ಅಭಿಪ್ರಾಯ / ಸಲಹೆಗಳು

ಹಲ್ಲೆ ಪ್ರಕರಣ

                ದಿನಾಂಕ: 26-03-2021 ರಂದು ವಿರಾಜಪೇಟೆ ತಾಲ್ಲೂಕು ಕಂಡಂಗಾಲ ಗ್ರಾಮದ ರುದ್ರಗುಪ್ಪೆ ನಿವಾಸಿ ಗಣೇಶ ಎಂಬುವವರಿಗೆ ಅದೇ ಗ್ರಾಮದ ನಿವಾಸಿ ನಂಜ ಎಂಬುವವರು ಕ್ಷುಲ್ಲಕ ಕಾರಣಕ್ಕೆ ಕತ್ತಿಯಿಂದ ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ವಿರಾಜಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ರಸ್ತೆ ಅಪಘಾತ ಪ್ರಕರಣ

                ದಿನಾಂಕ: 25-03-2021 ರಂದು ಮಡಿಕೇರಿ ನಗರದ  ಕ್ರಿಸ್ಟಲ್‍ ಹಾಲ್ ಬಳಿ ಮುಖ್ಯ ರಸ್ತೆಯಲ್ಲಿ ಕೆಎ-12-ಎಂ3-1641 ರ ಕಾರನ್ನು ಅದರ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಎದುರುಗಡೆಯಿಂದ ಬರುತ್ತಿದ್ದ ಕೆಎ-12-ಕ್ಯೂ-3720 ರ ಸ್ಕೂಟರ್‍ ಗೆ ಡಿಕ್ಕಿಪಡಿಸಿದ ಪರಿಣಾಮ ಹಿಂಬದಿ ಸವಾರ ಮುತ್ತಣ್ಣ ಎಂಬುವವರು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ಮಡಿಕೇರಿ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಆನ್‍ ಲೈನ್‍ ವಂಚನೆ ಪ್ರಕರಣ

                ವಿರಾಜಪೇಟೆ ತಾಲ್ಲೂಕು ಮಗ್ಗುಲ ಗ್ರಾಮದ ನಿವಾಸಿ ವಾಸು ಎಂಬುವವರಿಗೆ ಅಪರಿಚಿತ ವ್ಯಕ್ತಿಯೊಬ್ಬ ಆನ್‍ಲೈನ್‍ ಮುಖಾಂತರ ಆಧಾರ್‍ ಕಾರ್ಡ್‍ ಮಾಡಿಕೊಡುವ ಕಸ್ಟಮರ್‍ ಸರ್ವಿಸ್‍ ಪಾಯಿಂಟ್‍ ಮಾಡಿಕೊಡುವುದಾಗಿ ನಂಬಿಸಿ ₹. 60,500 ಹಣ‍ವನ್ನು ಆತನ ಬ್ಯಾಂಕ್‍ ಖಾತೆಗೆ ಹಾಕಿಸಿಕೊಂಡು ಸರ್ವಿಸ್‍ ಪಾಯಿಂಟ್‍ ಮಾಡಿಕೊಡದೇ ವಂಚನೆ ಮಾಡಿದ್ದು ಈ ಬಗ್ಗೆ ದಿನಾಂಕ: 26-03-2021 ರಂದು ನೀಡಿದ ಪುಕಾರಿನ ಮೇರೆ ಕೊಡಗು ಸೈಬರ್‍ ಅಪರಾಧ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 27-03-2021 06:28 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ