ಅಭಿಪ್ರಾಯ / ಸಲಹೆಗಳು

ಕಳವು ಪ್ರಕರಣ

                ದಿನಾಂಕ: 24-05-2021 ರಂದು ರಾತ್ರಿ ಪೊನ್ನಂಪೇಟೆ ತಾಲ್ಲೂಕು ಕುಟ್ಟ ಗ್ರಾಮದ ರಂಜಿತ್‌ ಲಾಲ್‌ ಎಂಬುವವರು ಅಂಗಡಿಯ ಬಾಗಿಲಿಗೆ ಹಾಕಿದ್ದ ಬೀಗವನ್ನು ಯಾರೋ ಕಳ್ಳರು ಮುರಿದು ಒಳನುಗ್ಗಿ ₹. 80,000 ಹಣವನ್ನು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಕುಟ್ಟ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ರಸ್ತೆ ಅಪಘಾತ , ಬಾಲಕ ಸಾವು.

                ದಿನಾಂಕ: 25-05-2021 ರಂದು  ಸೋಮವಾರಪೇಟೆ ತಾಲ್ಲೂಕು ಗಣಗೂರು ಗ್ರಾಮದ ಬಳಿ ಮುಖ್ಯ ರಸ್ತೆಯಲ್ಲಿ ಕೆಎ-12-9257 ರ ಆಟೋ ರಿಕ್ಷಾವನ್ನು ಅದರ ಚಾಲಕ ವಿಶ್ವನಾಥ್‌ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಎದುರುಗಡೆಯಿಂದ ಬರುತ್ತಿದ್ದ ಕೆಎ-12-ಎ-8880 ರ ಆಟೋ ರಿಕ್ಷಾಕ್ಕೆ ಡಿಕ್ಕಿಪಡಿಸಿದ ಪರಿಣಾಮ ಬಾಲಕನೋರ್ವ ಮೃತಪಟ್ಟು ಮಹಿಳೆಯೊಬ್ಬರು ಗಂಭೀರ ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಸೋಮವಾರಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಲಾಕ್‌ ಡೌನ್‌ ನಿಯಮ ಉಲ್ಲಂಘನೆ ಪ್ರಕರಣ

                ದಿನಾಂಕ: 25.05.2021  ರಂದು ವಿರಾಜಪೇಟೆ ನಗರದ  ಶಿವಕೇರಿ ಪಂಪ್‌ ಹೌಸ್‌  ಬಳಿ ಸಾರ್ವಜನಿಕ ಸ್ಥಳದಲ್ಲಿ ಕೆಲವು ಯುವಕರು ಬೈಕ್‌ಗಳಲ್ಲಿ ಹೋಗಿ ಗುಂಪು ಕಟ್ಟಿಕೊಂಡು ಸಾಮಾಜಿಕ ಅಂತರ ಪಾಲನೆ ಮಾಡದೇ ಕೋವಿಡ್-‌19 ಸಾಂಕ್ರಾಮಿಕ ರೋಗ ಹರಡುವ ಸಂಭವವಿದ್ದರೂ ಸಹಾ ಕೋವಿಡ್‍-19 ಸಾಂಕ್ರಾಮಿಕ ರೋಗ ಹರಡುವಿಕೆ ತಡೆಗಟ್ಟಲು ಸರ್ಕಾರ ನಿಗದಿಪಡಿಸಿರುವ ಮಾರ್ಗಸೂಚಿ ಉಲ್ಲಂಘಿಸಿದ್ದು ಈ ಬಗ್ಗೆ ವಿರಾಜಪೇಟೆ ನಗರ ಠಾಣೆ ಪಿಎಸ್‌ಐ ಜಗದೀಶ್‌ ಧೂಳಶೆಟ್ಟಿ  ಮತ್ತು ಸಿಬ್ಬಂದಿಯವರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಕೋವಿಡ್ ನಿಯಮ ಉಲ್ಲಂಘನೆ ಪ್ರಕರಣ

                ದಿನಾಂಕ: 25-05-2021 ರಂದು ವಿರಾಜಪೇಟೆ ತಾಲ್ಲೂಕು ಕಡಂಗ ಅರಪಟ್ಟು ಗ್ರಾಮದ ಗೋಳಿ ಕಟ್ಟೆ ನಿವಾಸಿ ನವೀನ್‌ ಎಂಬುವವರು ಕೋವಿಡ್‍-19 ಸಾಂಕ್ರಾಮಿಕ ರೋಗ ಹರಡುವಿಕೆ ತಡೆಗಟ್ಟಲು ಸರ್ಕಾರ ನಿಗದಿಪಡಿಸಿರುವ ಮಾರ್ಗಸೂಚಿ ಉಲ್ಲಂಘಿಸಿ ಕೋಳಿ ಮಾರಾಟ ಮಳಿಗೆಯನ್ನು ತೆರೆದು ಸಾರ್ವಜನಿಕರಿಗೆ ವ್ಯಾಪಾರ ವಹಿವಾಟು ನಡೆಸುತ್ತಿದ್ದ ಮೇರೆ ವಿರಾಜಪೇಟೆ ಗ್ರಾಮಾಂತರ ಠಾಣೆ ಪಿಎಸ್‌ಐ ಸಿದ್ದಲಿಂಗ ಬಾನಸೆ ಮತ್ತು ಸಿಬ್ಬಂದಿಯವರು  ಪರಿಶೀಲನೆ ಮಾಡಿ ನೀಡಿದ ವರದಿ ಮೇರೆ ವಿರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ಧಾರೆ.

ಇತ್ತೀಚಿನ ನವೀಕರಣ​ : 26-05-2021 04:50 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ