ಅಭಿಪ್ರಾಯ / ಸಲಹೆಗಳು

ರಸ್ತೆ ಅಪಘಾತ ಪ್ರಕರಣ

            ದಿನಾಂಕ: 28-04-2021 ರಂದು ಕುಶಾಲನಗರ ತಾಲ್ಲೂಕು ಬಸವನಹಳ್ಳಿ ಗ್ರಾಮದ ಬಳಿ ಹೆದ್ದಾರಿ ರಸ್ತೆಯಲ್ಲಿ ಕೆಎ-42-6491 ರ ಕಾರನ್ನು ಅದರ ಚಾಲಕ ಕಾರ್ತಿಕ್‌ ಎಂಬುವವರು ಕೆಎ-12-ಎಚ್-7206‌ ರ ಬೈಕ್‌ಗೆ ಡಿಕ್ಕಿಪಡಿಸಿದ ಪರಿಣಾಮ ಬೈಕ್‌ ಸವಾರ ಬಿದ್ದು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ದೂರಿನ ಮೇರೆ ಕುಶಾಲನಗರ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಕಳವು ಪ್ರಕರಣ

            ದಿನಾಂಕ: 22-08-2021 ರಿಂದ 23-08-2021 ರ ನಡುವೆ ಮಡಿಕೇರಿ ಗ್ರಾಮಾಂತರ ಠಾಣಾ ಸರಹದ್ದಿನ ಅಭ್ಯತ್‌ ಮಂಗಲ ಗ್ರಾಮದ ನಿವಾಸಿ ಹರಿಣಿ ಬೋಪಯ್ಯ ಎಂಬುವವರ ಮನೆಯ ಹಿಂಬಾಗಿಲನ್ನು ಯಾರೋ ಕಳ್ಳರು ಮುರಿದು ಒಳನುಗ್ಗಿ ಮನೆಯೊಳಗೆ ಇಟ್ಟಿದ್ದ 1 ಲಕ್ಷ ಬೆಲೆಬಾಳುವ ಬಂದೂಕನ್ನು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 ವಂಚನೆ ಪ್ರಕರಣ

            ವಿರಾಜಪೇಟೆ ಪಟ್ಪಣದ ದೊಡ್ಡಟ್ಟಿ ಚೌಕಿಯಲ್ಲಿರುವ ‍ಗೋಕುಲಂ ಫೈನಾನ್ಸ್‌ ಸಂಸ್ಥೆಯ ನೌಕರರಾಗಿದ್ದ ಜಯಪ್ರಸಾದ್ ಎಂಬುವವರು ದಿನಾಂಕ: 26-08-2019 ರಿಂಧ 24-08-2021 ರ ನಡುವೆ ಕಂಪನಿಯ ಗ್ರಾಹಕರಿಂದ ಹಣವನ್ನು ಸಂಗ್ರಹಿಸುವ ಕೆಲಸ ನಿರ್ವಹಿಸುವಾಗ ಗ್ರಾಹಕರಿಗೆ ನಕಲಿ ರಶೀದಿ ನೀಡಿ ಹಣ ಸಂಗ್ರಹಿಸಿ ₹. 21,74,400 ಹಣವನ್ನು ಕಂಪನಿಗ ಪಾವತಿಸದೆ ಹಣ ದುರುಪಯೋಗಪಡಿಸಿಕೊಂಡಿದ್ದು ಈ ಬಗ್ಗೆ ನೀಡಿದ ದೂರಿನ ಮೇರೆ ವಿರಾಜಪೇಟೆ ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 25-08-2021 06:42 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ