ಅಭಿಪ್ರಾಯ / ಸಲಹೆಗಳು

 ಅಕ್ರಮ ಮದ್ಯ ಮಾರಾಟ ಪ್ರಕರಣ

                ದಿನಾಂಕ: 25-06-2021 ರಂದು ಸೋಮವಾರಪೇಟೆ ತಾಲ್ಲೂಕು ಗರಗಂದೂರು ಗ್ರಾಮದ ನಿವಾಸಿ  ರಾಮಚಂದ್ರ  ಎಂಬುವವರು ಮಾದಾಪುರ  ಸಂತೆ ಮಾರುಕಟ್ಟೆಯಲ್ಲಿ ಅಕ್ರಮವಾಗಿ  ಮದ್ಯವನ್ನು ಇಟ್ಟುಕೊಂಡು ಸಾರ್ವಜನಿಕರಿಗೆ ಮದ್ಯ ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ಸೋಮವಾರಪೇಟೆ ಠಾಣೆ ಪಿಎಸ್‌ಐ ಶ್ರೀಧರ್‌ ಮತ್ತು ಸಿಬ್ಬಂದಿಯವರು ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಿದ್ದಾರೆ.

ಕಳವು ಪ್ರಕರಣ

                ದಿನಾಂಕ: 10-06-2021 ರಂದು ವಿರಾಜಪೇಟೆ ತಾಲ್ಲೂಕು ಕಡಂಗ ಮರೂರು ಗ್ರಾಮದಲ್ಲಿ ಜಿಯೋ ಮೊಬೈಲ್‌ ಕಂಪನಿಗೆ ಟವರ್‌ ನಿರ್ಮಾಣ ಮಾಡುವ ಸಲುವಾಗಿ ಆಸ್ರ್ಟಾಸ್‌ ಇಂಜಿನಿಯರಿಂಗ್‌ ಪ್ರೈವೇಟ್‌ ಲಿಮಿಟೆಡ್‌ ಕಂಪನಿಯವರು 8 ಟನ್‌ ಸಾಮಾಗ್ರಿಗಳನ್ನು ತಂದು ಜೋಡಿಸಿ ಇಟ್ಟಿದ್ದರು. ಮಳೆ ಇದ್ದುದರಿಂದ ಕೆಲಸ ಪ್ರಾರಂಭ ಮಾಡದೇ ಇದ್ದು ದಿನಾಂಕ: 14-06-2021 ರಂದು ಕೆಲಸಗಾರರು ಹೋಗಿ ನೀಡಿದಾಗ ಜೋಡಿಸಿಟ್ಟಿದ್ದ ಸಾಮಾಗ್ರಿಗಳ ಪೈಕಿ ₹. 1,40,000 ಮೌಲ್ಯದ 1200 ಕೆ.ಜಿ ಸಾಮಾಗ್ರಿಗಳನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿದ್ದು ಈ ಬಗ್ಗೆ ದಿನಾಂಕ 25-06-2021 ರಂದು ಕಂಪನಿಯ ಗುತ್ತಿಗೆದಾರರಾದ ಮಧುಕುಮಾರ್‌ ಎಂಬುವವರು ನೀಡಿದ ಪುಕಾರಿನ ಮೇರೆ ವಿರಾಜಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 26-06-2021 07:43 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080