ಅಭಿಪ್ರಾಯ / ಸಲಹೆಗಳು

ಕೊಲೆ ಪ್ರಕರಣ

                ದಿನಾಂಕ: 23-03-2021 ರಂದು ಪೊನ್ನಂಪೇಟೆ ತಾಲ್ಲೂಕು ಕೆ.ಬಾಡಗ ಗ್ರಾಮದ ತಡಿಯಂಗಡ ತಿಮ್ಮಯ್ಯ ಎಂಬುವವರ ಲೈನ್‍ ಮನೆಯಲ್ಲಿ ವಾಸಿಸುತ್ತಿರುವ ಅಯ್ಯಪ್ಪ ಮತ್ತು ಬೊಳಕ ಎಂಬುವವರ ನಡುವೆ ಕೆರೆಯಲ್ಲಿ ಹಿಡಿದ ಮೀನುಗಳನ್ನು ಹಂಚಿಕೊಳ‍್ಳುವ ವಿಚಾರದಲ್ಲಿ ಪರಸ್ಪರ ಜಗಳ ಮಾಡಿಕೊಂಡು ಬೊಳಕ ರವರು ಅಯ್ಯಪ್ಪರವರಿಗೆ ಕತ್ತಿಯಿಂದ ಹಲ್ಲೆ ಮಾಡಿದ ಪರಿಣಾಮ ಗಾಯಗೊಂಡವರನ್ನು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದು ಈ ಬಗ್ಗೆ ತಿಮ್ಮಯ್ಯ ರವರು ನೀಡಿದ ಪುಕಾರಿನ ಮೇರೆ ಕುಟ್ಟ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಸುಲಿಗೆ ಪ್ರಕರಣ

                ದಿನಾಂಕ: 23-03-2021 ರಂದು ರಾತ್ರಿ ವಿರಾಜಪೇಟೆ ತಾಲ್ಲೂಕು ಬೇತ್ರಿ ಗ್ರಾಮದ ಬಳಿ ಮುಖ್ಯ ರಸ್ತೆಯಲ್ಲಿ ಟಿಎನ್‍-38-ಬಿಟಿ-5711 ರ ಲಾರಿಯಲ್ಲಿ ಚಾಲಕ ಲಿಂಗರಾಜು ಎಂಬುವವರು ಸಿಲ್ವರ್ ಮರದ  ನಾಟಾಗಳನ್ನು ತುಂಬಿಸಿಕೊಂಡು ಹೋಗುತ್ತಿರುವಾಗ ಬೇತ್ರಿ ಗ್ರಾಮದ ನಿವಾಸಿ ಯೂನಸ್‍ ಮತ್ತು ಮತ್ತೊಬ್ಬ ಸ್ವಿಫ್ಟ್‍ ಕಾರಿನಲ್ಲಿ ಹೋಗಿ ಲಾರಿಯನ್ನು ತಡೆದು ಚಾಲಕನನ್ನು ಲಾರಿಯಿಂದ ಕೆಳಗೆ ಇಳಿಸಿ ಹಲ್ಲೆ ಮಾಡಿ ಚಾಲಕನ ಬಳಿ ಇದ್ದ ₹. 11,000 ಹಣವನ್ನು ಕಿತ್ತುಕೊಂಡು ಹೋಗಿದ್ದು ಈ ಬಗ್ಗೆ ಸಂಶುದ್ದೀನ್‍ ಎಂಬುವವರು ನೀಡಿದ ಪುಕಾರಿನ ಮೇರೆ ವಿರಾಜಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಆನ್‍ಲೈನ್‍ ವಂಚನೆ ಪ್ರಕರಣ

                ಮಡಿಕೇರಿ ತಾಲ್ಲೂಕು ಭಾಗಮಂಡಲ ಗ್ರಾಮದ ನಿವಾಸಿ ಮಹಿಳೆಯೊಬ್ಬರು ಬ್ಯಾಂಕ್‍ ಉಳಿತಾಯ ಖಾತೆಯನ್ನು ಹೊಂದಿದ್ದು ಖಾತೆಯನ್ನು ಪೇಟಿಎಂ ಮತ್ತು ಫೋನ್‍ ಪೇ ಎಂಬ ಹನ ವರ್ಗಾವಣೆ ಅಪ್ಲಿಕೇಶನ್ ಗಳೊಂದೆಗೆ ಜೋಡಣೆ ಮಾಡಿಕೊಂಡಿದ್ದು ದಿನಾಂಕ: 12-03-2021 ರಿಂದ 22-03-2021 ರ ನಡುವಿನ ದಿನಗಳಲ್ಲಿ ಯಾರೋ ವಂಚಕರು ₹. 158200 ಹಣವನ್ನು ಬ್ಯಾಂಕ್‍ ಖಾತೆಯಿಂದ ಅವರಿಗೆ ತಿಳಿಯದಂತೆ ತೆಗೆದು ವಂಚನೆ ಮಾಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಕೊಡಗು ಸೈಬರ್‍ ಅಪರಾಧ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಸಾರ್ವಜನಿಕರು ಆನ್ ಲೈನ್ ಹಣಕಾಸು ವ್ಯವಹಾರಕ್ಕಾಗಿ ತಮ್ಮ ಬ್ಯಾಂಕ್ ನ ಅಧಿಕೃತ ಅಪ್ಲಿಕೇಶನ್ ಗಳನ್ನು ಬಳಸುವುದು. ಬ್ಯಾಂಕ್ ಅಥವಾ ಇತರೆ ಹಣಕಾಸು ಸಂಸ್ಥೆಗಳ ಅಧಿಕಾರಿಗಳ ಹೆಸರಿನಲ್ಲಿ ಕರೆ ಮಾಡಿ ಮೋಸದಿಂದ ಆನ್ ಲೈನ್ ಮೂಲಕ ಹಣ ವರ್ಗಾವಣೆ ಮಾಡಿಕೊಂಡು ಸಾರ್ವಜನಿಕರಿಗೆ ವಂಚನೆ ಮಾಡುತ್ತಿರುವ ಪ್ರಕರಣಗಳು ಹೆಚ್ಚು ವರದಿಯಾಗುತ್ತಿದೆ. ಯಾವುದೇ ಅಧಿಕೃತ ಬ್ಯಾಂಕ್ ಅಥವಾ ಹಣಕಾಸು ಸಂಸ್ಥೆಗಳು ಸಾರ್ವಜನಿಕರೊಂದಿಗೆ ಫೋನ್ ಮೂಲಕ ವ್ಯವಹರಿಸುವುದಿಲ್ಲ. ಸಾರ್ವಜನಿಕರು ತಮ್ಮ ಬ್ಯಾಂಕ್ ಖಾತೆ, ಆನ್ ಲೈನ್‍ ಹಣ ವರ್ಗಾವಣೆ, ಎ.ಟಿ.ಎಂ, ಮ್ಯೂಚುವಲ್ ಫಂಡ್, ಉಳಿತಾಯ ಪತ್ರಗಳು ಹಾಗೂ ಇತರ ಯಾವುದೇ  ರೀತಿಯ ಹಣಕಾಸು ವಹಿವಾಟಿನ ಪ್ರಕ್ರಿಯೆಗಳಲ್ಲಿ ತೊಡಕುಂಟಾದಾಗ ನೇರವಾಗಿ ಸಂಬಂದಪಟ್ಟ ಬ್ಯಾಂಕ್ ಅಥವಾ ಹಣಕಾಸು ಸಂಸ್ಥೆಗಳಿಗೆ ತೆರಳಿ ಪರಿಹರಿಸಿಕೊಳ್ಳುವುದು. ಹಣಕಾಸು ಸಂಸ್ಥೆಗಳ ಅಥವಾ ಯು.ಪಿ.ಐ ಆಧಾರಿತ ಆನ್ ಲೈನ್ ಸೇವಾ ಸಂಸ್ಥೆಗಳ ಹೆಸರಿನಲ್ಲಿ ಕರೆ ಮಾಡುವ ವ್ಯಕ್ತಿಗಳು ಬ್ಯಾಂಕ್ ಅಕೌಂಟ್ ನಂಬರ್, ಎ.ಟಿ.ಎಂ ನಂಬರ್, ಸಿವಿವಿ ನಂಬರ್, ಒ.ಟಿ.ಪಿ, ಎಟಿಎಂ ಪಿನ್ ನಂಬರ್, ಗೂಗಲ್ ಪೇ, ಫೋನ್ ಪೇ, ಇತರೆ ಯು.ಪಿ.ಐ ಆಧಾರಿತ ಆನ್ ಲೈನ್ ಹಣಕಾಸು ವರ್ಗಾವಣೆ ಅಪ್ಲಿಕೇಶನ್ ಗಳ ಕ್ಯೂ.ಆರ್ ಕೋಡ್‍ ಸ್ಕ್ಯಾನ್‍ ಮಾಡಲು ಹೇಳಿ ಹಾಗೂ ಕೋಡ್ ಗಳನ್ನು ಕೇಳಿ ಪಡೆದು ವಂಚನೆ ಮಾಡುತ್ತಿದ್ದು ಇಂತಹ ಗೌಪ್ಯ ಸಂಖ್ಯೆಗಳನ್ನು ಯಾರಿಗೂ ನೀಡದಂತೆ ಸೂಚಸಲಾಗಿದೆ.

ಇತ್ತೀಚಿನ ನವೀಕರಣ​ : 25-03-2021 03:06 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ