ್ಲೆ ಮಾಡಿ ಕೊಲೆ ಬೆದರಿಕೆ ಹಾಕಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಭಾಗಮಂಡಲ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಕಳವು ಪ್ರಕರಣ

                ದಿನಾಂಕ: 23-05-2021 ರಂದು ಪೊನ್ನಂಪೇಟೆ ತಾಲ್ಲೂಕು ವೆಸ್ಟ್‌ ನೆಮ್ಮೆಲೆ, ಟಿ.ಶೆಟ್ಟಿಗೇರಿ ಗ್ರಾಮದ ನಿವಾಸಿ ಅರುಣ್‌ ಎನ್‌.ವಿ ಎಂಬುವವರು ಅವೆ ಮನೆಗೆ ಬೀಗ ಹಾಕಿಕೊಂಡು ತೋಟದ ಕೆಲಸಕ್ಕೆ ಹೋಗಿ ವಾಪಾಸ್ಸು ಸಂಜೆ ಬಂದು ನೋಡಿದಾಗ ಯಾರೋ ಕಳ್ಳರು ಮನೆಯ ಹಿಂಬಾಗಿಲಿಗೆ ಹಾಕಿದ್ದ ಬೀಗವನ್ನು ಒಡೆದು ಒಳನುಗ್ಗಿ ಬೀರುವಿನಲ್ಲಿಟ್ಟಿದ್ದ ₹. 45,000 ಹಣವನ್ನು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಶ್ರೀಮಂಗಲ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಲಾಕ್‌ ಡೌನ್‌ ನಿಯಮ ಉಲ್ಲಂಘನೆ ಪ್ರಕರಣ

                ದಿನಾಂಕ: 23-05-2021 ರಂದು ವಿರಾಜಪೇಟೆ ಪಟ್ಟಣದ ತೆಲುಗರ ಬೀದಿಯಲ್ಲಿರುವ ರೀಶೇಪ್‌ ಫಿಟ್‌ ನೆಸ್‌ ಜಿಮ್‌ ಸೆಂಟರ್‌ ನಲ್ಲಿ ಲಕ್ಷ್ಮೀಶ್‌ ಎಂಬುವವರು ಅಕ್ರಮವಾಗಿ ಸಾರ್ವಜನಿಕರಿಗೆ ಮದ್ಯ ಸೇವನೆಗೆ ಅವಕಾಶ ಮಾಡಿಕೊಟ್ಟು ಕೋವಿಡ್‍-19 ಸಾಂಕ್ರಾಮಿಕ ರೋಗ ಹರಡುವಿಕೆ ತಡೆಗಟ್ಟಲು ಸರ್ಕಾರ ನಿಗದಿಪಡಿಸಿರುವ ಮಾರ್ಗಸೂಚಿ ಉಲ್ಲಂಘಿಸಿದ್ದು ಈ ಬಗ್ಗೆ ವಿರಾಜಪೇಟೆ ನಗರ ಠಾಣೆ ಪಿಎಸ್‌ಐ ಬೋಜಪ್ಪ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 24-05-2021 07:11 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ