ಅಭಿಪ್ರಾಯ / ಸಲಹೆಗಳು

25-04-2021

ಕೋವಿಡ್ ನಿಯಮ ಉಲ್ಲಂಘನೆ ಪ್ರಕರಣ

                ದಿನಾಂಕ: 24-04-2021 ರಂದು ಪೊನ್ನಂಪೇಟೆ ತಾಲ್ಲೂಕು ಟಿ.ಶೆಟ್ಟಿಗೇರಿ ಗ್ರಾಮದ ಒಂಟಿಯಂಗಡಿ ಜಂಕ್ಷನ್‍ ಬಳಿ ಸಾರ್ವಜನಿಕರು ಕೋವಿಡ್‍-19 ಸಾಂಕ್ರಾಮಿಕ ರೋಗ ಹರಡುವಿಕೆ ತಡೆಗಟ್ಟಲು ಸರ್ಕಾರ ನಿಗದಿಪಡಿಸಿರುವ ಮಾರ್ಗಸೂಚಿಗಳನ್ನು ಪಾಲನೆ ಮಾಡುತ್ತಿರುವ ಬಗ್ಗೆ ಶ್ರೀಮಂಗಲ ಠಾಣೆ ಪೊಲಿಸರು ಪರಿಶೀಲನೆ ಮಾಡುವಾಗ ಕೆಎ-12-ಯು-2415 ರ ಬೈಕ್ ನಲ್ಲಿ ಎನ್‍.ಟಿ ಮುತ್ತಪ್ಪ ಮತ್ತು ಕೆಎ-12-ಯು-5862 ರ ಬೈಕ್‍ ನಲ್ಲಿ ಬಿ.ಕೆ ಗಣಪತಿ ಎಂಬುವವರು ಪಾಲಿಬೆಟ್ಟದಿಂದ ಬಿರುನಾಣಿಗೆ ಹೋಗುತ್ತಿದ್ದು ಕೋವಿಡ್‍ -19 ರ ಮಾರ್ಗಸೂಚಿಯನ್ನು ಉಲ್ಲಂಗಘಿಸಿರುವ ಬಗ್ಗೆ ಶ‍್ರೀಮಂಘಲ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಕೋವಿಡ್ ನಿಯಮ ಉಲ್ಲಂಘನೆ ಪ್ರಕರಣ

ದಿನಾಂಕ: 24-04-2021 ರಂದು ಮಡಿಕೇರಿ ನಗರಸಭೆ ಎಇಇ(ಪರಿಸರ) ರವರು ನಗರ ಸಭೆ ಅರೋಗ್ಯ ನಿರೀಕ್ಷಕರೊಂದಿಗೆ  ಸಾರ್ವಜನಿಕರು ಕೋವಿಡ್‍-19 ಸಾಂಕ್ರಾಮಿಕ ರೋಗ ಹರಡುವಿಕೆ ತಡೆಗಟ್ಟಲು ಸರ್ಕಾರ ನಿಗದಿಪಡಿಸಿರುವ ಮಾರ್ಗಸೂಚಿಗಳನ್ನು ಪಾಲನೆ ಮಾಡುತ್ತಿರುವ ಬಗ್ಗೆ ಪರಿಶೀಲನೆ ಮಾಡುವಾಗ ಮಡಿಕೇರಿ ನಗರದ ಕೊಡವ ಸಮಾಜದಲ್ಲಿ ನಡೆಯುತ್ತಿದ್ದ ವಿವಾಹ ಸಮಾರಂಭದಲ್ಲಿ 100 ರಿಂದ 120 ಜನರು ಪಾಲ್ಗೊಂಡಿದ್ದು,  ಮಾರ್ಗಸೂಚಿ ಉಲ್ಲಂಘಿಸಿ ನಿಗದಿಗಿಂತ ಹೆಚ್ಚಿನ ಜನರನ್ನು ಸೇರಿಸಿದ್ದ ಚೇರಂಬಾಣೆ ನಿವಾಸಿ ಸಡುವಟ್ಟಿರ ವಸಂತ ಮತ್ತು ಮಡಿಕೇರಿ ನಗರದ ದೇವಾಲಯ ರಸ್ತೆ ನಿವಾಸಿ ತಳೂರು ಈ ಶ್ವರ ಎಂಬುವವರ ವಿರುದ್ದ ನೀಡಿದ ದೂರಿನ ಮೇರೆ ಮಡಿಕೇರಿ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಕೋವಿಡ್ ನಿಯಮ ಉಲ್ಲಂಘನೆ ಪ್ರಕರಣ

                ದಿನಾಂಕ: 24-04-2021 ರಂದು ಮಡಿಕೇರಿ ತಾಲ್ಲೂಕು ಮೂರ್ನಾಡು ಗ್ರಾಮದಲ್ಲಿರುವ ಕೃಷ‍್ಣ ಹೊಟೇಲ್‍ ಮಾಲೀಕರಾದ ಗೋವಿಂದ ಎಂಬುವವರು ಕೋವಿಡ್‍-19 ಸಾಂಕ್ರಾಮಿಕ ರೋಗ ಹರಡುವಿಕೆ ತಡೆಗಟ್ಟಲು ಸರ್ಕಾರ ನಿಗದಿಪಡಿಸಿರುವ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಸಾರ್ವಜನಿಕರಿಗೆ ಹೊಟೇಲ್‍ ನಲ್ಲಿ ಉಪಹಾರ ಸೇವಿಸಲು ಅವಕಾಶ ನೀಡಿದ್ದು ಈ ಬಗ್ಗೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ನೀಡಿದ ದೂರಿನ ಮೇರೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಕೋವಿಡ್ ನಿಯಮ ಉಲ್ಲಂಘನೆ ಪ್ರಕರಣ

                ದಿನಾಂಕ: 24-04-2021 ರಂದು ಮಡಿಕೇರಿ ತಾಲ್ಲೂಕು ಮೂರ್ನಾಡು ಗ್ರಾಮದ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ರವರು ಪೊಲೀಸ್‍ ಅಧಿಕಾರಿಗಳೊಂದಿಗೆ ಸಾರ್ವಜನಿಕರು ಕೋವಿಡ್‍-19 ಸಾಂಕ್ರಾಮಿಕ ರೋಗ ಹರಡುವಿಕೆ ತಡೆಗಟ್ಟಲು ಸರ್ಕಾರ ನಿಗದಿಪಡಿಸಿರುವ ಮಾರ್ಗಸೂಚಿಗಳನ್ನು ಪಾಲನೆ ಮಾಡುತ್ತಿರುವ ಬಗ್ಗೆ ಪರಿಶೀಲನೆ ಮಾಡುವಾಗ ಮೈಸೂರು ಟ್ರೇಡಿಂಗ್‍ ಕಂಪನಿ ಮಾಲೀಕರಾದ ಮುನೀರ್‍ ಎಂಬುವವರು ಅವರ ಅಂಗಡಿಯಲ್ಲಿ ಸಾರ್ವಜನಿಕರು ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಇರುವಂತೆ ಅವಕಾಶ ನೀಡಿ ನಿಯಮ ಉಲ್ಲಂಘನೆ ಮಾಡಿರುವ ಬಗ್ಗೆ ನೀಡಿದ ದೂರಿನ ಮೇರೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 26-04-2021 01:01 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ