ಅಭಿಪ್ರಾಯ / ಸಲಹೆಗಳು

ಕೊಲೆ ಪ್ರಕರಣ, ಆರೋಪಿಗಳ ಬಂಧನ:

ಕುಶಾಲನಗರ ಗ್ರಾಮಾಂತರ ಠಾಣಾ ವ್ಯಾಪ್ತಿಯ ಸುಂದರ ನಗರದಲ್ಲಿ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿ ಕೃತ್ಯವನ್ನು ಮುಚ್ಚಿಹಾಕಲು ಯತ್ನಿಸಿದ್ದ ಪ್ರಕರಣವನ್ನು ಕುಶಾಲನಗರ ಗ್ರಾಮಾಂತರ ವೃತ್ತದ ಸಿ.ಪಿ.ಐ, ಪಿ.ಎಸ್.ಐ ಮತ್ತು ಸಿಬ್ಬಂದಿಯವರನ್ನೊಳಗೊಂಡ ತಂಡ ಪತ್ತೆ ಮಾಡಿ ಮೂವರು ಆರೋಪಿಗಳನ್ನು ದಸ್ತಗಿರಿ ಮಾಡಿದ್ದಾರೆ.

ದಿನಾಂಕ: 20-04-2022 ರಂದು ಕುಶಾಲನಗರದ ಸುಂದರನಗರದ ನಿವಾಸಿ ಸುರೇಶ್ ಎಂಬುವವರು ಸಹಜವಾಗಿ ಮೃತಪಟ್ಟಿರುವ ಬಗ್ಗೆ ಸಂಬಂದಿಕರಿಗೆ, ಸ್ನೇಹಿತರಿಗೆ ಹಾಗೂ ಗ್ರಾಮಸ್ಥರಿಗೆ ತಿಳಿಸಿ ಮೃತದೇಹವನ್ನು ಅಂತ್ಯ ಸಂಸ್ಕಾರ ಮಾಡಲು ತಯಾರಿ ಮಾಡಿಕೊಂಡಿದ್ದಾಗ ಮೃತನ ಸ್ನೇಹಿತರೊಬ್ಬರು ಮೃತ ದೇಹದ ಕುತ್ತಿಗೆಯ ಮೇಲಿದ್ದ ಗುರುತುಗಳನ್ನು ಗಮನಿಸಿ ಸಾವಿನ ಬಗ್ಗೆ ಅನುಮಾನಗೊಂಡು ತುರ್ತು ಸ್ಪಂದನ ಸಹಾಯ ವ್ಯವಸ್ಥೆ ಯ(ERSS) ದೂರವಾಣಿ ಸಂಖ್ಯೆ 112 ಕ್ಕೆ ಕರೆ ಮಾಡಿ ಮಾಹಿತಿ ನೀಡಿದ ಮೇರೆ ಕೂಡಲೇ ಸ್ಥಳಕ್ಕೆ ತೆರಳಿದ ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸರು ಮೃತ ಶರೀರವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿ ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು. ವಿಧಿವಿಜ್ಞಾನ ತಜ್ಞರು ಮೃತ ಶರೀರದ ಮೇಲೆ ನಡೆಸಿದ ಮರಣೋತ್ತರ ಪರೀಕ್ಷೆಯಿಂದ ಮೃತ ಸುರೇಶ್ ರವರು ಕೊಲೆಯಾಗಿರುವುದು ತಿಳಿದುಬಂದ ಮೇರೆ ದಿನಾಂಕ: 25-04-2022 ರಂದು ಕೊಲೆ ಪ್ರಕರಣ ದಾಖಲಿಸಿಕೊಂಡು ಕುಶಾಲನಗರ ವೃತ್ತ ನಿರೀಕ್ಷಕರು ತನಿಖೆ ಮುಂದುವರಿಸಿದ್ದರು.

ಈ ಪ್ರಕರಣದ ತನಿಖೆ ಕೈಗೊಂಡ ಕುಶಾಲನಗರ ವೃತ್ತ ನಿರೀಕ್ಷಕರು ಮೃತ ಸುರೇಶ್ ರವರ ಕುಟುಂಬದವರನ್ನು ವಿಚಾರಣೆಗೊಳಪಡಿಸಿದಾಗ ಮೃತನ ತಂಗಿ , ಆಕೆಯ ಸಂಬಂಧಿಕ ಹರೀಶ್, ಮತ್ತು ಆಕೆಯ ಸ್ನೇಹಿತ ಮುಳ್ಳುಸೋಗೆ ಜನತಾ ಕಾಲೋನಿ ನಿವಾಸಿ ಮಹೇಶ್ ಎಂಬುವವರು ಸೇರಿಕೊಂಡು ಸುರೇಶನಿಗೆ ಊಟದೊಂದಿಗೆ ನಿದ್ರೆ ಮಾತ್ರೆ ನೀಡಿ, ನಂತರ ಸುರೇಶನ ಕುತ್ತಿಗೆ ಹಿಸುಕಿ ಉಸಿರುಗಟ್ಟಿಸಿ ಕೊಲೆ ಮಾಡಿರುವುದು ತಿಳಿದುಬಂದಿರುತ್ತದೆ. ಮೂವರು ಆರೋಪಿಗಳನ್ನು ದಸ್ತಗಿರಿ ಮಾಡಿ , ಕೃತ್ಯಕ್ಕೆ ಉಪಯೋಗಿಸಿದ ವಾಹನ ಹಾಗೂ ಮೊಬೈಲ್ ಗಳನ್ನು ವಶಕ್ಕೆ ಪಡೆದು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಸೋಮವಾರಪೇಟೆ ಉಪವಿಭಾಗ ಡಿವೈಎಸ್ಪಿ ಶೈಲೇಂದ್ರ ಹೆಚ್,ಎಂ ಇವರ ಮಾರ್ಗದರ್ಶನದಲ್ಲಿ ಕುಶಾಲನಗರ ವೃತ್ತ ನಿರೀಕ್ಷಕರಾದ ಮಹೇಶ್ ಎಂ, ನೇತೃತ್ವದಲ್ಲಿ ಕುಶಾಲನಗರ ಗ್ರಾಮಾಂತರ ಠಾಣೆ ಪಿಎಸ್ಐ ಚಂದ್ರಶೇಖರ್, ಪ್ರೊ. ಪಿ.ಎಸ್ ಐ ನವೀನ್, ಸಿಬ್ಬಂದಿಗಳಾದ ಪ್ರವೀಣ್, ಅಜಿತ್, ಮಂಜುನಾಥ್, ಶನಂತ್, ಯೋಗೇಶ್ ರವರನ್ನೊಳಗೊಂಡ ತಂಡ ಈ ಪ್ರಕರಣವನ್ನು ಬೇದಿಸುವಲ್ಲಿ ಯಶಸ್ವಿಯಾಗಿದ್ದು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯವರ ಕಾರ್ಯವನ್ನು ಶ್ಲಾಘಿಸಲಾಗಿದೆ.

ಅಕ್ರಮ ಮದ್ಯ ಮಾರಾಟ ಪ್ರಕರಣ

                ದಿನಾಂಕ: 26-04-2022 ರಂದು ಸೋಮವಾರಪೇಟೆ ತಾಲ್ಲೂಕು ಬಿಳಿಗೇರಿ ಗ್ರಾಮದ ನಂದಿಮೊಟ್ಟೆ ನಿವಾಸಿ  ಪೊನ್ನಪ್ಪ ಎಂಬುವವರು ಅವರ ಮನೆಯಲ್ಲಿ ಅಕ್ರಮವಾಗಿ  ಮದ್ಯವನ್ನು ಇಟ್ಟುಕೊಂಡು ಸಾರ್ವಜನಿಕರಿಗೆ ಮದ್ಯ ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ಸೋಮವಾರಪೇಟೆ ಠಾಣೆ ಪಿಎಸ್‌ಐ ವಿರೂಪಾಕ್ಷ ಮತ್ತು ಸಿಬ್ಬಂದಿಯವರು  ಪತ್ತೆ ಮಾಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಿದ್ದಾರೆ.

ರಸ್ತೆ ಅಪಘಾತ ಪ್ರಕರಣ

            ದಿನಾಂಕ: 25-04-2022 ರಂದು ವಿರಾಜಪೇಟೆ ತಾಲ್ಲೂಕು ಅರಮೇರಿ ಗ್ರಾಮದ ಬಳಿ ಸಾರ್ವಜನಿಕ ರಸ್ತೆಯಲ್ಲಿ ಕೆಎ-12-ಎಸ್‌-4631 ರ ಬೈಕನ್ನು ಸವಾರ ವಿನೋದ್‌ ಕುಮಾರ್‌ ಎಂಬುವವರು ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗಿ ಸೈಕಲ್‌ ಗೆ ಡಿಕ್ಕಿಪಡಿಸಿದ ಪರಿಣಾಮ ಸೈಕಲ್‌ ಸವಾರ ಉತ್ತಪ್ಪ ಎಂಬುವವರು ಗಾಯಗೊಂಡಿದ್ದು ಈ ಬಗ್ಗೆ ನೀಡಿದ ಪುಕಾರಿನ ಮೇರೆ ವಿರಾಜಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ನವೀಕರಣ​ : 27-04-2022 12:43 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೊಡಗು ಜಿಲ್ಲಾ ಪೊಲೀಸ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080