ಅಭಿಪ್ರಾಯ / ಸಲಹೆಗಳು

ರಸ್ತೆ ಅಪಘಾತ ಪ್ರಕರಣ

            ದಿನಾಂಕ 24-03-2022 ರಂದು ಕುಶಾಲನಗರ ಪಟ್ಟಣದ ಗಂಧದಕೋಟೆ ಬಳಿ ಮುಖ್ಯ ರಸ್ತೆಯಲ್ಲಿ ಕೆಎ-12-ಬಿ-4031 ರ ಆಟೋ ರಿಕ್ಷಾವನ್ನು ಚಾಲಕ ಪ್ರಶಾಂತ್‍ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ರಸ್ತೆ ದಾಟುತ್ತಿದ್ದ ಶೌಕತ್‍ ಅಲಿ ಎಂಬುವವರಿಗೆ ಡಿಕ್ಕಿಪಡಿಸಿದ ಪರಿಣಾಮ ಬಿದ್ದು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಕುಶಾಲನಗರ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಆಕಸ್ಮಿಕವಾಗಿ ಮರದಿಂದ ಬಿದ್ದು ವ್ಯಕ್ತಿ ಮರಣ

            ದಿನಾಂಕ: 25-03-2022 ರಂದು ಪೊನ್ನಂಪೇಟೆ ತಾಲ್ಲೂಕು ಹಳ್ಳಿಗಟ್ಟು ಗ್ರಾಮದ ನಿವಾಸಿ ಅಯ್ಯಪ್ಪ ಎಂಬುವವರು ಹರಿಹರ ಗ್ರಾಮದ ಚಿಮ್ಮಣಿರ ಕುಶ ಎಂಬುವವರ ಕಾಫಿ ತೋಟದಲ್ಲಿ ಮರಕಪಾತು ಕೆಲಸ ಮಾಡುತ್ತಿರುವಾಗ ಮರದ ಕೊಂಬೆ ಮುರಿದು ಕೆಳಗೆ ಬಿದ್ದು ಗಾಯಗೊಂಡಿವರನ್ನು ಚಿಕಿತ್ಸೆಗೆ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ. ಮೃತ ಅಯ್ಯಪ್ಪ ರವರು ಕೆಲಸ ಮಾಡುತ್ತಿದ್ದ ತೋಟದ ಮಾಲೀಕರು ಯಾವುದೇ ಮುಂಜಾಗ್ರತೆ ಕ್ರಮ ಕೈಗೊಳ್ಳದೆ ಅಪಾಯಕಾರಿಯಾದ ಮರವನ್ನು ಹತ್ತಿಸಿ ಅಯ್ಯಪ್ಪ ರವರ ಸಾವಿಗೆ ಕಾರಣರಾದ ಬಗ್ಗೆ ಮೃತನ ಸಹೋದರಿ ನೀಡಿದ ಪುಕಾರಿನ ಮೇರೆ ಶ್ರೀಮಂಗಲ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಹಲ್ಲೆ ಪ್ರಕರಣ

            ದಿನಾಂಕ: 25.03.2022 ರಂದು ವಿರಾಜಪೇಟೆ ಪಟ್ಟಣದ ಅರಸುನಗರ ನಿವಾಸಿ ಸೀತಮ್ಮ ಎಂಬುವವರಿಗೆ ಅವರ ಪಕ್ಕದ ಮನೆಯ ನಿವಾಸಿ ಜೀವನ್‍ ಎಂಬುವವರು ಕ್ಷುಲ್ಲಕ ಕಾರಣಕ್ಕೆ ಅವಾಚ್ಯ ಪದಗಳಿಂದ ಬೈದು ಹಲ್ಲೆ ಮಾಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ವಿರಾಜಪೇಟೆ ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ರಸ್ತೆ ಅಪಘಾತ ಪ್ರಕರಣ

            ದಿನಾಂಕ: 25.03.2022 ರಂದು ವಿರಾಜಪೇಟೆ ಪಟ್ಟಣದ ಗೊಣಿಕೊಪ್ಪ ರಸ್ತೆಯಲ್ಲಿ ಕೆಎ-12-6912 ರ ಆಟೋ ರಿಕ್ಷಾವನ್ನು ಚಾಲಕ ಬಾಷಾ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಶಾಲಾ ಬಾಲಕನೊಬ್ಬನಿಗೆ ಡಿಕ್ಕಿಪಡಿಸಿದ ಪರಿಣಾಮ ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ವಿರಾಜಪೇಟೆ ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 26-03-2022 06:11 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080