ಅಭಿಪ್ರಾಯ / ಸಲಹೆಗಳು

ರಸ್ತೆ ಅಪಘಾತ, ಮಹಿಳೆ ಸಾವು.

          ದಿನಾಂಕ: 24-02-2021 ರಂದು ಸಂಜೆ ಸೋಮವಾರಪೇಟೆ ತಾಲ್ಲೂಕು ಗುಡುಗಳಲೆ ಗ್ರಾಮದ ಬಳಿ ಮುಖ‍್ಯ ರಸ್ತೆಯಲ್ಲಿ ಯಾವುದೋ ಒಂದು ವಾಹನವನ್ನು ಅದರ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ರಸ್ತೆಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೃದ್ದ ಮಹಿಳೆಯೊಬ್ಬರಿಗೆ ಡಿಕ್ಕಿಪಡಿಸಿದ ಪರಿಣಾಮ ಮೃತಪಟ್ಟಿದ್ದು ಚಾಲಕ ವಾಹನವನ್ನು ನಿಲ್ಲಿಸದೇ ಹೋಗಿದ್ದು ಈ ಬಗ್ಗೆ ಮೃತರ ಮಗ ನಾಗರಾಜ ಎಂಬುವವರು ನೀಡಿದ ದೂರಿನ ಮೇರೆ ಶನಿವಾರಸಂತೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

 ಕೊಲೆ ಪ್ರಕರಣ

          ದಿನಾಂಕ: 23-02-2021 ರಂದು ರಾತ್ರಿ ವಿರಾಜಪೇಟೆ ತಾಲ್ಲೂಕು ಆರ್ಜಿ ಗ್ರಾಮದ ಕಲ್ಲುಬಾಣೆ ನಿವಾಸಿ ಕೇರಳ ಮೂಲದ ಶಿಂಟೋ ಎಂಬುವವರನ್ನು ಅವರೊಂದಿಗೆ ವಾಸವಿದ್ದ ಶ್ರೀಮತಿ ಬೇಬಿ ಎಂಬುವವರು ಇತರೊಂದಿಗೆ ಸೇರಿಕೊಂಡು ಕತ್ತು ಹಿಸುಕಿ ಕೊಲೆ ಮಾಡಿ ಪ್ರಕರಣವನ್ನು ಮುಚ್ಚಿಹಾಕಲು ಅಸಹಜವಾಗಿ ಮೃತಪಟ್ಟಿರುವುದಾಗಿ ಮೊದಲು ದೂರು ನೀಡಿದ್ದರು. ನಂತರ ವೈದ್ಯರು ಮೃತ ಶರೀರದ ಮರಣೋತ್ತರ ಪರೀಕ್ಷೆಯ ನಂತರ  ಮೃತನನ್ನು ಕತ್ತು ಹಿಸುಕಿ ಕೊಲೆ ಮಾಡಿರುವ ಬಗ್ಗೆ ವರದಿಯ ನೀಡಿದ್ದು ಈ ಬಗ್ಗೆ ವಿರಾಜಪೇಟೆ ಪಟ್ಟಣ ಠಾಣೆ ಪೊಲೀಸರು ಕೊಲೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 26-02-2021 04:57 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ