ಅಭಿಪ್ರಾಯ / ಸಲಹೆಗಳು

ಹಲ್ಲೆ ಪ್ರಕರಣ

                ದಿನಾಂಕ: 23-10-2021 ರಂದು ಸೋಮವಾರಪೇಟೆ ತಾಲ್ಲೂಕು ಸುಳುಗಳಲೆ ಕಾಲೋನಿ ನಿವಾಸಿ ಗಂಗಮ್ಮ ಎಂಬುವವರಿಗೆ ಅವರ ಪಕ್ಕದ ಮನೆಯ ನಿವಾಸಿಗಳಾದ ಕಾಂತರಾಜು ಮತ್ತು ಅವರ ತಾಯಿ ಮಲ್ಲಿಗೆ ಎಂಬುವವರು ಕ್ಷುಲ್ಲಕ ಕಾರಣಕ್ಕೆ ಕತ್ತಿ ಮತ್ತು ದೊಣ್ಣೆಯಿಂದ ಹಲ್ಲೆ ಮಾಡಿ ಗಾಯಪಡಿಸಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಶನಿವಾರಸಂತೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಸುಲಿಗೆ ಪ್ರಕರಣ

                ದಿನಾಂಕ: 24-10-2021 ರಂದು ಮಡಿಕೇರಿ ತಾಲ್ಲೂಕು ಕಗ್ಗೋಡ್ಲು ಗ್ರಾಮದ ಹುಲಿತಾಳ ರಸ್ತೆಯಲ್ಲಿ ಮಹಿಳೆಯೊಬ್ಬರು  ನಡೆದುಕೊಂಡು ಹೋಗುತ್ತಿರುವಾಗ ಅದೇ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ಬಂದ ಅಪರಿಚಿತ ವ್ಯಕ್ತಿಯೊಬ್ಬ ಮಹಿಳೆಯ ಕುತ್ತಿಗೆಯಲ್ಲಿದ್ದ ಚಿನ್ನದ ಚೈನ್‌ ಕಿತ್ತುಕೊಂಡು ಹೋಗಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಅಕ್ರಮ ಜೂಜಾಟ ಪ್ರಕರಣ   

            ದಿನಾಂಕ: 24-10-2021 ರಂದು ವಿರಾಜಪೇಟೆ ಪಟ್ಟಣದ ಕೆ.ಎಸ್.ಆರ್‌.ಟಿ.ಸಿ ಬಸ್‌ ನಿಲ್ದಾಣದ  ಬಳಿ ಮೊಬೈಲ್‍ ಪೋನಿನಲ್ಲಿ ಕೇರಳ ರಾಜ್ಯದ ಲಾಟರಿ ಫಲಿತಾಂಶ ಆದರಿಸಿ ಸಂಖ‍್ಯೆಗಳ ಮೇಲೆ ಹಣವನ್ನು ಪಣವಾಗಿರಿಸಿಕೊಂಡು ಅಕ್ರಮವಾಗಿ ಜೂಜಾಟವಾಡುತ್ತಿದ್ದ ಪ್ರಕರಣವನ್ನು ವಿರಾಜಪೇಟೆ ಠಾಣೆ ಪಿಎಸ್‍ಐ ಬೋಜಪ್ಪ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.

ಅಕ್ರಮ ಜೂಜಾಟ ಪ್ರಕರಣ   

            ದಿನಾಂಕ: 24-10-2021 ರಂದು ವಿರಾಜಪೇಟೆ ಪಟ್ಟಣದ ಕೆ.ಎಸ್.ಆರ್‌.ಟಿ.ಸಿ ಬಸ್‌ ನಿಲ್ದಾಣದ  ಬಳಿ ಟಿ20 ಕ್ರಿಕೆಟ್‌ ಪಂದ್ಯಾಟದ ಫಲಿತಾಂಶ ಆದರಿಸಿ ಹಣವನ್ನು ಪಣವಾಗಿರಿಸಿಕೊಂಡು ಅಕ್ರಮವಾಗಿ ಜೂಜಾಟವಾಡುತ್ತಿದ್ದ ಪ್ರಕರಣವನ್ನು ವಿರಾಜಪೇಟೆ ಠಾಣೆ ಪಿಎಸ್‍ಐ ಜಗದೀಶ್‌ ಧೂಳಶೆಟ್ಟಿ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.

ಕಳವು ಪ್ರಕರಣ

            ದಿನಾಂಕ 23-10-2021 ರಂದು ವಿರಾಜಪೇಟೆ ತಾಲ್ಲೂಕು ಕಾವಾಡಿ ಗ್ರಾಮದ ನಿವಾಸಿ ದೇವಯ್ಯ ಎಂಬುವವರ ಮನೆಯ ಹಿಂಬಾಗಿಲನ್ನು ಯಾರೋ ಕಳ್ಳರು ಮುರಿದು ಒಳನುಗ್ಗಿ ಮನೆಯಲ್ಲಿಟ್ಟಿದ್ದ ₹. 58,000 ಮೌಲ್ಯದ ಲ್ಯಾ ಪ್‌ ಟಾಪ್‌ ಮತ್ತು ಕಾರಿನ ಟೈರ್‌ ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ವಿರಾಜಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 26-10-2021 10:53 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080